ಚನ್ನರಾಯಪಟ್ಟಣ ತಾಲೂಕಿನ ಶೇ. ೮೦ಕ್ಕೂ ಹೆಚ್ಚು ರೈತರು ತೋಟಗಳಲ್ಲಿ ಮನೆಗಳನ್ನು ನಿರ್ಮಿಸಿಕೊಂಡು ವಾಸಿಸುತ್ತಿದ್ದು, ಕೃಷಿ ಚಟುವಟಿಕೆಗಳ ಜೊತೆಗೆ ಹೈನುಗಾರಿಕೆ, ವಿದ್ಯಾರ್ಥಿಗಳ ವ್ಯಾಸಂಗ ಸೇರಿ ಹಲವು ದೈನಂದಿನ ಚಟುವಟಿಕೆಗಳಿಗೆ ವಿದ್ಯುತ್ ಅತ್ಯಗತ್ಯವಾಗಿದೆ. ಕಳೆದ ಒಂದು ತಿಂಗಳಿಂದ ಗ್ರಾಮೀಣ ಪ್ರದೇಶಗಳಲ್ಲಿ ವಿದ್ಯುತ್ ಕಡಿತವಾಗುತ್ತಿರುವುದರಿಂದ ಹೈನುಗಾರರು, ವಿದ್ಯಾರ್ಥಿಗಳು ಸೇರಿ ಸಾರ್ವಜನಿಕರು ತೊಂದರೆ ಅನುಭವಿಸುತ್ತಿದ್ದಾರೆ. ಈ ಕುರಿತು ಗ್ರಾಮೀಣ ಭಾಗದ ಜನರು ತಮ್ಮ ಗಮನಕ್ಕೆ ತಂದಿದ್ದಾರೆ ಎಂದರು.
ಕನ್ನಡಪ್ರಭ ವಾರ್ತೆ ಚನ್ನರಾಯಪಟ್ಟಣ
ಗ್ರಾಮೀಣ ಭಾಗದ ರೈತರ ಹಿತದೃಷ್ಟಿಯಿಂದ ಸಂಜೆ 6 ಗಂಟೆಯಿಂದ ರಾತ್ರಿ ೧೦ ಗಂಟೆಯವರೆಗೆ ನಿರಂತರ ನಾಲ್ಕು ಗಂಟೆಗಳ ಕಾಲ ವಿದ್ಯುತ್ ಪೂರೈಕೆ ಮಾಡುವಂತೆ ಶಾಸಕ ಸಿ. ಎನ್. ಬಾಲಕೃಷ್ಣ ಅವರು ಚೆಸ್ಕಾಂ ಅಧಿಕಾರಿಗಳಿಗೆ ಸೂಚಿಸಿದರು.ಪಟ್ಟಣದ ಸೆಸ್ ಕಾರ್ಯಪಾಲಕ ಅಭಿಯಂತರರ ಕಚೇರಿಯಲ್ಲಿ ಅಭಿಯಂತರರು ಹಾಗೂ ಎಸ್‌ಒಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ತಾಲೂಕಿನ ಶೇ. ೮೦ಕ್ಕೂ ಹೆಚ್ಚು ರೈತರು ತೋಟಗಳಲ್ಲಿ ಮನೆಗಳನ್ನು ನಿರ್ಮಿಸಿಕೊಂಡು ವಾಸಿಸುತ್ತಿದ್ದು, ಕೃಷಿ ಚಟುವಟಿಕೆಗಳ ಜೊತೆಗೆ ಹೈನುಗಾರಿಕೆ, ವಿದ್ಯಾರ್ಥಿಗಳ ವ್ಯಾಸಂಗ ಸೇರಿ ಹಲವು ದೈನಂದಿನ ಚಟುವಟಿಕೆಗಳಿಗೆ ವಿದ್ಯುತ್ ಅತ್ಯಗತ್ಯವಾಗಿದೆ. ಕಳೆದ ಒಂದು ತಿಂಗಳಿಂದ ಗ್ರಾಮೀಣ ಪ್ರದೇಶಗಳಲ್ಲಿ ವಿದ್ಯುತ್ ಕಡಿತವಾಗುತ್ತಿರುವುದರಿಂದ ಹೈನುಗಾರರು, ವಿದ್ಯಾರ್ಥಿಗಳು ಸೇರಿ ಸಾರ್ವಜನಿಕರು ತೊಂದರೆ ಅನುಭವಿಸುತ್ತಿದ್ದಾರೆ. ಈ ಕುರಿತು ಗ್ರಾಮೀಣ ಭಾಗದ ಜನರು ತಮ್ಮ ಗಮನಕ್ಕೆ ತಂದಿದ್ದಾರೆ ಎಂದರು.
