ಕಾವೇರಿ ಆರತಿಗಾಗಿ ಸ್ನಾನಘಟ್ಟ ಬಳಿ ಶಾಸಕರಿಂದ ಸ್ಥಳ ಪರಿಶೀಲನೆ

| Published : Sep 25 2024, 12:47 AM IST

ಸಾರಾಂಶ

ಇತ್ತೀಚೆಗೆ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಸೇರಿದಂತೆ ಮಂಡ್ಯ, ಮೈಸೂರು ಭಾಗದ ಶಾಸಕರು, ಜನಪ್ರತಿನಿಧಿಗಳು ಹಾಗೂ ಜಿಲ್ಲಾಧಿಕಾರಿ ಸೇರಿದಂತೆ ಅಧಿಕಾರಿಗಳ ತಂಡ ವಾರಣಾಸಿ, ಹರಿದ್ವಾರ, ಕಾಶಿಗೆ ಭೇಟಿ ನೀಡಿ ಅಲ್ಲಿನ ಗಂಗಾ ಆರತಿ ಬಗ್ಗೆ ಅಧ್ಯಯನ ನಡೆಸಿದರು.

ಕನ್ನಡಪ್ರಭ ವಾರ್ತೆ ಶ್ರೀರಂಗಪಟ್ಟಣ

ಗಂಗಾ ಆರತಿ ಮಾದರಿಯಲ್ಲಿ ರಾಜ್ಯದಲ್ಲೂ ಕಾವೇರಿ ಆರತಿ ನಡೆಸಲು ನಿರ್ಧರಿಸಿರುವುದರಿಂದ ಪಟ್ಟಣದ ಸ್ನಾನಘಟ್ಟ ಬಳಿಯ ಕಾವೇರಿ ನದಿ ಬಳಿ ಶಾಸಕರ ರಮೇಶ ಬಂಡಿಸಿದ್ದೇಗೌಡ ಅಧಿಕಾರಿಗಳೊಂದಿಗೆ ಪರಿಶೀಲನೆ ನಡೆಸಿದರು.

ದಸರಾ ಪ್ರಾರಂಭ ಅ.3ರಿಂದ 5 ದಿನಗಳ ಕಾವೇರಿ ಪೂಜೆ ಹಾಗೂ ಕಾವೇರಿ ಆರತಿ ನಡೆಸಲು ಸರ್ಕಾರ ಚಿಂತನೆ ನಡೆಸಿರುವುದರಿಂದ ಶಾಸಕ ರಮೇಶ ಬಂಡಿಸಿದ್ದೇಗೌಡ ಮಂಗಳವಾರ ಸ್ಥಳ ಪರಿಶೀಲನೆ ನಡೆಸಿದರು.

ಇತ್ತೀಚೆಗೆ ಸಚಿವ ಚಲುವರಾಯಸ್ವಾಮಿ ಸೇರಿದಂತೆ ಮಂಡ್ಯ, ಮೈಸೂರು ಭಾಗದ ಶಾಸಕರು, ಜನಪ್ರತಿನಿಧಿಗಳು ಹಾಗೂ ಜಿಲ್ಲಾಧಿಕಾರಿ ಸೇರಿದಂತೆ ಅಧಿಕಾರಿಗಳ ತಂಡ ವಾರಣಾಸಿ, ಹರಿದ್ವಾರ, ಕಾಶಿಗೆ ಭೇಟಿ ನೀಡಿ ಅಲ್ಲಿನ ಗಂಗಾ ಆರತಿ ಬಗ್ಗೆ ಅಧ್ಯಯನ ನಡೆಸಿದರು.

ರಾಜ್ಯದ ಜೀವನಾಡಿ ಕಾವೇರಿ ನದಿಯಲ್ಲೂ ಸಹ ಕಾವೇರಿ ಆರತಿ ನಡೆಸುವ ಸಂಬಂಧ ಶಾಸಕ ರಮೇಶಬಂಡಿಸಿದ್ದೇಗೌಡ ವೇದಬ್ರಹ್ಮ ಡಾ. ಭಾನುಪ್ರಕಾಶ್ ಶರ್ಮಾ, ತಾಪಂ ಇಒ ವೇಣು, ಪುರಸಭೆ ಮುಖ್ಯಾಧಿಕಾರಿ ಎಂ.ರಾಜಣ್ಣ, ಪುರಸಭಾ ಸದಸ್ಯ ಎಂ.ಎಲ್ ದಿನೇಶ್ ಸೇರಿದಂತೆ ಇತರರೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಬಿ.ಎಸ್.ಶಶಿಕುಮಾರ್‌ಗೆ ಪಿಎಚ್‌.ಡಿ

ಕೆ.ಆರ್.ಪೇಟೆ:ಕೃಷ್ಣರಾಜಪೇಟೆ ಮಹಿಳಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಇತಿಹಾಸ ವಿಭಾಗದ ಸಹಾಯಕ ಪ್ರಾಧ್ಯಾಪಕ ಬಿ.ಎಸ್.ಶಶಿಕುಮಾರ್ ಅವರಿಗೆ ತುಮಕೂರು ವಿಶ್ವವಿದ್ಯಾನಿಲಯವು ಪಿಎಚ್‌.ಡಿ ಪದವಿ ನೀಡಿ ಗೌರವಿಸಿದೆ.

ತುಮಕೂರು ವಿಶ್ವವಿದ್ಯಾನಿಲಯದ ಇತಿಹಾಸ ಮತ್ತು ಪುರಾತತ್ವ ಅಧ್ಯಯನ ಮತ್ತು ಸಂಶೋಧನಾ ವಿಭಾಗದಲ್ಲಿ ಪ್ರಾಧ್ಯಾಪಕರಾದ ಪ್ರೊ.ಎಲ್.ಪಿ.ರಾಜು ಮಾರ್ಗದರ್ಶನದಲ್ಲಿ ಕರ್ನಾಟಕದಲ್ಲಿ ಬ್ರಿಟೀಷ್ ವಿರೋಧಿ ಬಂಡಾಯಗಳು 1800 ರಿಂದ 1860 ರವರೆಗೆ ಎಂಬ ವಿಷಯದಲ್ಲಿ ಮಹಾ ಪ್ರಬಂಧವನ್ನು ಮಂಡಿಸಿದ್ದರು.ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಬೆಣಚಿಗೆರೆ ಗ್ರಾಮದ ಶಶಿಕುಮಾರ್‌ಗೆ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ.ಪಿ.ಕೆ.ಧನಂಜಯ, ಪ್ರಾಧ್ಯಾಪಕರು ಮತ್ತು ಸಿಬ್ಬಂದಿ ಸೇರಿದಂತೆ ಅನೇಕ ಗಣ್ಯರು ಅಭಿನಂಧನೆ ಸಲ್ಲಿಸಿದ್ದಾರೆ.