ಆ.15ರಂದು ಬೆಳಗ್ಗೆ ೮.೩೦ ರೊಳಗಾಗಿ ವಿವಿಧ ಇಲಾಖಾ ಅಧಿಕಾರಿಗಳು ತಮ್ಮ ಕಚೇರಿಯಲ್ಲಿ ಧ್ವಜಾರೋಹಣ ನೆರವೇರಿಸಿ ಕ್ರೀಡಾಂಗಣದಲ್ಲಿ ತಮ್ಮ ಇಲಾಖಾ ಸಿಬ್ಬಂದಿಗಳೊಂದಿಗೆ ಹಾಜರಿರಬೇಕು. ಸಾಂಸ್ಕೃತಿಕ ಕಾರ್ಯಕ್ರಮಗಳು, ಸನ್ಮಾನ ಸಮಾರಂಭಗಳು ನಡೆಯುವಾಗ ಯಾವುದೇ ಗೊಂದಲಗಳಾಗದಂತೆ ಅಚ್ಚುಕಟ್ಟಾಗಿ ಜರುಗುವಂತೆ ಕ್ರಮ ವಹಿಸಬೇಕು.

ಕನ್ನಡಪ್ರಭ ವಾರ್ತೆ ಕೋಲಾರಆ.೧೫ರಂದು ಸ್ವಾತಂತ್ರ್ಯೋತ್ಸವ ದಿನಾಚರಣೆ ಅಚ್ಚುಕಟ್ಟಾಗಿ ಶಿಸ್ತಿನಿಂದ ಜರುಗಲು ಸಂಬಂಧಿತ ಇಲಾಖಾಧಿಕಾರಿಗಳು ಪೂರ್ವತಯಾರಿ ಮಾಡಿಟ್ಟುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಸೂಚಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸ್ವಾತಂತ್ರ್ಯ ದಿನಾಚರಣೆ ಕುರಿತು ಜರುಗಿದ ಅಂತಿಮ ಸಿದ್ಧತೆಗಳ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಉಸ್ತುವಾರಿ ಸಚಿವರಿಂದ ಸಂದೇಶ

ನಗರದ ಸರ್‌ಎಂವಿ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ಎಸ್.ಸುರೇಶ್ ಆ.೧೫ ರಂದು ಬೆಳಗ್ಗೆ ೯ ಗಂಟೆಗೆ ಸಾರ್ವಜನಿಕ ಧ್ವಜಾರೋಹಣ ನೆರವೇರಿಸಿ ಕ್ರೀಡಾಂಗಣದಲ್ಲಿ ನೆರೆದ ಸಾರ್ವಜನಿಕರಿಗೆ ಸ್ವಾತಂತ್ರ್ಯೋತ್ಸವದ ಸಂದೇಶ ನೀಡುವರು. ಶಾಲಾ ಮಕ್ಕಳು ಜಿಲ್ಲಾ ಕ್ರೀಡಾಂಗಣದಲ್ಲಿ ಕಾರ್ಯಕ್ರಮದ ಮುಂಚೆಯೇ ಆಗಮಿಸಿ ನಿಗದಿತ ಸ್ಥಳದಲ್ಲಿ ಕುಳಿತುಕೊಂಡು ಕಾರ್ಯಕ್ರಮ ಮುಗಿಯುವವರೆಗೆ ಹಾಜರಿರುವಂತೆ ಆಯಾ ಶಾಲೆಯ ಶಿಕ್ಷಕರು ಹಾಗೂ ನಿಯೋಜಿಸಿದ ಅಧಿಕಾರಿಗಳು ನಿಗಾವಹಿಸಬೇಕು ಎಂದರು.

ಅಂದು ಬೆಳಗ್ಗೆ ೮.೩೦ ರೊಳಗಾಗಿ ವಿವಿಧ ಇಲಾಖಾ ಅಧಿಕಾರಿಗಳು ತಮ್ಮ ಕಚೇರಿಯಲ್ಲಿ ಧ್ವಜಾರೋಹಣ ನೆರವೇರಿಸಿ ಕ್ರೀಡಾಂಗಣದಲ್ಲಿ ತಮ್ಮ ಇಲಾಖಾ ಸಿಬ್ಬಂದಿಗಳೊಂದಿಗೆ ಹಾಜರಿರಬೇಕು. ಸಾಂಸ್ಕೃತಿಕ ಕಾರ್ಯಕ್ರಮಗಳು, ಸನ್ಮಾನ ಸಮಾರಂಭಗಳು ನಡೆಯುವಾಗ ಯಾವುದೇ ಗೊಂದಲಗಳಾಗದಂತೆ ಅಚ್ಚುಕಟ್ಟಾಗಿ ಜರುಗುವಂತೆ ಕ್ರಮ ವಹಿಸಬೇಕು. ತುರ್ತು ಪರಿಸ್ಥಿತಿಯಲ್ಲಿ ಆ್ಯಂಬುಲೆನ್ಸ್‌ ಲಭ್ಯವಿರುವಂತೆ ನೋಡಿಕೊಳ್ಳಬೇಕು ಎಂದರು.ನೀರಿನ ಸಮರ್ಪಕ ವ್ಯವಸ್ಥೆ