ತೋಟದ ಮನೆಗಳಲ್ಲಿ ವಾಸಿಸುವವರು ಚಿರತೆಗಳ ಹಾವಳಿಯಿಂದ ರಾತ್ರಿ ವೇಳೆ ಮನೆಯಿಂದ ಹೊರಬರಲು ಸಾಧ್ಯವಾಗುತ್ತಿಲ್ಲ. ಪರೀಕ್ಷೆ ಸಮಯವಾದ್ದರಿಂದ ವಿದ್ಯಾರ್ಥಿಗಳ ವ್ಯಾಸಂಗಕ್ಕೂ ತೊಂದರೆಯಾಗಿದ್ದು, ವಿದ್ಯುತ್ ಇಲ್ಲದಿರುವುದರಿಂದ ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಆದ್ದರಿಂದ ಸಂಜೆ ೬ರಿಂದ ರಾತ್ರಿ ೧೦ರವರೆಗೆ ವಿದ್ಯುತ್ ಪೂರೈಕೆ ಮಾಡುವ ಮೂಲಕ ಸಮಸ್ಯೆ ನಿವಾರಿಸಬೇಕು. ಈ ಕುರಿತು ಮೇಲಧಿಕಾರಿಗಳ ಗಮನಕ್ಕೆ ತಂದು ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.ರಾಜ್ಯದ ಪ್ರತಿಯೊಂದು ವಿಧಾನಸಭಾ ಕ್ಷೇತ್ರಕ್ಕೂ ವಾರ್ಷಿಕ ೩೦ ಲಕ್ಷ ರು. ಅನುದಾನ ಬಿಡುಗಡೆಯಾಗುತ್ತಿದೆ. ಆದರೆ ಶ್ರವಣಬೆಳಗೊಳ ವಿಧಾನಸಭಾ ಕ್ಷೇತ್ರಕ್ಕೆ ಹಲವು ವರ್ಷಗಳಿಂದ ಅನುದಾನ ನೀಡದಿರುವುದಕ್ಕೆ ಕಾರಣವೇನುವೆಂದು ಪ್ರಶ್ನಿಸಿದ ಅವರು, ಕಾಮಗಾರಿ ಪೂರ್ಣ ಗೊಳಿಸಿ ಹಲವು ತಿಂಗಳುಗಳಾದರೂ ಗುತ್ತಿಗೆದಾರರಿಗೆ ಬಿಲ್ ಪಾವತಿಯಾಗದಿರುವ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು.
