ಕುದೂರು ಸರ್ಕಾರಿ ಕಾಲೇಜಲ್ಲಿ ಸೋಲಾರ್ ಪ್ಲಾಂಟ್ ಅಳವಡಿಕೆ

| Published : Jan 13 2025, 12:45 AM IST

ಸಾರಾಂಶ

ಕುದೂರು: ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸುಸಜ್ಜಿತ ವ್ಯವಸ್ಥೆಗಳನ್ನು ಕಂಡು ಹಿರಿಯ ಅಧಿಕಾರಿಗಳು ಸೋಲಾರ್ ಪ್ಲಾಂಟ್ ಅಳವಡಿಸಲು ಮಾರ್ಗದರ್ಶನ ಮಾಡಿದ್ದಾರೆ ಎಂದು ಪ್ರಾಚಾರ್‍ಯ ಡಾ.ಗುರುಮೂರ್ತಿ ಹೇಳಿದರು.

ಕುದೂರು: ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸುಸಜ್ಜಿತ ವ್ಯವಸ್ಥೆಗಳನ್ನು ಕಂಡು ಹಿರಿಯ ಅಧಿಕಾರಿಗಳು ಸೋಲಾರ್ ಪ್ಲಾಂಟ್ ಅಳವಡಿಸಲು ಮಾರ್ಗದರ್ಶನ ಮಾಡಿದ್ದಾರೆ ಎಂದು ಪ್ರಾಚಾರ್‍ಯ ಡಾ.ಗುರುಮೂರ್ತಿ ಹೇಳಿದರು.

ಗ್ರಾಮದ ಶ್ರೀಮತಿ ನೀಲಮ್ಮ ಸತ್ಯನಾರಾಯಣಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ಅಭಿವೃದ್ಧಿ ಸಮಿತಿ ಸಭೆಯಲ್ಲಿ ಮಾತನಾಡಿ, ಕಾಲೇಜಿನಲ್ಲಿ ಸೋಲಾರ್ ಪ್ಲಾಂಟ್ ಅಳವಡಿಸುವುದರಿಂದ ಹೆಚ್ಚಿನ ವಿದ್ಯುತ್ ಉತ್ಪಾದಿಸಿ ಸ್ಥಳೀಯ ಬೆಸ್ಕಾಂಗೆ ಮಾರಾಟ ಮಾಡಬಹುದು. ಇದರಿಂದ ಕಾಲೇಜಿನ ಅಭಿವೃದ್ಧಿಗೆ ಸಹಕಾರಿಯಾಗುತ್ತದೆ ಎಂದರು.

ಮಳೆಯ ನೀರು ಪೋಲಾಗದಂತೆ ಮಳೆನೀರು ಕೊಯ್ಲುಗೆ ಸಂಬಂಧಿಸಿದಂತೆ ಕಾಮಗಾರಿ ಆಗಬೇಕಾಗಿದೆ. ಕಾಲೇಜು ಪ್ರಾರಂಭಗೊಂಡು 25 ವರ್ಷ ಆದ ಹಿನ್ನೆಲೆಯಲ್ಲಿ ಅರ್ಥಪೂರ್ಣ ಕಾರ್‍ಯಕ್ರಮ ಆಯೋಜಿಸಲು ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಯಿತು.

ಕಾಲೇಜು ಅಭಿವೃದ್ಧಿ ಸಮತಿ ಸದಸ್ಯ ಕೆ.ಎಚ್.ಯತೀಶ್ ಮಾತನಾಡಿ, ಕಾಲೇಜಿನಲ್ಲಿ ನೂತನ ಬಿಸಿಎ ಕೋರ್ಸ್ ಆರಂಭಗೊಳ್ಳುತ್ತಿದ್ದು, ಸುತ್ತಮುತ್ತಲಿನ ಹಳ್ಳಿಗಳಿಗೆ ತೆರಳಿ ಪ್ರಚಾರ ಮಾಡಬೇಕಾಗಿದೆ. ಸರ್ಕಾರಿ ಕಾಲೇಜಿನಲ್ಲಿ ಉತ್ತಮ ಫಲಿತಾಂಶದ ಪಟ್ಟಿಯನ್ನು ಪ್ಲೆಕ್ಸ್ ಮಾಡಿ ಪ್ರಚಾರ ಮಾಡಿ ಸರ್ಕಾರಿ ಶಾಲಾ ಕಾಲೇಜುಗಳನ್ನು ಉಳಿಸಿಕೊಳ್ಳಬೇಕಾಗಿದೆ ಎಂದರು.

ಸದಸ್ಯ ಕೆ.ಬಿ.ಚಂದ್ರಶೇಖರ್ ಮಾತನಾಡಿ, ಕಾಲೇಜಿಗೆ ಸುಸಜ್ಜಿತ ಶೌಚಾಲಯ ಮತ್ತು ಎಲ್ಲಾ ಕೊಠಡಿಗಳಿಗೆ ಸಿಸಿ ಕ್ಯಾಮೆರಾ ಆಳವಡಿಸಲು ವ್ಯವಸ್ಥೆ ಮಾಡಲಾಗುತ್ತದೆ ಎಂದರು.

ಕಾಲೇಜಿನಲ್ಲಿ ಡಿಜಿಟಲ್ ಗ್ರಂಥಾಲಯದ ಬಗ್ಗೆ ಗ್ರಂಥಪಾಲಕ ನಟರಾಜ್ ವಿವರಿಸಿದರು. ಸದಸ್ಯರಾದ ರೇಖಾ ಧನರಾಜ್, ವಿನಯ್, ಕುಮಾರ್, ಚಂದ್ರಶೇಖರ್, ನರಸಿಂಹಮೂರ್ತಿ, ನಿಂಗಣ್ಣ ಭಾಗವಹಿಸಿದ್ದರು.

12ಕೆಆರ್ ಎಂಎನ್ 6.ಜೆಪಿಜ

ಕುದೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಡಿಜಿಟಲ್ ಗ್ರಂಥಾಲಯವನ್ನು ಪ್ರಾಚಾರ್‍ಯರು ಸದಸ್ಯರಿಗೆ ವಿವರಿಸುತ್ತಿರುವುದು.