ವೇದಿಕೆಯಲ್ಲಿ ಶಿಷ್ಠಾಚಾರದಂತೆ ಕಾರ್ಯಕ್ರಮ ನಿರ್ವಹಣೆಯಾಗಬೇಕು. ನೆರೆದ ಸಾರ್ವಜನಿಕರೆಲ್ಲರಿಗೂ ಸಚಿವರ ಸಂದೇಶ ಕೇಳಿಸುವಂತೆ ಧ್ವನಿವರ್ಧಕದ ವ್ಯವಸ್ಥೆ ಮಾಡಬೇಕು. ಮಕ್ಕಳಿಗೆ ಅಲ್ಲಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಇರುವಂತೆ ನೋಡಿಕೊಳ್ಳಬೇಕು. ಪ್ರತಿಯೊಂದು ಕಾರ್ಯಕ್ರಮ ನಿಗದಿಪಡಿಸಿದ ಸಮಯಕ್ಕೆ ಜರುಗುವಂತೆ ನಿಗಾವಹಿಸಬೇಕು ಎಂದು ತಿಳಿಸಿದರು. ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯುವ ಸಾರ್ವಜನಿಕ ಧ್ವಜಾರೋಹಣ ಕಾರ್ಯಕ್ರಮಕ್ಕೆ ಆಗಮಿಸಿದ ಶಾಲಾ ಮಕ್ಕಳು ಅನವಶ್ಯಕವಾಗಿ ಕ್ರೀಡಾಂಗಣದ ಹೊರ ಆವರಣದಲ್ಲಿ ಮಾರಾಟ ಮಾಡುವ ಕುರುಕಲು ತಿಂಡಿ ಸೇವಿಸದಂತೆ ಶಾಲಾ ಶಿಕ್ಷಕರು ನಿಗಾವಹಿಸಬೇಕು. ಕಾರ್ಯಕ್ರಮ ಮುಗಿಯುವವರೆಗೆ ಶಾಲಾ ಮಕ್ಕಳು ಅಲ್ಲಿಯೇ ಕುಳಿತುಕೊಂಡು ನಂತರ ಶಾಂತಿಯುತವಾಗಿ ನಿರ್ಗಮಿಸುವಂತೆ ಕ್ರಮ ವಹಿಸಬೇಕು ಎಂದರು.ವೃತ್ತ, ಕ್ರೀಡಾಂಗಣ ಸ್ವಚ್ಛತೆ

ಆ.೧೫ಕ್ಕೂ ಮೊದಲು ಮೂರು ದಿನ ಮುಂಚಿತವಾಗಿಯೇ ನಗರಸಭೆಯ ಅಧಿಕಾರಿಗಳು ನಗರದ ಪ್ರಮುಖ ವೃತ್ತಗಳ ಸ್ವಚ್ಛತೆಗೆ ಹಾಗೂ ಜಿಲ್ಲಾ ಕ್ರೀಡಾಂಗಣದ ಸ್ವಚ್ಛತೆಗೆ ಆದ್ಯತೆ ವಹಿಸಿ ಶುಚಿಗೊಳಿಸಬೇಕು. ಅಲ್ಲದೇ ಪ್ರಮುಖ ವೃತ್ತಗಳಲ್ಲಿ ಮುಂಚಿತಾಗಿಯೇ ದೀಪಾಲಂಕಾರ ಮಾಡಬೇಕು ಎಂದು ಸೂಚಿಸಿದರು. ಧ್ವಜ ಸ್ತಂಭ, ವೇದಿಕೆ ವ್ಯವಸ್ಥೆ ಅಚ್ಚುಕಟ್ಟಾಗಿ ನಡೆಯುವಂತೆ ನೋಡಿಕೊಳ್ಳಬೇಕು. ರಾಷ್ಟ್ರೀಯ ಹಬ್ಬವಾದ ಸ್ವಾತಂತ್ರ್ಯೋತ್ಸವ ದಿನಾಚರಣೆಯ ಕಾರ್ಯಕ್ರಮದಲ್ಲಿ ಅಧಿಕಾರಿ ಹಾಗೂ ಸಿಬ್ಬಂದಿಗಳು ಉತ್ಸಾಹದಿಂದ ಪಾಲ್ಗೊಳ್ಳಬೇಕೆಂದು ತಿಳಿಸಿದರು.ಸಭೆಯಲ್ಲಿ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ಅಂಬಿಕಾ, ಡಿಹೆಚ್‌ಓ ಡಾ.ಶ್ರೀನಿವಾಸ್, ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ರಮೇಶ್, ಡಿಡಿಪಿಐ ಕೃಷ್ಣಮೂರ್ತಿ ಇದ್ದರು.

.