ಸಾರಾಂಶ
ಕನ್ನಡಪ್ರಭ ವಾರ್ತೆ, ದಾವಣಗೆರೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿಯಿ ಹಾಗೂ ಕರ್ನಾಟಕ ರಾಜ್ಯ ಸಾರಿಗೆ ಸಂಪರ್ಕ ನಿಗಮ ಸಹಾಯದೊಂದಿಗೆ ಮಂಗಳವಾರ ಹೈಸ್ಕೂಲ್ ಮೈದಾನದಲ್ಲಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಬಸ್‌ಗಳಿಗೆ ಮತದಾನ ಜಾಗೃತಿ ಸ್ಟಿಕ್ಕರ್ ಅಳವಡಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ. ಎಂ.ವಿ. ವೆಂಕಟೇಶ್ ಅವರು "ಪ್ರಜಾಪ್ರಭುತ್ವ ನಮ್ಮಿಂದ, ಮತದಾನ ಹೆಮ್ಮೆಯಿಂದ ", "ಚುನಾವಣಾ ಪರ್ವ, ದೇಶದ ಗರ್ವ " ಎಂಬ ಶೀರ್ಷಿಕೆಯ ಸ್ಟಿಕ್ಕರ್ ಅನಾವರಣಗೊಳಿಸಿದರು. ಮೇ 7ರಂದು ಎಲ್ಲರೂ ತಪ್ಪದೇ ಮತಗಟ್ಟೆಗೆ ಬಂದು ಮತದಾನ ಮಾಡುವಂತೆ ಮನವಿ ಮಾಡಿದರು.ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಸ್ವೀಪ್ ಸಮಿತಿ ಅಧ್ಯಕ್ಷ ಸುರೇಶ್ ಬಿ. ಇಟ್ನಾಳ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್, ಜಿಪಂ ಮುಖ್ಯ ಯೋಜನಾಧಿಕಾರಿ ಮಲ್ಲನಾಯ್ಕ, ಕೆ.ಎಸ್.ಆರ್.ಟಿ.ಸಿ. ಹಿರಿಯ ವಿಭಾಗೀಯ ನಿಯಂತ್ರಣಾಧಿಕಾರಿ ಸಿ.ಇ. ಶ್ರೀನಿವಾಸ್ ಮೂರ್ತಿ, ವಿಭಾಗೀಯ ತಾಂತ್ರಿಕ ಅಭಿಯಂತರ ವೆಂಕಟೇಶ್, ವಿಭಾಗೀಯ ಸಂಚಲನಾಧಿಕಾರಿ ಫಕ್ರುದ್ದೀನ್, ಆಡಳಿತಾಧಿಕಾರಿ ರಾಜಶೇಖರ್ ಕಂಬಾರ, ಘಟಕದ ವ್ಯವಸ್ಥಾಪಕರು ಎಂ.ರಾಮಚಂದ್ರಪ್ಪ, ಲೆಕ್ಕಾಧಿಕಾರಿ ಚಲುವೇಗೌಡ, ನಗರ ಸಾರಿಗೆ ಘಟಕದ ವ್ಯವಸ್ಥಾಪಕ ಮರುಳುಸಿದ್ದಪ್ಪ, ನಿಲ್ದಾಣಾಧಿಕಾರಿ ಸಿದ್ದೇಶ್, ಇನ್ನಿತರೆ ಸಿಬ್ಬಂದಿ ಭಾಗವಹಿಸಿದ್ದರು.
- - - -23ಕೆಡಿವಿಜಿ31, 32ಃ:ದಾವಣಗೆರೆಯಲ್ಲಿ ಕೆಎಸ್‌ಆರ್‌ಟಿಸಿ ಬಸ್‌ಗಳಿಗೆ ಜಿಲ್ಲಾಧಿಕಾರಿ, ಜಿಲ್ಲಾ ಚುನಾವಣಾಧಿಕಾರಿ ಡಾ. ಎಂ.ವಿ.ವೆಂಕಟೇಶ್ ಅವರು ಸ್ಟಿಕ್ಕರ್ ಅಳವಡಿಸುವ ಮೂಲಕ ಮತದಾನ ಜಾಗೃತಿಗೆ ಚಾಲನೆ ನೀಡಿದರು.