ಜಿಯೋ ಟ್ಯಾಗಿಂಗ್ ಕಾರ್ಯ ಪೂರ್ಣಗೊಳಿಸಲು ಸೂಚನೆ

| Published : Sep 13 2025, 02:04 AM IST

ಸಾರಾಂಶ

ವಾಸದ ಮನೆಗಳಿಗೆ ವಿದ್ಯುತ್ ಸಂಪರ್ಕವಿರುವ ಬಗ್ಗೆ ಖಾತ್ರಿ ಪಡಿಸಿಕೊಂಡು, ವಾಸದ ಮನೆಗಳ ಆರ್.ಆರ್ ಮೀಟರ್ ಆಧಾರದ ಮೇಲೆ ಮನೆಗಳನ್ನು ಗುರುತಿಸಿ ಅಲ್ಲಿರುವ ಜನರ ಸಮೀಕ್ಷೆ ಮಾಡಿ, ಯಾವುದೇ ಮನೆಗಳು ಸಮೀಕ್ಷಾ ವ್ಯಾಪ್ತಿಯಿಂದ ತಪ್ಪಿ ಹೋಗದಂತೆ ನಿಗಾ ವಹಿಸಬೇಕು. ಮೀಟರ್ ನಂಬರ ಇಲ್ಲದ ಅಲೆಮಾರಿಗಳಿಗೆ ಪ್ರತ್ಯೇಕ ಕಾಲಂ ನಮೂದಿಸಿ

ಕನ್ನಡಪ್ರಭ ವಾರ್ತೆ ಕೋಲಾರಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಆ.೨೩ ರಿಂದ ಆರಂಭಿಸಿದ್ದು, ವಿದ್ಯುತ್ ಮೀಟರ್ ರೀಡರುಗಳು ಎಲ್ಲ ಮನೆಗಳನ್ನು ಜಿಯೋಟ್ಯಾಗಿಂಗ್ ಮಾಡುವ ಕಾರ್ಯ ಪ್ರಾರಂಭಿಸಿದ್ದಾರೆ. ಜಿಲ್ಲೆಯಲ್ಲಿ ಆದಷ್ಟು ಬೇಗ ಯಶಸ್ವಿಯಾಗಿ ಈ ಕಾರ್ಯಪೂರ್ಣಗೊಳಿಸುವಂತೆ ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು. ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕೈಗೊಳ್ಳುವ ಕುರಿತು ವಿವಿಧ ಇಲಾಖೆ ಅಧಿಕಾರಿಗಳೊಂದಿಗೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪ್ರಗತಿ ಪರಿಶೀಲನೆ ಸಭೆ ನಡೆಸಿದರು.ಪ್ರತ್ಯೇಕ ಸಂಖ್ಯೆ ನಮೂದಿಸಿ

ವಾಸದ ಮನೆಗಳಿಗೆ ವಿದ್ಯುತ್ ಸಂಪರ್ಕವಿರುವ ಬಗ್ಗೆ ಖಾತ್ರಿ ಪಡಿಸಿಕೊಂಡು, ವಾಸದ ಮನೆಗಳ ಆರ್.ಆರ್ ಮೀಟರ್ ಆಧಾರದ ಮೇಲೆ ಮನೆಗಳನ್ನು ಗುರುತಿಸಿ ಅಲ್ಲಿರುವ ಜನರ ಸಮೀಕ್ಷೆ ಮಾಡಿ, ಯಾವುದೇ ಮನೆಗಳು ಸಮೀಕ್ಷಾ ವ್ಯಾಪ್ತಿಯಿಂದ ತಪ್ಪಿ ಹೋಗದಂತೆ ನಿಗಾ ವಹಿಸಬೇಕು. ಮೀಟರ್ ನಂಬರ ಇಲ್ಲದ ಅಲೆಮಾರಿ, ಅರೆ ಅಲೆಮಾರಿ ವಾಸಸ್ಥಳ ಮತ್ತು ಕೊಳಚೆ ಪ್ರದೇಶಗಳ, ಅರಣ್ಯ ಪ್ರದೇಶಗಳ ಪ್ರತಿ ಕುಟುಂಬದ ನಂಬರ್ ಆಪ್ಷನ್‌ನಲ್ಲಿ ಸೃಜಿಸಬೇಕು. ಸಂಬಂಧಿಸಿದ ಅಧಿಕಾರಿಗಳು ಈ ಕಾರ್ಯ ಅಚ್ಚುಕಟ್ಟಾಗಿ ನಿರ್ವಹಿಸಲು ಸೂಚಿಸಿದರು.ಎನ್.ಎಸ್.ಎಸ್ ವಿದ್ಯಾರ್ಥಿಗಳು, ಆಶಾ ಕಾರ್ಯಕರ್ತೆಯರ ಮೂಲಕ ಮನೆ ಮನೆಗೆ ಭೇಟಿ ನೀಡಿ ಸಮೀಕ್ಷೆ ಕುರಿತು ಸೂಕ್ತ ಅರಿವು ಮೂಡಿಸಬೇಕು. ಸಂಬಂಧಿಸಿದ ನೋಡಲ್ ಅಧಿಕಾರಿಗಳು ಈ ಕುರಿತು ಮೇಲುಸ್ತುವಾರಿ ನೋಡಿಕೊಳ್ಳಲು ಹಾಗೂ ಗ್ರಾಮೀಣ ಹಾಗೂ ನಗರ ಸ್ಥಳಗಳಲ್ಲಿ ಕಸ ವಿಲೇವಾರಿ ವಾಹನದ ಮೂಲಕ ಆಡಿಯೋ ಕ್ಲಿಪ್ ಮೂಲಕ ಜಾಗೃತಿ ಮೂಡಿಸಬೇಕು. ಗ್ರಾಮೀಣ ಪ್ರದೇಶದ ಜವಾಬ್ದಾರಿ ಆಯಾ ತಾ.ಪಂ ಇಓಗಳು, ಪಿಡಿಓಗಳು ಹಾಗೂ ನಗರ ಪ್ರದೇಶಗಳಲ್ಲಿ ಪಿ.ಡಿ.ಡಿಯುಡಿಸಿ ಅವರು ಜವಾಬ್ದಾರಿ ವಹಿಸಿಕೊಳ್ಳಲುವಂತೆ ಹೇಳಿದರು.ಜವಾಬ್ದಾರಿಯಿಂದ ಹೊಣೆ ನಿರ್ವಹಿಸಿ

