ಸಾರಾಂಶ
ಆಯ್ದ ರಸಗೊಬ್ಬರ, ಪೀಡೆನಾಶಕ ಮತ್ತು ಬಿತ್ತನೆ ಬೀಜಗಳ ಮಾದರಿಗಳನ್ನು ತೆಗೆದು ಪ್ರಯೋಗಾಲಯಕ್ಕೆ ವಿಶ್ಲೇಷಣೆಗಾಗಿ ಕಳುಹಿಸಿದರು. ಪರಿಕರ ಮಾರಾಟಗಾರಿಗೆ ಈ ಸಂಬoಧ ಕ್ರಮ ಬದ್ಧವಾಗಿ ವ್ಯವಹರಿಸಲು ನಿರ್ದೇಶಿಸಿದ್ದು, ತಪ್ಪಿದ್ದಲ್ಲಿ ಸೂಕ್ತ ಕ್ರಮ ಜರುಗಿಸಲಾಗುವು ಎಂಬ ಎಚ್ಚರಿಕೆಯನ್ನು ನೀಡಿದರು.
ಕನ್ನಡಪ್ರಭ ವಾರ್ತೆ ಮೈಸೂರು
ಮೈಸೂರು ತಾಲೂಕಿನಾದ್ಯಂತ ವಿವಿಧ ಪರಿಕರ ಮಾರಾಟಗಾರರ ಮಳಿಗೆಗಳಿಗೆ ಸಹಾಯಕ ಕೃಷಿ ನಿರ್ದೇಶಕರು, ಕೃಷಿ ಅಧಿಕಾರಿ ಹಾಗೂ ರಸಗೊಬ್ಬರ, ಬಿತ್ತನೆ ಬೀಜ ಮತ್ತು ಪೀಡೆನಾಶಕ ಪರಿವೀಕ್ಷಕರು ಮಂಗಳವಾರ ದಿಢೀರ್ ಭೇಟಿ ನೀಡಿ ತಪಾಸಣೆ ನಡೆಸಿದರು.ಇದೇ ಸಂದರ್ಭದಲ್ಲಿ ಆಯ್ದ ರಸಗೊಬ್ಬರ, ಪೀಡೆನಾಶಕ ಮತ್ತು ಬಿತ್ತನೆ ಬೀಜಗಳ ಮಾದರಿಗಳನ್ನು ತೆಗೆದು ಪ್ರಯೋಗಾಲಯಕ್ಕೆ ವಿಶ್ಲೇಷಣೆಗಾಗಿ ಕಳುಹಿಸಿದರು. ಪರಿಕರ ಮಾರಾಟಗಾರಿಗೆ ಈ ಸಂಬoಧ ಕ್ರಮ ಬದ್ಧವಾಗಿ ವ್ಯವಹರಿಸಲು ನಿರ್ದೇಶಿಸಿದ್ದು, ತಪ್ಪಿದ್ದಲ್ಲಿ ಸೂಕ್ತ ಕ್ರಮ ಜರುಗಿಸಲಾಗುವು ಎಂಬ ಎಚ್ಚರಿಕೆಯನ್ನು ನೀಡಿದರು.ರೈತರು ಯಾವುದೇ ಕೃಷಿ ಪರಿಕರಗಳನ್ನು ಖರೀದಿಸಿದಾಗ ರಶೀದಿಯನ್ನು ತಪ್ಪದೇ ಪಡೆಯಬೇಕೆಂದು ತಿಳಿಸಿದರು. ಹೆಚ್ಚಿನ ಮಾಹಿತಿಗೆ ತಾಲೂಕಿನ ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಅಥವಾ ಹೋಬಳಿಯ ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಬಹುದು ಎಂದು ಸಹಾಯಕ ಕೃಷಿ ನಿರ್ದೇಶಕ ಬಿ.ಡಿ. ಜಯರಾಮ ತಿಳಿಸಿದರು.