ತಹಸೀಲ್ದಾರ್‌ ನೇತೃತ್ವದಲ್ಲಿ ಮತಗಟ್ಟೆಗಳ ಪರಿಶೀಲನೆ

| Published : Feb 18 2024, 01:33 AM IST

ಸಾರಾಂಶ

ತೇರದಾಳ: ಬರಲಿರುವ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಮತಗಟ್ಟೆಗಳ ಪರಿಶೀಲನೆ ಕಾರ್ಯ ಆರಂಭವಾಗಿದ್ದು, ಪಟ್ಟಣದ ಶ್ರೀಸಿದ್ಧೇಶ್ವರ ಶಾಲೆಯಲ್ಲಿನ ೪ ಮತಗಟ್ಟೆಗಳನ್ನು ರಬಕವಿ-ಬನಹಟ್ಟಿ ತಹಸೀಲ್ದಾರ್ ಗಿರೀಶ ಸ್ವಾದಿ, ತೇರದಾಳ ತಹಸೀಲ್ದಾರ್ ವಿಜಯಕುಮಾರ ಕಡಕೋಳ ಪರಿಶೀಲಿಸಿದರು.

ಕನ್ನಡಪ್ರಭ ವಾರ್ತೆ ತೇರದಾಳ(ರ-ಬ)

ಬರಲಿರುವ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಮತಗಟ್ಟೆಗಳ ಪರಿಶೀಲನೆ ಕಾರ್ಯ ಆರಂಭವಾಗಿದ್ದು, ಪಟ್ಟಣದ ಶ್ರೀಸಿದ್ಧೇಶ್ವರ ಶಾಲೆಯಲ್ಲಿನ ೪ ಮತಗಟ್ಟೆಗಳನ್ನು ರಬಕವಿ-ಬನಹಟ್ಟಿ ತಹಸೀಲ್ದಾರ್ ಗಿರೀಶ ಸ್ವಾದಿ, ತೇರದಾಳ ತಹಸೀಲ್ದಾರ್ ವಿಜಯಕುಮಾರ ಕಡಕೋಳ ಪರಿಶೀಲಿಸಿದರು.

ಈ ವೇಳೆ ಮಾತನಾಡಿದ ತಹಸೀಲ್ದಾರ್ ಗಿರೀಶ ಸ್ವಾದಿ, ಪಟ್ಟಣದಲ್ಲಿ ಒಟ್ಟು ೫೬ ಮತಗಟ್ಟೆಗಳಿದ್ದು, ತೇರದಾಳ ಮತಕ್ಷೇತ್ರದಲ್ಲಿ ಒಟ್ಟು ೨೩೯ ಮತಗಟ್ಟೆಗಳಿದ್ದು, ಎಲ್ಲ ಸರಿಯಾಗಿವೆ. ಆದರೂ ಗಾಳಿ, ಬೆಳಕಿನ ವ್ಯವಸ್ಥೆ, ಮತದಾರರು ಸರದಿ ನಿಲ್ಲುವ ವ್ಯವಸ್ಥೆ ಸೇರಿದಂತೆ ಸಮಗ್ರವಾಗಿ ಪರಿಶೀಲನೆ ಮಾಡಲಾಗುತ್ತಿದೆ. ಅನಧಿಕೃತ ಹಣ ಸೇರಿದಂತೆ ಇತರ ವಸ್ತುಗಳು ಸಾಗಣೆಯಾಗದಂತೆ ಎಚ್ಚರಿಕೆ ವಹಿಸಲು ಪಟ್ಟಣದ ಮೂಲಕ ಸಾಗುವ ಕಲಾದಗಿ-ಕಾಗವಾಡ ರಾಜ್ಯ ಹೆದ್ದಾರಿ ೪ನೇ ಕಾಲುವೆ ಬಳಿಯ ಚೆಕ್ ಪೋಸ್ಟ್ ಸೇರಿದಂತೆ ಎಲ್ಲ ಚೆಕ್‌ಪೋಸ್ಟ್‌ ಗಳಲ್ಲಿ ತೀವ್ರ ನಿಗಾ ಇಡುವಂತೆ ಪೊಲೀಸ್, ಅಬಕಾರಿ ಸೇರಿದಂತೆ ಇಲಾಖೆಗಳಿಗೆ ಸೂಚಿಸಲಾಗಿದೆ ಎಂದರು.

ಉಪತಹಸೀಲ್ದಾರ್ ಶ್ರೀಕಾಂತ ಮಾಯನ್ನವರ, ಗ್ರಾಮ ಆಡಳಿತಾಧಿಕಾರಿ ರೇವಣಸಿದ್ಧಪ್ಪ ಕಾಮತೆ, ಮಹಾದೇವ ಯಲ್ಲಟ್ಟಿ ಸೇರಿದಂತೆ ಅನೇಕರು ಇದ್ದರು.