ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ ನಗರದ ಕೊಟ್ಟಾರ ಚೌಕಿಯಿಂದ ಲೇಡಿಹಿಲ್ ನಾರಾಯಣ ಗುರು ವೃತ್ತದವರೆಗೆ ನೂತನ ಸ್ಮಾರ್ಟ್ ರಸ್ತೆ ನಿರ್ಮಾಣಗೊಳ್ಳಲಿದ್ದು, ಈ ಹಿನ್ನೆಲೆಯಲ್ಲಿ ಸೋಮವಾರ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ, ಮುಡಾ ಆಯುಕ್ತರು, ಅರ್ಕಿಟೆಕ್ಟ್ ಸುಪ್ರೀತ್ ಆಳ್ವ ಹಾಗೂ ಮೂಡ ಅಧಿಕಾರಿಗಳ ಜೊತೆ ಸ್ಥಳಕ್ಕೆ ಭೇಟಿ ನೀಡಿ, ಸಮಗ್ರ ಪರಿಶೀಲನೆ ನಡೆಸಿದರು.

ಮಂಗಳೂರು: ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ ನಗರದ ಕೊಟ್ಟಾರ ಚೌಕಿಯಿಂದ ಲೇಡಿಹಿಲ್ ನಾರಾಯಣ ಗುರು ವೃತ್ತದವರೆಗೆ ನೂತನ ಸ್ಮಾರ್ಟ್ ರಸ್ತೆ ನಿರ್ಮಾಣಗೊಳ್ಳಲಿದ್ದು, ಈ ಹಿನ್ನೆಲೆಯಲ್ಲಿ ಸೋಮವಾರ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ, ಮುಡಾ ಆಯುಕ್ತರು, ಅರ್ಕಿಟೆಕ್ಟ್ ಸುಪ್ರೀತ್ ಆಳ್ವ ಹಾಗೂ ಮೂಡ ಅಧಿಕಾರಿಗಳ ಜೊತೆ ಸ್ಥಳಕ್ಕೆ ಭೇಟಿ ನೀಡಿ, ಸಮಗ್ರ ಪರಿಶೀಲನೆ ನಡೆಸಿದರು.ರಸ್ತೆ ನಿರ್ಮಾಣದ ವೇಳೆ ಎದುರಾಗಬಹುದಾದ ವಿವಿಧ ಸಮಸ್ಯೆಗಳನ್ನು ಪರಿಶೀಲಿಸಿ, ಅವುಗಳಿಗೆ ಸೂಕ್ತ ಪರಿಹಾರ ಕಂಡುಕೊಳ್ಳುವಂತೆ ಹಾಗೂ ಕಾಮಗಾರಿಯನ್ನು ಸುಗಮವಾಗಿ ಅನುಷ್ಠಾನಗೊಳಿಸಲು ಮಂಗಳೂರು ನಗರ ಪಾಲಿಕೆಯೊಡನೆ ಸಮನ್ವಯದೊಂದಿಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಮೂಡ ಅಧ್ಯಕ್ಷರು ಮೂಡ ಅಧಿಕಾರಿಗಳಿಗೆ ಸೂಚನೆ ನೀಡಿದರು.ನಗರದ ಸಂಚಾರ ವ್ಯವಸ್ಥೆಯನ್ನು ಸುಧಾರಿಸಿ ಪಾದಚಾರಿ ಹಾಗೂ ವಾಹನ ಸಂಚಾರಕ್ಕೆ ಸುಗಮ ಹಾಗೂ ಸುಂದರ ರಸ್ತೆ ಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ಈ ಸ್ಮಾರ್ಟ್ ರಸ್ತೆ ಯೋಜನೆ ಮಹತ್ವದ ಕೊಡುಗೆಯಾಗಲಿದೆ ಎಂದು ಸಂತೋಷ್ ಶೆಟ್ಟಿ ತಿಳಿಸಿದ್ದಾರೆ.