ಸಾರಾಂಶ
ಗದಗ ಶಹರ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದಿಂದ ವಿಶೇಷ ಚೇತನ ಮಕ್ಕಳಿಗೆ ಗದಗ ಶಹರ ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ಎಸ್. ಬುರಡಿ ಸಾಧನ ಸಲಕರಣೆ ವಿತರಿಸಿದರು.
ಗದಗ: ವಿಶೇಷ ಚೇತನ ಮಕ್ಕಳಲ್ಲಿ ಆತ್ಮಸ್ಥೈರ್ಯ ತುಂಬಿ ಅವರನ್ನು ಮಾನಸಿಕವಾಗಿ ಪ್ರಬುದ್ಧಗೊಳಿಸಿ ಮುಖ್ಯವಾಹಿನಿಗೆ ತರಬೇಕಾದಲ್ಲಿ ಸಮುದಾಯದ ಸಹಭಾಗಿತ್ವ ಅಗತ್ಯ ಎಂದು ಗದಗ ಶಹರ ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ಎಸ್. ಬುರಡಿ ಹೇಳಿದರು.
ಅವರು ಶುಕ್ರವಾರ ಗದಗ ಶಹರ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದಿಂದ ವಿಶೇಷ ಚೇತನ ಮಕ್ಕಳಿಗೆ ಸಾಧನ ಸಲಕರಣೆ ವಿತರಿಸಿ ಮಾತನಾಡಿದರು.ಅಂಗವೈಕಲ್ಯತೆ ಮೆಟ್ಟಿನಿಂತು ಸಾಧನೆ ಮಾಡಿದ ಸಾಧಕರನ್ನು ನಾವು ಮಾದರಿಯಾಗಿಟ್ಟುಕೊಂಡು ಮುನ್ನಡೆಯಬೇಕು. ಪಾಲಕರು ಪೋಷಕರು ಈ ಮಕ್ಕಳನ್ನು ಉನ್ನತ ಶಿಕ್ಷಣ ಪಡೆದು ಸ್ವಾವಲಂಬಿಗಳಾಗುವಂತೆ ಪ್ರೇರಣೆ ನೀಡಬೇಕು ಎಂದರು.
ಪ್ರಾಸ್ತಾವಿಕವಾಗಿ ಮಾತನಾಡಿದ ಸಂಪನ್ಮೂಲ ವ್ಯಕ್ತಿ ಕೆ.ಎಸ್. ಬೇಲೇರಿ ವಿಶೇಷ ಚೇತನ ಮಕ್ಕಳ ಸಮಗ್ರ ಅಭಿವೃದ್ಧಿಗಾಗಿ ಸರಕಾರ ನೀಡುವ ಎಲ್ಲ ಸೌಲಭ್ಯಗಳನ್ನು ಈ ಮಕ್ಕಳಿಗೆ ತಲುಪಿಸಲಾಗಿದ್ದು ಇವುಗಳನ್ನು ಸದುಪಯೋಗ ಮಾಡಿಕೊಳ್ಳಬೇಕು ಎಂದರು. ಪೋರ್ಥವೇ ಪೌಂಡೇಶನ್‌ದ ಬಸವರಾಜ ಮ್ಯಾಗೇರಿ, ಸಿಆರ್‌ಪಿ ಖಲೀದ್ ಜಲಗೇರಿ, ಎ.ಆರ್.ನದಾಫ ಮುಂತಾದವರಿದ್ದರು. ಶಶಿಧರ ಚಳಗೇರಿ ಸ್ವಾಗತಿಸಿ ವಂದಿಸಿದರು.