ಕನ್ನಡಪ್ರಭ ವಾರ್ತೆ ಬಾಗಲಕೋಟೆರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಜಗನ್ನಾಥ ಹಲಮಡಗಿ ಅವರು ಜಿಲ್ಲಾಧಿಕಾರಿ ಸಂಗಪ್ಪ, ಜಿ.ಪಂ ಸಿಇಒ ಗಜಾನನ ಬಾಲೆ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿದ್ದಾರ್ಥ ಗೋಯಲ್ ಅವರನ್ನು ಭೇಟಿ ಮಾಡಿ ಜಿಲ್ಲೆಯ ಮಕ್ಕಳ ಹಕ್ಕುಗಳ ರಕ್ಷಣೆ, ಶಿಕ್ಷಣ, ಬಾಲ್ಯವಿವಾಹ, ಪೊಕ್ಸೋ ಪ್ರಕರಣಗಳ ಬಗ್ಗೆ ಚರ್ಚೆ ನಡೆಸಿದರು.
ಕನ್ನಡಪ್ರಭ ವಾರ್ತೆ ಬಾಗಲಕೋಟೆ
ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಜಗನ್ನಾಥ ಹಲಮಡಗಿ ಅವರು ಜಿಲ್ಲಾಧಿಕಾರಿ ಸಂಗಪ್ಪ, ಜಿ.ಪಂ ಸಿಇಒ ಗಜಾನನ ಬಾಲೆ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿದ್ದಾರ್ಥ ಗೋಯಲ್ ಅವರನ್ನು ಭೇಟಿ ಮಾಡಿ ಜಿಲ್ಲೆಯ ಮಕ್ಕಳ ಹಕ್ಕುಗಳ ರಕ್ಷಣೆ, ಶಿಕ್ಷಣ, ಬಾಲ್ಯವಿವಾಹ, ಪೊಕ್ಸೋ ಪ್ರಕರಣಗಳ ಬಗ್ಗೆ ಚರ್ಚೆ ನಡೆಸಿದರು.ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ನೂತನ ಸದಸ್ಯರಾಗಿ ಆಯ್ಕೆಯಾಗಿ ಮೊದಲ ಬಾರಿಗೆ ಜಿಲ್ಲೆಗೆ ಭೇಟಿ ನೀಡಿದ ಜಗನ್ನಾಥ ಹಲಮಡಗಿ ಅವರು ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿ ಮಕ್ಕಳ ಶಿಕ್ಷಣದ ಹಕ್ಕು, ಆರೋಗ್ಯ, ಪೌಷ್ಠಿಕತೆ, ಬಾಲ್ಯವಿವಾಹ ತಡೆ, ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣಗಳ ತಡೆ ಹಾಗೂ ಸರ್ಕಾರದ ವಿವಿಧ ಮಕ್ಕಳ ಕಲ್ಯಾಣ ಯೋಜನೆಗಳ ಪರಿಣಾಮಕಾರಿ ಅನುಷ್ಠಾನದ ಕುರಿತು ಸಮಾಲೋಚನೆ ನಡೆಸಿದರು. ಮಕ್ಕಳಿಗೆ ಸುರಕ್ಷಿತ ಹಾಗೂ ಹಕ್ಕು ಸಮ್ಮತ ವಾತಾವರಣ ಕಲ್ಪಿಸಲು ಎಲ್ಲ ಇಲಾಖೆಗಳು ಸಮನ್ವಯದೊಂದಿಗೆ ಕಾರ್ಯನಿರ್ವಹಿಸುವ ಅಗತ್ಯವಿದೆ ಎಂದರು.
ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಬರುವ ವಿವಿಧ ವಸತಿ ನಿಲಯದ ಮಕ್ಕಳಿಗೆ ಗುಣಮಟ್ಟದ ಆಹಾರ ಪೂರೈಸುವ ನಿಟ್ಟಿನಲ್ಲಿ ಪ್ರತ್ಯೇಕ ಎಸ್ಓಪಿ ಮಾಡಲಾಗುವುದು. ಸ್ವಚ್ಛತೆಗೆ ಹೆಚ್ಚಿನ ಒತ್ತು ನೀಡುವಂತೆ ಅಧಿಕಾರಿಗಳು ಸೂಚಿಸಲಾಗಿದೆ. ಅಂಗನವಾಡಿ ದುರಸ್ಥಿಗಳು ಇದ್ದಲ್ಲಿ ವಿಬಿ-ಜಿ ರಾಮ್ ಜಿ ಯೋಜನೆಯಡಿ ಕಾಮಗಾರಿ ಕೈಗೊಳ್ಳಲು ಅವಕಾಶವಿದ್ದು, ಅಗತ್ಯ ದುರಸ್ಥಿ ಮಾಡಿಕೊಳ್ಳಲು ತಿಳಿಸಿದರು. ಅಲ್ಲದೇ ಮಕ್ಕಳಿಗೆ ಮೊಟ್ಟೆ ಹಾಗೂ ಊಟದ ಮೆನುವಿನಲ್ಲಿ ಇಲ್ಲಿಯ ವಾತಾವರಣಕ್ಕೆ ತಕ್ಕಂತೆ ಆಹಾರ ನೀಡಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಗೆ ಭೇಟಿ ನೀಡಿ, ಮಕ್ಕಳ ಮೇಲಿನ ಅಪರಾಧಗಳ ತಡೆ, ಪೊಕ್ಸೋ ಕಾಯ್ದೆ ಪ್ರಕರಣಗಳ ತನಿಖೆ, ಕಾಣೆಯಾದ ಮಕ್ಕಳ ಪತ್ತೆ, ಬಾಲಸ್ನೇಹಿ ಪೊಲೀಸ್ ವ್ಯವಸ್ಥೆ ಹಾಗೂ ಮಕ್ಕಳ ಸುರಕ್ಷತೆಗೆ ಕೈಗೊಂಡಿರುವ ಕ್ರಮಗಳ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿದರು.
ಭೇಟಿ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪನಿರ್ದೇಶಕ ಕೆ.ಪ್ರಭಾಕರ, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಪಂಕಜ, ಜಿಲ್ಲಾ ಮಕ್ಕಳ ಹಕ್ಕುಗಳ ರಕ್ಷಣಾಧಿಕಾರಿ ಡಾ.ವೀಣಾ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ರಮೇಶ ಸೂಳಿಕೇರಿ ಸೇರಿದಂತೆ ಇತರರು ಇದ್ದರು. ಜಿ.ಪಂ ಸಿಇಒ ಅವರೊಂದಿಗೆ ನಡೆದ ಚರ್ಚಿಸಲಾಗಿದ್ದು, ಅಂಗನವಾಡಿ, ಶಾಲಾ ಶಿಕ್ಷಣ, ಪೌಷ್ಠಿಕ ಆಹಾರ, ಮಕ್ಕಳ ಅಭಿವೃದ್ಧಿಗೆ ಸಂಬಂಧಿಸಿದ ಕಾರ್ಯಕ್ರಮಗಳು ಹಾಗೂ ಗ್ರಾಮೀಣ ಮಟ್ಟದಲ್ಲಿ ಮಕ್ಕಳ ಹಕ್ಕುಗಳ ಕುರಿತು ಜಾಗೃತಿ ಮೂಡಿಸುವ ಕಾರ್ಯಕ್ರಮಗಳ ಅನುಷ್ಠಾನ ಕುರಿತು ಮಾಹಿತಿ ಪಡೆಯಲಾಗಿದೆ. ಅಧಿಕಾರಿಗಳು ಮಕ್ಕಳ ಹಕ್ಕುಗಳ ರಕ್ಷಣೆ ಕುರಿತು ಪ್ರೌಢಶಾಲಾ ವಿಭಾಗದ ಮುಖ್ಯೋಪಾದ್ಯಾಯರಿಗೆ ತರಬೇತಿ ಕಾರ್ಯಾಗಾರ ಹಮ್ಮಿಕೊಳ್ಳಬೇಕು.-ಜಗನ್ನಾಥ ಹಲಮಡಗಿ, ಆಯೋಗದ ಸದಸ್ಯ