ಕನ್ನಡಪ್ರಭ ವಾರ್ತೆ ವಿಜಯಪುರ ಪಾಶ್ ಕಾಯ್ದೆ ಇಡೀ ದೇಶದಲ್ಲಿ ಮೊದಲನೇ ಸ್ಥಾನದಲ್ಲಿದ್ದೇವೆ. ಕಾಯ್ದೆಯ ಉದ್ದೇಶ ಸಫಲಗೊಳಿಸುವ ನಿಟ್ಟಿನಲ್ಲಿ ಜಿಲ್ಲೆಯ ಎಲ್ಲ ಇಲಾಖೆಗಳು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಬೇಕು ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಅಧಿಕಾರಿಗಳಿಗೆ ಸೂಚಿಸಿದರು.
ಕನ್ನಡಪ್ರಭ ವಾರ್ತೆ ವಿಜಯಪುರ
ಪಾಶ್ ಕಾಯ್ದೆ ಇಡೀ ದೇಶದಲ್ಲಿ ಮೊದಲನೇ ಸ್ಥಾನದಲ್ಲಿದ್ದೇವೆ. ಕಾಯ್ದೆಯ ಉದ್ದೇಶ ಸಫಲಗೊಳಿಸುವ ನಿಟ್ಟಿನಲ್ಲಿ ಜಿಲ್ಲೆಯ ಎಲ್ಲ ಇಲಾಖೆಗಳು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಬೇಕು ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಅಧಿಕಾರಿಗಳಿಗೆ ಸೂಚಿಸಿದರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಕರ್ನಾಟಕ ರಾಜ್ಯ ಮಹಿಳಾ ಆಯೋಗ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಯೋಗದಲ್ಲಿ ನಗರದ ಜಿಲ್ಲಾ ಪಂಚಾಯತಿಯಲ್ಲಿ ಮಂಗಳವಾರ ನಡೆದ ಮಹಿಳಾ ಸ್ಪಂದನಾ ಮತ್ತು ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು. ಹೋಟೆಲ್, ರೆಸಾರ್ಟ್ ಮತ್ತಿತರ ಕಡೆಗಳಲ್ಲಿ ಮಹಿಳೆಯರು ಕೆಲಸ ಮಾಡುವ ಸ್ಥಳಗಳಲ್ಲಿ ಪಾಶ್ ಕಾರ್ಯನಿರ್ವಹಿಸುವಂತಾಗಲಿ. ತನ್ಮೂಲಕ ಮಹಿಳೆಯರಿಗೆ ಸುರಕ್ಷತಾ ಭಾವ ಮೂಡಿಸಲು ಎಲ್ಲರೂ ಕೈಜೋಡಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.ಆಗಾಗ ಪಾಶ್ ತರಬೇತಿ ಆಯೋಜಿಸಲು ಸಲಹೆ ನೀಡಿದ ಅವರು, ಪ್ರತಿ ಮೂರು ತಿಂಗಳಿಗೊಮ್ಮೆ ಸಭೆ ನಡೆಯುವಂತೆ ನೋಡಿಕೊಳ್ಳಬೇಕು. ಎಲ್ಲ ವಸತಿ ನಿಲಯಗಳಲ್ಲಿ ಮೂಲಭೂತ ಸೌಲಭ್ಯ ಕಲ್ಪಿಸಲಾಗಿದೆ. ಮಕ್ಕಳ ಭವಿಷ್ಯದ ದೃಷ್ಟಿಯಿಂದ ಎಲ್ಲ ಸೌಲಭ್ಯ ಒದಗಿಸಿರುವುದನ್ನು ಕಾಲಕಾಲಕ್ಕೆ ವಸತಿ ನಿಲಯಕ್ಕೆ ಭೇಟಿ ನೀಡಿ ಪರಿಶೀಲಿಸಲಾಗುತ್ತಿದೆ ಎಂದು ಅಧಿಕಾರಿಗಳು ವಿವರಿಸಿದರು.
