ಮಕ್ಕಳಿಗೆ ಆಸ್ತಿ ಮಾಡುವ ಬದಲು ಮಕ್ಕಳನ್ನೇ ಆಸ್ತಿಯನ್ನಾಗಿಸಿ

| Published : Sep 03 2024, 01:41 AM IST

ಮಕ್ಕಳಿಗೆ ಆಸ್ತಿ ಮಾಡುವ ಬದಲು ಮಕ್ಕಳನ್ನೇ ಆಸ್ತಿಯನ್ನಾಗಿಸಿ
Share this Article
  • FB
  • TW
  • Linkdin
  • Email

ಸಾರಾಂಶ

ಈಗಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಮಗುವಿನ ಸರ್ವತೋಮುಖ ಬೆಳವಣಿಗೆಯಲ್ಲಿ ಶಿಕ್ಷಕರ ಪಾತ್ರದ ಜೊತೆಗೆ ಪಾಲಕರ ಪಾತ್ರವೂ ಮಹತ್ವದ್ದಾಗಿದೆ. ಅದಲ್ಲದೇ ಮಕ್ಕಳಿಗೆ ಆಸ್ತಿ ಮಾಡುವ ಬದಲು ಮಕ್ಕಳನ್ನು ಆಸ್ತಿಯನ್ನಾಗಿ ಮಾಡಿ ಎಂದು ವಿದ್ಯಾರ್ಥಿ ಕಲ್ಯಾಣಾಧಿಕಾರಿ ಹಾಗೂ ಜೀವಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ.ಆರ್.ಗಿರೀಶ ಹೇಳಿದರು.

ಕನ್ನಡಪ್ರಭ ವಾರ್ತೆ ಬಾಗಲಕೋಟೆ

ಅವರು ನಗರದ ಬಿವಿವಿ ಸಂಘದ ಬಸವೇಶ್ವರ ವಿಜ್ಞಾನ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ನಡೆದ 2024-25ನೇ ಸಾಲಿನ ಪಾಲಕರ ಸಭೆಯಲ್ಲಿ ಮಾತನಾಡಿ, ಮಹಾವಿದ್ಯಾಲಯದ ಇತಿಹಾಸ ಹಾಗೂ ಬೆಳೆದು ಬಂದ ದಾರಿಯ ಕುರಿತಾಗಿ ಮಾತನಾಡಿದರು. ಮಕ್ಕಳ ಸರ್ವಾಂಗೀಣ ಅಭಿವೃದ್ಧಿಗೆ ಬರೀ ಶಿಕ್ಷಕರಷ್ಟೇ ಶ್ರಮಿಸದೆ ಪಾಲಕರೂ ಪರಿಶ್ರಮ ಪಡಬೇಕೆಂದು ಹೇಳಿದರು.

ಸಭೆಯ ಅಧ್ಯಕ್ಷತೆಯನ್ನು ಬಸವೇಶ್ವರ ವಿಜ್ಞಾನ ಪದವಿ ಪೂರ್ವ ಮಹಾವಿದ್ಯಾಲಯದ ಪ್ರಾಚಾರ್ಯ ಡಾ.ಎನ್.ಎಚ್.ಬೇವಿನಹಳ್ಳಿ ಮಾತನಾಡಿ, ಮಕ್ಕಳಿಗೆ ಮೌಲ್ಯಗಳನ್ನು ಕಲಿಸಿ ಎಂದು ಹೇಳುತ್ತಾ, ಮೊಬೈಲ್ ಪೋನ್ ಬಳಕೆಯ ಕುರಿತಾಗಿ ಕಳವಳ ವ್ಯಕ್ತಪಡಿಸಿದರು. ಹಾಗೂ ವಿಜ್ಞಾನ ಕೋರ್ಸ್‌ ಮುಗಿದ ಮೇಲೆ ವೃತ್ತಿಪರ ಕೋರ್ಸ್‌ಗಳ ಬಗ್ಗೆ ವಿವರಿಸಿದರು. ಮಕ್ಕಳ ಶೈಕ್ಷಣಿಕ ಬೆಳವಣಿಗೆಯಲ್ಲಿ ಪಾಲಕರ ಕರ್ತವ್ಯಗಳ ಕುರಿತು ಹೇಳಿದರು,

ಎ.ಡಿ.ಮೋಮಿನ್ ಅವರು ವಂದಿಸಿದರು. ಐ.ಎಸ್.ಶಂಕಿನಮಠ ಹಾಗೂ ಬಿ.ಎಮ್. ಸೊನಕನಾಳ ನಿರೂಪಿಸಿದರು. ಪಾಲಕರ ಸಂವಾದ ಕಾರ್ಯಕ್ರಮ ಸಹ ನಡೆಯಿತು.