ರಾಣಿ ಚೆನ್ನಮ್ಮಾಜಿ ವೃತ್ತದಲ್ಲಿ ಕಂಚಿನ ಪುತ್ಥಳಿ ಸ್ಥಾಪನೆ: ಶಾಸಕ ಗೋಪಾಲಕೃಷ್ಣ ಬೇಳೂರು

| Published : Nov 02 2025, 02:15 AM IST

ರಾಣಿ ಚೆನ್ನಮ್ಮಾಜಿ ವೃತ್ತದಲ್ಲಿ ಕಂಚಿನ ಪುತ್ಥಳಿ ಸ್ಥಾಪನೆ: ಶಾಸಕ ಗೋಪಾಲಕೃಷ್ಣ ಬೇಳೂರು
Share this Article
  • FB
  • TW
  • Linkdin
  • Email

ಸಾರಾಂಶ

ರಾಣಿ ಚೆನ್ನಮ್ಮಾಜಿ ವೃತ್ತದಲ್ಲಿ ಸುಮಾರು ೧೫ ಲಕ್ಷ ರು. ವೆಚ್ಚದಲ್ಲಿ ಕಂಚಿನ ಪುತ್ಥಳಿ ಸ್ಥಾಪಿಸಲಾಗುತ್ತಿದೆ ಎಂದು ಶಾಸಕ ಹಾಗೂ ಅರಣ್ಯ ಕೈಗಾರಿಕಾ ಅಭಿವೃದ್ದಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಹೇಳಿದರು.

ಸಾಗರ: ರಾಣಿ ಚೆನ್ನಮ್ಮಾಜಿ ವೃತ್ತದಲ್ಲಿ ಸುಮಾರು ೧೫ ಲಕ್ಷ ರು. ವೆಚ್ಚದಲ್ಲಿ ಕಂಚಿನ ಪುತ್ಥಳಿ ಸ್ಥಾಪಿಸಲಾಗುತ್ತಿದೆ ಎಂದು ಶಾಸಕ ಹಾಗೂ ಅರಣ್ಯ ಕೈಗಾರಿಕಾ ಅಭಿವೃದ್ದಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಹೇಳಿದರು.

ಪಟ್ಟಣದ ರಾಣಿ ಚೆನ್ನಮ್ಮಾಜಿ ವೃತ್ತದಲ್ಲಿ ಶನಿವಾರ ನಗರಸಭೆ ವತಿಯಿಂದ ಸುಮಾರು ೫೦ ಲಕ್ಷ ರು. ವೆಚ್ಚದಲ್ಲಿ ಬಸ್ ನಿಲ್ದಾಣ ಸೇರಿದಂತೆ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿ, ರಾಣಿ ಚೆನ್ನಮ್ಮಾಜಿ ವೃತ್ತದಲ್ಲಿ ಪುತ್ಥಳಿ ನಿರ್ಮಿಸಬೇಕು ಎಂದು ಈ ಭಾಗದ ಜನರ ಬಹುಕಾಲದ ಬೇಡಿಕೆಯಾಗಿದ್ದು, ಅದನ್ನು ನೆರವೇರಿಸಲಾಗುತ್ತಿದೆ ಎಂದರು.

ಪುತ್ಥಳಿಗೆ ಶಾಸಕರ ಅನುದಾನದಲ್ಲಿ ೧೦ ಲಕ್ಷ ರು. ಮೀಸಲಿಡಲಾಗಿದೆ. ಇದರ ಜೊತೆಗೆ ಶಾಸಕರ ವಿವೇಚನಾ ನಿಧಿಯಿಂಡ ಬಸ್ ನಿಲ್ದಾಣ ಮತ್ತು ವೃತ್ತ ನಿರ್ಮಾಣಕ್ಕೆ ೪೦ ಲಕ್ಷ ರು. ಮೀಸಲಿಡಲಾಗಿದೆ. ಅತಿ ಶೀಘ್ರದಲ್ಲಿ ಕಾಮಗಾರಿ ಪ್ರಾರಂಭಿಸಲು ಸೂಚಿಸಲಾಗಿದೆ ಎಂದು ಹೇಳಿದರು.

ಈಗಾಗಲೆ ಕೆಳದಿ ರಸ್ತೆಯನ್ನು ದ್ವಿಪಥ ರಸ್ತೆಯಾಗಿ ಅಭಿವೃದ್ಧಿಪಡಿಸಲಾಗಿದೆ. ಮಳೆ ಕಡಿಮೆಯಾದ ನಂತರ ವಿವಿಧ ಭಾಗದಲ್ಲಿ ರಸ್ತೆ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗುತ್ತದೆ. ಹೊಂಡಗುಂಡಿ ಬಿದ್ದಿರುವ ರಸ್ತೆಯನ್ನು ಅಭಿವೃದ್ಧಿಪಡಿಸಲು ಅನುದಾನ ಮೀಸಲಿರಿಸಲಾಗಿದೆ ಎಂದು ಹೇಳಿದರು.

ನಗರಸಭೆ ಅಧ್ಯಕ್ಷೆ ಮೈತ್ರಿ ಪಾಟೀಲ್, ಉಪಾಧ್ಯಕ್ಷೆ ಸವಿತಾ ವಾಸು, ಪೌರಾಯುಕ್ತ ಎಚ್.ಕೆ.ನಾಗಪ್ಪ, ಸದಸ್ಯರಾದ ಶ್ರೀನಿವಾಸ್ ಮೇಸ್ತೀ, ಗಣೇಶ್ ಪ್ರಸಾದ್, ಮಧುಮಾಲತಿ, ಗಣಪತಿ ಮಂಡಗಳಲೆ, ಚಂದ್ರಪ್ಪ, ರವಿಕುಮಾರ್, ಸರೋಜಮ್ಮ ಇನ್ನಿತರರು ಹಾಜರಿದ್ದರು.