ಆಗ ಮಧ್ಯೆ ಪ್ರವೇಶಿಸಿದ ಡಾ.ನಾಗಲಕ್ಷ್ಮಿ ಚೌಧರಿ, ವಸತಿ ನಿಲಯಗಳಲ್ಲಿ ಬಾಲಕಿಯರಿಗಾಗಿ ಬೇಡಿಕೆ ಬಂದಾಗ ಅವಕಾಶ ಕಲ್ಪಿಸಲು ಕ್ರಮ ಕೈಗೊಳ್ಳುವಂತೆ ಸೂಚಿಸಿದ ಅವರು, ಮೂಲ ಸೌಲಭ್ಯಗಳಾದ ಕುಡಿಯುವ ನೀರು, ಶೌಚಾಲಯ ವ್ಯವಸ್ಥೆ ಒದಗಿಸಿ ಹೆಣ್ಣುಮಕ್ಕಳಿಗೆ ಉತ್ತಮ ಶಿಕ್ಷಣ ಒದಗಿಸಬೇಕು. ಜೊತೆಗೆ ವಸತಿ ನಿಲಯದಲ್ಲಿ ಮೆನ್ಯೂ ಪ್ರಕಾರ ಆಹಾರ ಒದಗಿಸಬೇಕು. ವಸತಿ ನಿಲಯಗಳ ಸುಧಾರಣೆಗಾಗಿ ಬೇರೆ ಬೇರೆ ಇಲಾಖೆಯ ಅನುದಾನ ಬಳಸಿಕೊಳ್ಳಿ ಎಂದೂ ಸಲಹೆ ನೀಡಿದರು. ವಿದ್ಯಾಸಿರಿ ವಿದ್ಯಾರ್ಥಿ ವೇತನ ಯೋಜನೆ ಬಗ್ಗೆ ಅರಿವು ಮೂಡಿಸಬೇಕು, ಮಕ್ಕಳೊಂದಿಗೆ ಇತ್ತೀಚೆಗೆ ಸಂವಾದ ಮಾಡಿದಾಗ ಅನೇಕ ಮಕ್ಕಳು ತಮ್ಮ ಅಹವಾಲು ಹೇಳಿಕೊಂಡಿದ್ದಾರೆ. ಹಾಗಾಗಿ ಮಕ್ಕಳ ಫಲಿತಾಂಶ ಹೆಚ್ಚಳಕ್ಕೆ ಪ್ರಯತ್ನಿಸಬೇಕು. ಈ ನಿಟ್ಟಿನಲ್ಲಿ ಅಧಿಕಾರಿಗಳು ವೈಯಕ್ತಿಕವಾಗಿ ಶಾಲಾ-ಕಾಲೇಜ್ ಗೆ ತೆರಳಿ ಮಾಹಿತಿ ನೀಡಿ, ಜಾಗೃತಿ ಮೂಡಿಸಬೇಕು. ಜೊತೆಗೆ ಪ್ರಚಾರ ಕೈಗೊಳ್ಳಬೇಕು. ಎಲ್ಲಾ ಕಾಲೇಜಿನಲ್ಲಿ ಮಾಹಿತಿ ಫಲಕ ಅಳವಡಿಸಿ ಬೇರೆ ಬೇರೆ ಇಲಾಖೆಯ ಮಾಹಿತಿಯನ್ನು ಪ್ರಚಾರ ಮಾಡಬೇಕು. ಸರ್ಕಾರಿ ಶಾಲೆಗಳಲ್ಲಿ ಹೆಣ್ಣುಮಕ್ಕಳ ಶಿಕ್ಷಣ ಕುರಿತು ಜಾಗೃತಿ ಮೂಡಿಸಬೇಕು ಎಂದು ತಿಳಿಸಿದರು.ಕೆರೆಗಳಿಗೆ ನೀರು ಹರಿಸಿ: ಪಾಂಗ್ರೂನ್ ದೊಡ್ಡಿಯಲ್ಲಿ ವಾಸವಾಗಿರುವ ಜನರು ಹಾಗೂ ಸುತ್ತಲಿನವರಿಗೆ ಆ ಭಾಗದ ಕೆರೆಗಳಿಗೆ ನೀರು ಹರಿಸಿ, ಕುರಿಗಳಿಗೆ ಕುಡಿಯಲು ನೀರು ಕಲ್ಪಿಸಲು ಅನುಕೂಲ ಮಾಡಿಕೊಡಿ. ಸರ್ಕಾರದ ಯೋಜನೆಗಳ ಬಗ್ಗೆ ಅಲ್ಲಿನ ಜನತೆಗೆ ತಿಳುವಳಿಕೆ ನೀಡಬೇಕು. ಅಲ್ಲಿನ ಜನರಿಗೆ ಸಾರಿಗೆ ಸೌಕರ್ಯ ಕಲ್ಪಿಸಬೇಕು. ದೊಡ್ಡಿಯ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಬೇಕು, ಒಟ್ಟಾರೆ ಕುಡಿಯುವ ನೀರು, ಶೌಚಾಲಯ, ಸಮುದಾಯ ಶೌಚಾಲಯಕ್ಕೆ ಆದ್ಯತೆ ನೀಡುಂತೆ ತಿಳಿಸಿದರು.ಸಭೆ ಬಳಿಕ, ಆಗಮಿಸಿದ ಮಹಿಳೆಯರ ಕುಂದುಕೊರತೆ ಆಲಿಸಿ, ಅವರ ಸಮಸ್ಯೆಗಳಿಗೆ ಸ್ಪಂದಿಸಿದರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ.ಆನಂದ.