ತ್ವರಿತ ವಿದ್ಯುತ್ ಸಂಪರ್ಕ ಕಲ್ಪಿಸುವ ಕಾಮಗಾರಿ ಪೂರ್ಣಗೊಂಡಿದ್ದರೂ ಒಂದು ವರ್ಷದಿಂದ ವಿದ್ಯುತ್ ಪರಿವರ್ತಕಗಳನ್ನು ಒದಗಿಸದೆ ಗುತ್ತಿಗೆದಾರರಿಗೆ ತೊಂದರೆ ನೀಡುತ್ತಿ ರುವುದು ಸರಿ ಯಲ್ಲ, ರೈತರು ಸಮಸ್ಯೆಗಳ ಕುರಿತು ಎಸ್‌ಒಗಳಿಗೆ ದೂರವಾಣಿ ಕರೆ ಮಾಡಿದಾಗ ಕರೆ ಸ್ವೀಕರಿಸದೇ ಉಡಾಫೆ ತೋರುತ್ತಿರುವುದು ಸರಿಯಲ್ಲ. ರೈತರ ಕರೆಗಳನ್ನು ಸ್ವೀಕರಿಸಿ, ಅವರ ಸಮಸ್ಯೆಗಳನ್ನು ಆಲಿಸಿ ಸೂಕ್ತ ಪರಿಹಾರ ಒದಗಿಸಬೇಕೆಂದು ಸೂಚಿಸಿದರು.ತಾಲೂಕಿನಲ್ಲಿ ಶೇ.೭೦ರಷ್ಟು ಮಳೆ ಕೊರತೆಯಾಗಿದ್ದು, ಅದರಿಂದ ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ. ತಾಲ್ಲೂಕಿನಲ್ಲಿ ೪೭ ಸಾವಿರ ಅಧಿಕೃತ ಕೊಳವೆ ಬಾವಿಗಳಿದ್ದು, ಐದು ಸಾವಿರಕ್ಕೂ ಹೆಚ್ಚು ಅನಧಿಕೃತ ಕೊಳವೆ ಬಾವಿ ಗಳಿವೆ. ಇವುಗಳಿಗೆ ಸಮರ್ಪಕ ವಿದ್ಯುತ್ ಪೂರೈಕೆ ಮಾಡದಿರುವುದರಿಂದ ಜನರು ಹಾಗೂ ಜಾನುವಾರುಗಳಿಗೆ ನೀರಿನ ಸಮಸ್ಯೆ ಉಂಟಾಗುತ್ತಿದೆ ಎಂದರು.ಒಂದು ತಿಂಗಳಲ್ಲಿ ೧೦೦ ಎಂಪಿಎ ಪರಿವರ್ತಕ ಅಳವಡಿಕೆ:೨೨೦ ಕೆ.ವಿ. ವಿದ್ಯುತ್ ಸ್ವೀಕರಣಾ ಕೇಂದ್ರ ದಲ್ಲಿ ಸುಟ್ಟುಹೋಗಿರುವ ೧೦೦ ಎಂ.ಪಿ.ಎ. ಸಾಮರ್ಥ್ಯದ ವಿದ್ಯುತ್ ಪರಿವರ್ತಕವನ್ನು ಬದಲಾಯಿಸಲು ಕ್ರಮ ಕೈಗೊಳ್ಳಲಾಗಿದೆ. ಒಂದು ತಿಂಗಳೊಳಗೆ ಕಾಮಗಾರಿ ಪೂರ್ಣ ಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.ತಾಲ್ಲೂಕಿನಲ್ಲಿ ತ್ವರಿತವಾಗಿ ವಿದ್ಯುತ್ ಸಂಪರ್ಕ ಕಲ್ಪಿಸುವ ನಿಟ್ಟಿನಲ್ಲಿ ಈಗಾಗಲೇ ೬೧ ವಿದ್ಯುತ್ ಪರಿವರ್ತಕಗಳನ್ನು ಅಳವಡಿಸಲಾ ಗಿದ್ದು, ಇನ್ನೂ ೩೫ ಪರಿವರ್ತಕಗಳನ್ನು ಒಂದು ವಾರದೊಳಗೆ ಅಳವಡಿಸಬೇಕು. ಗಂಗಾ ಕಲ್ಯಾಣ ಯೋಜನೆಯ ಫಲಾನುಭವಿಗಳಿಗೆ ಅಗತ್ಯವಿರುವ ವಿದ್ಯುತ್ ಪರಿವರ್ತಕಗಳನ್ನು ಶೀಘ್ರ ಅಳವಡಿಸಿ ಸಂಪರ್ಕ ಕಲ್ಪಿಸಬೇಕೆಂದು ಸೂಚಿಸಿದರು.