ಸ್ಪೂರ್ತಿ ತುಂಬಿದ ಪರೀಕ್ಷಾ ಪೇ ಚರ್ಚೆ

| Published : Jan 30 2024, 02:04 AM IST

ಸಾರಾಂಶ

ಪರೀಕ್ಷಾ ಭಯ ನಿವಾರಿಸಿ ಒತ್ತಡ ರಹಿತವಾಗಿ ಸಂತಸದಿಂದ ಪರೀಕ್ಷೆ ಬರೆಯಲು ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಪೋಷಕರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ನಡೆಸಿಕೊಟ್ಟ ಪರೀಕ್ಷಾ ಪೇ ಚರ್ಚಾ ಸಂವಾದ ಕಾರ್ಯಕ್ರಮ ಶೈಕ್ಷಣಿಕ ಭಾಗೀದಾರರಲ್ಲಿ ಸ್ಫೂರ್ತಿ ನೀಡಿತು. ಜಿಲ್ಲೆಯ 111600ಕ್ಕೂ ಅಧಿಕ ವಿದ್ಯಾರ್ಥಿಗಳು ಪರೀಕ್ಷಾ ಪೇ ಚರ್ಚಾ ವೀಕ್ಷಣೆ ಮಾಡಿದ್ದಾರೆ.

ಚಿತ್ರದುರ್ಗ: ಪರೀಕ್ಷಾ ಭಯ ನಿವಾರಿಸಿ ಒತ್ತಡ ರಹಿತವಾಗಿ ಸಂತಸದಿಂದ ಪರೀಕ್ಷೆ ಬರೆಯಲು ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಪೋಷಕರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ನಡೆಸಿಕೊಟ್ಟ ಪರೀಕ್ಷಾ ಪೇ ಚರ್ಚಾ ಸಂವಾದ ಕಾರ್ಯಕ್ರಮ ಶೈಕ್ಷಣಿಕ ಭಾಗೀದಾರರಲ್ಲಿ ಸ್ಫೂರ್ತಿ ನೀಡಿತು. ಜಿಲ್ಲೆಯ 111600ಕ್ಕೂ ಅಧಿಕ ವಿದ್ಯಾರ್ಥಿಗಳು ಪರೀಕ್ಷಾ ಪೇ ಚರ್ಚಾ ವೀಕ್ಷಣೆ ಮಾಡಿದ್ದಾರೆ ಎಂದು ಡಯಟ್ ಪ್ರಾಚಾರ್ಯ ಎಂ.ನಾಸಿರುದ್ದೀನ್ ಹೇಳಿದರು.

ನಗರದ ಡಯಟ್‍ನಲ್ಲಿ ಸೋಮವಾರ ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮ ವೀಕ್ಷಿಸಿದ ನಂತರ ಮಾತನಾಡಿದ ಅವರು, ವಿದ್ಯಾರ್ಥಿಗಳು ಪರೀಕ್ಷೆಯನ್ನು ಹಬ್ಬದಂತೆ ಸಂಭ್ರಮಿಸಿ ಆತ್ಮವಿಶ್ವಾಸದಿಂದ ಬರೆಯಲು ವಿದ್ಯಾರ್ಥಿಗಳಿಗೆ ಸಂವಾದ ಪ್ರೇರಣೆ ನೀಡಿತು. ವಿದ್ಯಾರ್ಥಿಗಳಿಗೆ ಮಾತ್ರವಲ್ಲದೆ ಮಕ್ಕಳ ಭವಿಷ್ಯ ರೂಪಿಸುವಲ್ಲಿ ಶಿಕ್ಷಕರು ಮತ್ತು ಪೋಷಕರ ಜವಾಬ್ದಾರಿ ಕುರಿತು ತಿಳಿಸಿದ ಪ್ರೇರಣಾದಾಯಕ ನುಡಿ ಎಲ್ಲಾ ಶೈಕ್ಷಣಿಕ ಭಾಗೀದಾರರಲ್ಲಿ ಸಂತಸ ನೀಡಿತು ಎಂದರು.

ನೋಡಲ್ ಅಧಿಕಾರಿ ಎಸ್.ಸಿ.ಪ್ರಸಾದ್ ಮಾತನಾಡಿ, ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮವನ್ನು ಚಿತ್ರದುರ್ಗ ಜಿಲ್ಲೆಯಲ್ಲಿ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ 6ರಿಂದ 12ನೇ ತರಗತಿಯ 1700 ಶಾಲೆಗಳಲ್ಲಿ 116600 ವಿದ್ಯಾರ್ಥಿ ಮತ್ತು ಶಿಕ್ಷಕರು ವೀಕ್ಷಿಸಿದ್ದಾರೆ ಎಂದು ತಿಳಿಸಿದರು.

ಸಹಾಯಕ ನೋಡಲ್ ಅಧಿಕಾರಿ ಎಸ್. ಬಸವರಾಜು, ಹಿರಿಯ ಉಪನ್ಯಾಸಕರಾದ ಎಸ್. ಜ್ಞಾನೇಶ್ವರ, ಎಚ್.ಗಿರಿಜಾ, ಪೂರ್ಣಿಮಾ, ಉಪನ್ಯಾಸಕರಾದ ಕೆ.ಜಿ.ಪ್ರಶಾಂತ್, ಸಿ.ಎಸ್.ಲೀಲಾವತಿ, ವಿ.ಕನಕಮ್ಮ, ಎನ್.ಮಂಜುನಾಥ್, ತಾಂತ್ರಿಕ ಸಹಾಯಕ ಆರ್.ಲಿಂಗರಾಜು ಮತ್ತು ಕಚೇರಿ ಸಿಬ್ಬಂದಿ ವರ್ಗದವರು ಪಾಲ್ಗೊಂಡಿದ್ದರು.