ಕೆ ಇದ್ದು ಮಹಿಳೆಯರ ಕುಂದು ಕೊರತೆ ಆಲಿಸಿ, ಮಹಿಳಾ ಆಯೋಗದ ಅಧ್ಯಕ್ಷರೊಂದಿಗೆ ಪರಿಹರಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ಜಿಪಂ ಸಿಇಒ ರಿಷಿ ಆನಂದ, ಆಯೋಗದ ಕಾರ್ಯದರ್ಶಿ ರೂಪಾ.ಆರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಡಾ.ಸಂತೋಷಕುಮಾರ.ಎಚ್, ಸೇರಿದಂತೆ ಜಿಲ್ಲಾ ಹಾಗೂ ತಾಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.-----ಬಾಕ್ಸ್ಅಕ್ರಮ ಮದ್ಯ ಮಾರಾಟ ಕೇಸ್ ದಾಖಲಿಸಿ
ಅಕ್ರಮ ಮದ್ಯ ಮಾರಾಟ ಕುರಿತು ಪ್ರಕರಣ ದಾಖಲಿಸುವ ಮೂಲಕ ಕಡಿವಾಣ ಹಾಕಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು. ಮುದ್ದೇಬಿಹಾಳ ತಾಲೂಕಾಸ್ಪತ್ರೆಯಲ್ಲಿ ವೈದ್ಯರಿದ್ದಾರೆ. ತಾಲೂಕು ಆಸ್ಪತ್ರೆ ಚೆನ್ನಾಗಿ ಕಾರ್ಯನಿರ್ವಹಿಸುತ್ತಿದೆ. ಕಟ್ಟಡ ನಿರ್ವಹಣೆ ಮಾಡಬೇಕು ಎಂದ ಅವರು, ಆಸ್ಪತ್ರೆಯ ಕಾರ್ಯವೈಖರಿಯನ್ನು ಅಧ್ಯಕ್ಷರು ಪ್ರಶಂಸಿದರು. ಜಿಲ್ಲೆಯಲ್ಲಿ ಮೆಮೊಗ್ರಾಫಿ ಯಂತ್ರವಿದ್ದು, ಕ್ಯಾನ್ಸರ್ ಬಗ್ಗೆ ಜಾಗೃತಿ ಮೂಡಿಸಿ. ಹೊರಗುತ್ತಿಗೆ ಆಧಾರದ ಸಿಬ್ಬಂದಿಗೆ ನಿಯಮಾನುಸಾರ ವೇತನ ಪಾವತಿಸಬೇಕು. ಚೇತನ ಸಂಜೆ ಮಿಷನ್ ವಿದ್ಯಾಪುರದಲ್ಲಿ ಸಂಜೆ ಕ್ಲಾಸಸ್ ನಡೆಯುತ್ತವೆ. ಕಾಲೇಜಿನ ಮಕ್ಕಳಿಗೆ ಕ್ರೀಡೆಗೆ ಉತ್ತೇಜನ ನೀಡಬೇಕು. ಬಾಲಕಿಯರು ಕ್ರೀಡೆಗಳಲ್ಲಿ ತೊಡಗಿಸಿಕೊಳ್ಳುವಂತೆ ಪ್ರೇರಣೆ ನೀಡಬೇಕು ಎಂದು ಸಭೆಯಲ್ಲಿ ಡಾ.ನಾಗಲಕ್ಷ್ಮೀ ಚೌಧರಿ ಹೇಳಿದರು-----
ಕೋಟ್‌ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿಯಿರುವ ಅಂಗನವಾಡಿಗಳಲ್ಲಿ ಯಾವುದೇ ದೂರು ಬಾರದಂತೆ ನೋಡಿಕೊಳ್ಳಬೇಕು. ಈ ನಿಟ್ಟಿನಲ್ಲಿ ಸಂಬಂಧಿಸಿದ ಅಧಿಕಾರಿಗಳು ಖುದ್ದಾಗಿ ಕೇಂದ್ರಗಳಿಗೆ ಭೇಟಿ ನೀಡಬೇಕು. ಅಂಗನವಾಡಿಗಳಲ್ಲಿ ಸಮರ್ಪಕ ಪೌಷ್ಟಿಕ ಆಹಾರ ಒದಗಿಸಲು ಖಚಿತಪಡಿಸಿಕೊಳ್ಳುವಂತೆ ಸೂಚಿಸಿದರು. ಜಿಲ್ಲೆಯ ಜನತೆಗೆ ಶುದ್ಧ ಕುಡಿಯುವ ನೀರು ಪೂರೈಸಿ, ಎಲ್ಲೆಲ್ಲಿ ತೊಂದರೆ ಇದೆಯೋ ಅಲ್ಲಿ ಪರಿಶೀಲಿಸುವ ಮೂಲಕ ಜನರಿಗೆ ಶುದ್ಧ ನೀರು ಸರಬರಾಜು ಮಾಡಬೇಕು.ಡಾ.ನಾಗಲಕ್ಷ್ಮೀ ಚೌಧರಿ, ಮಹಿಳಾ ಆಯೋಗದ ಅಧ್ತಕ್ಷೆ