ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳಲ್ಲಿ ಕುಡಿಯುವ ನೀರು ಸಮಸ್ಯೆ ಬಾರದಂತೆ ೧೫ನೇ ಹಣಕಾಸು ಹಾಗೂ ಸ್ವಂತ ಅನುದಾನವನ್ನು ಬಳಸಿಕೊಂಡು ನೀರಿನ ಅಗತ್ಯವಿರುವ ಕಡೆ ಕೊಳವೆಬಾವಿ ಪಂಪು ಮೋಟಾರ್ ಪೈಪ್‌ಲೈನ್ ಅನ್ನು ಅಳವಡಿಸಿ ಶುದ್ದವಾದ ಕುಡಿಯುವ ನೀರು ಸರಬರಾಜು ಮಾಡಬೇಕು.
ಕನ್ನಡಪ್ರಭ ವಾರ್ತೆ ಮಾಲೂರು
ಸರ್ಕಾರದ ಯಶಸ್ಸು ಇಲಾಖೆ ಅಧಿಕಾರಿಗಳ ಪ್ರಾಮಾಣಿಕತೆಯ ಕರ್ತವ್ಯ ಮೇಲೆ ನಿಂತಿದ್ದು, ಅವರು ಸರ್ಕಾರಿ ಕಾರ್ಯಕ್ರಮಗಳು ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಬೇಕು ಎಂದು ಶಾಸಕ ಕೆ ವೈ ನಂಜೇಗೌಡ ಹೇಳಿದರು.ನಗರದ ತಾಲೂಕು ಪಂಚಾಯಿತಿ ಸಾಮರ್ಥ್ಯ ಸೌಧ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ತಾಲೂಕು ಮಟ್ಟದ ವಿವಿಧ ಇಲಾಖೆಗಳ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸರ್ಕಾರ ಯೋಜನೆಗಳನ್ನು ರೂಪಿಸುತ್ತದೆ ಅದನ್ನು ಕಾರ್ಯರೂಪಕ್ಕೆ ತರುವುದು ಅಧಿಕಾರಿಗಳ ಹೊಣೆ ಎಂದರು.
ತಾಲೂಕು ಮಾದರಿಯಾಗಲಿವಿವಿಧ ಇಲಾಖೆಗಳಿಗೆ ಸರ್ಕಾರದಿಂದ ಯೋಜನೆಗಳು ಮತ್ತು ಕಾರ್ಯಕ್ರಮಗಳು ಬರುತ್ತವೆ ಅದನ್ನು ವಿವಿಧ ಇಲಾಖೆಗಳ ಅಧಿಕಾರಿಗಳು ಕಾರ್ಯರೂಪಕ್ಕೆ ತರುವ ಮೂಲಕ ಜಿಲ್ಲೆಯಲ್ಲಿ ತಾಲೂಕನ್ನು ಮಾದರಿ ತಾಲೂಕನ್ನಾಗಿ ಮಾಡಲು ಶ್ರಮವಹಿಸಬೇಕು ಎಂದರು. ಸರ್ಕಾರಿ ಶಾಲೆಗಳನ್ನು ಉಳಿಸಿ ಬೆಳೆಸಲು ದುರಸ್ತಿ, ಶಾಲಾ ಆವರಣದಲ್ಲಿ ಶೌಚಾಲಯ, ಅಡುಗೆ ಕೋಣೆಗಳ ನಿರ್ಮಾಣ, ಸ್ವಚ್ಛತೆಯನ್ನು, ಗ್ರಾಮ ಪಂಚಾಯಿತಿಗಳು ಕೈಗೊಳ್ಳಬೇಕು ಎಂದರು.
ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳಲ್ಲಿ ಕುಡಿಯುವ ನೀರು ಸಮಸ್ಯೆ ಬಾರದಂತೆ ೧೫ನೇ ಹಣಕಾಸು ಹಾಗೂ ಸ್ವಂತ ಅನುದಾನವನ್ನು ಬಳಸಿಕೊಂಡು ನೀರಿನ ಅಗತ್ಯವಿರುವ ಕಡೆ ಕೊಳವೆಬಾವಿ ಪಂಪು ಮೋಟಾರ್ ಪೈಪ್‌ಲೈನ್ ಅನ್ನು ಅಳವಡಿಸಿ ಶುದ್ದವಾದ ಕುಡಿಯುವ ನೀರು ಸರಬರಾಜು ಮಾಡಬೇಕು ಸ್ವಚ್ಛತೆ ಇನ್ನಿತರೆ ಸವಲತ್ತುಗಳನ್ನು ಒದಗಿಸುವ ಕೆಲಸ ಮಾಡಬೇಕು ಎಂದರು.ಜನನ ಪ್ರಮಾಣ ಪತ್ರ ಇಲ್ಲಶಿಶು ಅಭಿವೃದ್ಧಿ ಯೋಜನಾಧಿಕಾರಿ ಶೋಭಾ ಮಾತನಾಡಿ ತಾಲೂಕಿನಲ್ಲಿ ೩೪೪ ಅಂಗನವಾಡಿ ಕೇಂದ್ರಗಳಿದ್ದು ೨೦೨ ಅಂಗನವಾಡಿ ಕೇಂದ್ರಗಳು ಸ್ವಂತ ಕಟ್ಟಡಗಳನ್ನು ಹೊಂದಿವೆ, ೧೩,೦೦೦ ಅಂಗನವಾಡಿ ಮಕ್ಕಳು ಶಾಲೆಗೆ ಬರುತ್ತಿದ್ದು ವಲಸಿಗ ಮಕ್ಕಳು ೩೦೦೦ ಮಕ್ಕಳು ಆಧಾರ್ ಕಾರ್ಡ್ ಜನನ ಪ್ರಮಾಣ ಪತ್ರ ಇಲ್ಲದೆ ಇರುವುದರಿಂದ ಅಂಗನವಾಡಿ ಕೇಂದ್ರಗಳಿಂದ ವಂಚಿತರಾಗುತ್ತಿದ್ದಾರೆ ಎಂದರು. ಇದಕ್ಕೆ ಉತ್ತರಿಸಿದ ಶಾಸಕ ಕೆ ವೈ ನಂಜೇಗೌಡ ಅವರು ಅಂತಹ ಮಕ್ಕಳಿಗೂ ಅಂಗನವಾಡಿ ಕೇಂದ್ರಗಳಲ್ಲಿ ಅವಕಾಶ ಕಲ್ಪಿಸಿ ಆ ಮಕ್ಕಳಿಗೆ ತೊಂದರೆ ಆಗದಂತೆ ಎಚ್ಚರ ವಹಿಸಲು ಮೇಲಧಿಕಾರಿಗಳ ಬಳಿ ಚರ್ಚಿಸುವಂತೆ ತಿಳಿಸಿದರು.ನಗರದಲ್ಲಿ ಜನಸಂಖ್ಯೆ ಹೆಚ್ಚಾಗಿದ್ದು ನಗರ ಪ್ರಾಥಮಿಕ ಆರೋಗ್ಯ ಕೇಂದ್ರವು ಅಗತ್ಯವಿದೆ ಹೀಗಿರುವ ಆಸ್ಪತ್ರೆಯ ಹಳೆ ಕಟ್ಟಡದಲ್ಲಿ ನಗರ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಪ್ರಾರಂಭಿಸಲಾಗುವುದು ಈಗಾಗಲೇ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗಾಗಿ ಟೇಕಲ್ ರಸ್ತೆಯಲ್ಲಿ ೧೦ ಎಕರೆ ಜಮೀನು ಮಂಜೂರಾಗಿದ್ದು ೪೫ ಕೋಟಿ ರು.ಗಳು ಅನುದಾನ ಬಿಡುಗಡೆಯಾಗಿದೆ ಎಂದರು.
ಯೋಜನೆಗಳ ಅನುಷ್ಠಾನ ಮಾಡಿತಾಲೂಕಿನ ವಿವಿಧ ಇಲಾಖೆಗಳಲ್ಲಿ ಕಾರ್ಯನಿರ್ವಹಿಸುವ ವಿವಿಧ ಇಲಾಖೆಗಳ ಸರ್ಕಾರದಿಂದ ಬರುವ ಯೋಜನೆಗಳು ಮತ್ತು ಅನುದಾನಗಳನ್ನು ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವಂತೆ ತಿಳಿಸಿದರು.ಸಭೆಯಲ್ಲಿ ತಹಸೀಲ್ದಾರ್ ಎಂ ವಿ ರೂಪ, ತಾಪಂ ಆಡಳಿತ ಅಧಿಕಾರಿ ಜಿ ವಿ ರಮೇಶ್, ತಾಪಂ ಇ ಒ ವಿ ಕೃಷ್ಣಪ್ಪ, ಯೋಜನಾ ಪ್ರಾಧಿಕಾರ ಅಧ್ಯಕ್ಷ ಹೆಚ್.ಎಂ.ವಿಜಯನರಸಿಂಹ, ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ಅಂಜಿನಪ್ಪ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವಿಜಯಲಕ್ಷ್ಮಿ, ಪೊಲೀಸ್ ಇನ್ಸ್ಪೆಕ್ಟರ್, ರಾಮಪ್ಪ ಗುತ್ತೇರ್, ಕೋಮುಲ್ ನಿರ್ದೇಶಕ ಶ್ರೀನಿವಾಸ್, ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.
ಶಿರ್ಷಿಕೆ- 5ಕೆ.ಎಂ.ಎಲ್.ಆರ್.3-------- ಮಾಲೂರು ತಾಪಂ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ತಾಲೂಕು ಮಟ್ಟದ ವಿವಿಧ ಇಲಾಖೆಗಳ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಶಾಸಕ ಕೆ.ವೈ.ನಂಜೇಗೌಡ ಅಧ್ಯಕ್ಷತೆಯಲ್ಲಿ ನಡೆಯಿತು.