ಸ್ವಾತಂತ್ರ್ಯ ದಿನ ಅರ್ಥಪೂರ್ಣವಾಗಿ ಆಚರಿಸಲು ಎಲ್ಲ ಇಲಾಖೆಗಳು ಅಗತ್ಯ ತಯಾರಿ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಎಸ್.ಜೆ. ಸೋಮಶೇಖರ್ ರ್ದೇಶನ ನೀಡಿದ್ದಾರೆ.
ಮಡಿಕೇರಿ: ಸ್ವಾತಂತ್ರ್ಯ ದಿನ ಅರ್ಥಪೂರ್ಣವಾಗಿ ಆಚರಿಸಲು ಎಲ್ಲ ಇಲಾಖೆಗಳು ಅಗತ್ಯ ತಯಾರಿ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಎಸ್.ಜೆ. ಸೋಮಶೇಖರ್ ರ್ದೇಶನ ನೀಡಿದ್ದಾರೆ. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಸ್ವಾತಂತ್ರ್ಯ ದಿನಾಚರಣೆ ಸಂಬಂಧ ಶುಕ್ರವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು. ಮಳೆಗಾಲ ಆಗಿರುವುದರಿಂದ ನಗರದ ಕೋಟೆ ಆವರಣದಲ್ಲಿ ಕಾರ್ಯಕ್ರಮ ಆಯೋಜಿಸಲು ಸಭೆಯಲ್ಲಿ ತೀರ್ಮಾನಿಸಲಾಯಿತು.
ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಶ್ರೀನಿವಾಸ್ ಕಾರ್ಯಕ್ರಮ ಸಂದರ್ಭ ಐದು ಶಾಲೆಗಳ ತಂಡಗಳು ಸಾಂಸ್ಕೃತಿಕ ಕಾರ್ಯಕ್ರಮ ನೀಡಲಿದ್ದು, 345 ವಿದ್ಯಾರ್ಥಿಗಳು ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದರು.ಆರ್‌ಪಿಐ ಪೊಲೀಸ್ ಇನ್‌ಸ್ಪೆಕ್ಟರ್ ಗಣೇಶ್ ಅವರು ಮಾಹಿತಿ ನೀಡಿ 22 ತಂಡಗಳು ಪಥ ಸಂಚಲನದಲ್ಲಿ ಪಾಲ್ಗೊಳ್ಳಲಿವೆ. ಸಿವಿಲ್ ಪೊಲೀಸ್, ಅರಣ್ಯ ರಕ್ಷಕ ದಳ, ಎನ್‌ಸಿಸಿ, ಸ್ಕೌಟ್ಸ್ ಮತ್ತು ಗೈಡ್ಸ್, ಹೋಮ್ ಗಾರ್ಡ್ ತಂಡ ಸೇರಿದಂತೆ ವಿವಿಧ ಶಾಲೆಯ ವಿದ್ಯಾರ್ಥಿಗಳು ಪಥ ಸಂಚಲನದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದರು.
ಹೆಚ್ಚುವರಿ ಜಿಲ್ಲಾಧಿಕಾರಿ ಸಹನಾ ಎಸ್. ಹಾದಿಮನಿ ಅವರು ಕಳೆದ ಬಾರಿಯಂತೆ ಈ ಬಾರಿಯು ಸಹ ಸ್ವಾತಂತ್ರ್ಯ ದಿನ ಆಚರಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ನಿರ್ದೇಶನ ನೀಡಿದರು.ಜಿಪಂ ಸಿಇಒ ಆನಂದ್ ಪ್ರಕಾಶ್ ಮೀನಾ, ಉಪ ಅರಣ್ಯ ಸಂರಕ್ಷಣಾಧಿಕಾರಿ ಅಭಿಷೇಕ್, ಉಪ ವಿಭಾಗಾಧಿಕಾರಿ ನಿತಿನ್ ಚಕ್ಕಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸತೀಶ್ ಕುಮಾರ್, ಸೈನಿಕ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರಾದ ಬಿ.ಆರ್. ಶೆಟ್ಟಿ, ಆಹಾರ ಇಲಾಖೆ ಜಂಟಿ ನಿರ್ದೇಶಕರಾದ ಶಾಂತ ಗೌಡ, ಲೋಕೋಪಯೋಗಿ ಇಲಾಖೆ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಗಿರೀಶ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರಾದ ಪ್ರಸನ್ನ ಕುಮಾರ್, ಪ್ರಾದೇಶಿಕ ಸಾರಿಗೆ ಅಧಿಕಾರಿ ಸತೀಶ, ಭೂ ದಾಖಲೆಗಳ ಉಪ ನಿರ್ದೇಶಕ ನಿರಂಜನ, ಜಿಲ್ಲಾ ಸಾಂಖ್ಯಿಕ ಅಧಿಕಾರಿ ನಾರಾಯಣ, ಪಂಚಾಯತ್ ರಾಜ್ ಎಂಜಿನಿಯರ್ ನಾಯಕ್, ಜಿಲ್ಲಾ ಉದ್ಯೋಗ ವಿನಿಮಯಾಧಿಕಾರಿ ಮಂಜುನಾಥ್, ಕ್ಷೇತ್ರ ಶಿಕ್ಷಣಾಧಿಕಾರಿ ಮಹೇಶ್, ಬಿಸಿಎಂ ಇಲಾಖೆ ಅಧಿಕಾರಿ ಕವಿತಾ, ಅಗ್ನಿಶಾಮಕ ಅಧಿಕಾರಿ ಶೋಭಿತ್, ಇತರರು ಇದ್ದರು.