ಪರಿವರ್ತಕಗಳ ಸುರಕ್ಷತೆಗೆ ಆದ್ಯತೆ:ಪಟ್ಟಣ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಅಳವಡಿಸಿರುವ ವಿದ್ಯುತ್ ಪರಿವರ್ತಕಗಳ ಸಂರಕ್ಷಣೆ ಮತ್ತು ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಪರಿವರ್ತಕಗಳ ಸುತ್ತಮುತ್ತಲಿನ ಪ್ರದೇಶಗಳನ್ನು ನಿಯಮಿತವಾಗಿ ಪರಿಶೀಲಿಸಿ, ಯಾವುದೇ ಅವಘಡ ಸಂಭವಿಸದಂತೆ ಮುನ್ನೆ ಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ತಿಳಿಸಿದರು.ವಿದ್ಯುತ್ ಕಂಬಗಳ ಮೇಲೆ ಬಳ್ಳಿಗಳು ಹಾಗೂ ಗಿಡಗಂಟಿಗಳು ಬೆಳೆದು ವಿದ್ಯುತ್ ತಂತಿಗಳಿಗೆ ತೊಂದರೆಯಾಗುತ್ತಿದೆ. ಗ್ಯಾಂಗ್ ಮನ್‌ಗಳು ತಮ್ಮ ಕರ್ತವ್ಯವನ್ನು ಸಮರ್ಪಕ ವಾಗಿ ನಿರ್ವಹಿಸುತ್ತಿದ್ದಾರೆಯೇ ಎಂಬುದನ್ನು ಅಧಿಕಾರಿಗಳು ಪರಿಶೀಲಿಸಬೇಕೆಂದು ಸೂಚಿಸಿದರು.ಸಭೆಯಲ್ಲಿ ಐಪಿ ಫೀಡರ್ ಸಮಸ್ಯೆ, ಗಂಗಾ ಕಲ್ಯಾಣ ಯೋಜನೆಯ ವಿದ್ಯುತ್ ಸಂಪರ್ಕಗಳನ್ನು ಶೀಘ್ರ ಕಲ್ಪಿಸುವುದು, ಗ್ರಾಮೀಣ ಭಾಗದ ರೈತರು ಎದುರಿಸುತ್ತಿರುವ ವಿದ್ಯುತ್ ಸಮಸ್ಯೆಗಳ ಪರಿಹಾರ, ಲಿಂಕ್ಸ್ ಲೈನ್ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಿ ಸಂಪರ್ಕ ಕಲಿಸುವುದು. ಪದೇಪದೇ ಉಂಟಾ ಗುತ್ತಿರುವ ವಿದ್ಯುತ್ ವ್ಯತ್ಯಯಕ್ಕೆ ಪರಿಹಾರ ಕಂಡು ಕೊಳ್ಳುವುದು, ಹಾಳಾಗಿರುವ ವಿದ್ಯುತ್ ಪರಿವರ್ತಕಗಳನ್ನು ಬದಲಾಯಿಸುವುದು ಹಾಗೂ ಹೊಸ ವಿದ್ಯುತ್ ಲೈನ್‌ಗಳ ಕಾಮಗಾರಿ ಗಳನ್ನು ಕೈಗೊಳ್ಳುವುದು ಸೇರಿ ವಿವಿಧ ವಿ?ಯ ಗಳ ಕುರಿತು ಶಾಸಕರು ಅಧಿಕಾರಿಗಳಿಂದ ಮಾಹಿತಿ ಪಡೆದರು.ಸಭೆಯಲ್ಲಿ ಸೆಸ್ಕ್ ಕಾರ್ಯಪಾಲಕ ಅಭಿಯಂತರರಾದ ಆರ್. ರತ್ನಾ, ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಹರೀಶ್, ಕೃಷ್ಣ, ವಜ್ರಕುಮಾರ್ ಸೇರಿ ಹಿರಿಯ ಅಧಿಕಾರಿಗಳು, ಅಭಿಯಂತರರು, ಗುತ್ತಿಗೆದಾರರು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.