ತಹಸೀಲ್ದಾರ್‌ರು, ತಾಪಂ ಇಓಗಳು, ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿಗಳು, ಪಿಡಿಓಗಳು, ಗ್ರಾಮ ಆಡಳಿತಾಧಿಕಾರಿಗಳು ಹಾಗೂ ಪಿ.ಡಿ ಡಿಯುಡಿಸಿ ಹೆಚ್ಚು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು.ಎರಡನೇಯ ಹಂತದ ಸಮೀಕ್ಷೆಯ ಕಾರ್ಯವನ್ನು ದಸರಾ ರಜೆಯ ಅವಧಿಯಲ್ಲಿ ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರವರೆಗೆ ನಡೆಸಲು ಗುರಿ ಹೊಂದಲಾಗಿದೆ. ಪ್ರತಿ ಮನೆಗೂ ಸ್ಟಿಕ್ಕರ್ ಅಂಟಿಸಿ ಸಮೀಕ್ಷಾ ದಾರರಿಗೆ ಮನೆಯ ಗುರುತಿಸುವಿಕೆ ಸುಲಭವಾಗಲು ಸಾರ್ವಜನಿಕರು ಮತ್ತು ಪ್ರತಿಯೊಂದು ಕುಟುಂಬದ ಸದಸ್ಯರಿಗೆ ಮನವಿ ಮಾಡಿದರು.

ಸ್ಟಿಕರ್ ಅಂಟಿಸುವ ಕಾರ್ಯ

ಜಿಲ್ಲೆಯಲ್ಲಿ ೪೧.೭೩ ಲಕ್ಷ ಕುಟುಂಬಗಳು ಇರುವುದಾಗಿ ಅಂದಾಜಿಸಲಾಗಿದೆ. ಇಂಧನ ಇಲಾಖೆ ಮೀಟರ್ ರೀಡರ್‌ಗಳು ಆರ್.ಆರ್ ನಂಬರ್ ಪ್ರಕಾರ ಜಿಯೋ ಟ್ಯಾಗಿಂಗ್ ಸ್ಟಿಕರ್ ಅಂಟಿಸುವ ಕಾರ್ಯ ಆರಂಭಿಸಲಾಗಿದೆ. ಇದಾದ ನಂತರ ಸಮೀಕ್ಷೆ ಕಾರ್ಯ ವ್ಯವಸ್ಥಿತವಾಗಿ ಕೈಗೊಳ್ಳಲು ಪ್ರತಿ ಕುಟುಂಬಕ್ಕೆ ೧೫೦ ಕುಟುಂಬಕ್ಕೆ ಒಬ್ಬ ಗಣತಿದಾರರಂತೆ ೨೦೦೦ಕ್ಕೂ ಹೆಚ್ಚು ಗಣತಿದಾರರನ್ನು ನೇಮಿಸಲಾಗುವುದು. ಪ್ರತಿ ೨೦ ಗಣತಿದಾರಿಗೆ ಒಬ್ಬರು ಮೇಲ್ವಿಚಾರಕರನ್ನು ನಿಗದಿಪಡಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿ ತರಬೇತಿಗಳಿಗೂ ಸಿದ್ಧತೆ ಮಾಡಿಕೊಳ್ಳಲು ಸೂಚಿಸಿದರು. ಪರಸ್ಪರ ಸಮನ್ವಯತೆ ಅಗತ್ಯ

ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳು, ಸಮಾಜ ಕಲ್ಯಾಣ ಇಲಾಖೆ, ಶಾಲಾ ಶಿಕ್ಷಣ ಇಲಾಖೆ, ಡಯಟ್, ಪದವಿಪೂರ್ವ ಕಾಲೇಜು, ಸಿಆರ್ ಪಿ,ಬಿಆರ್ ಪಿ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರು, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕರು, ಜೆಸ್ಕಾಂ, ಇಂಧನ ಇಲಾಖೆ ಅಧಿಕಾರಿಗಳು ಪರಸ್ಪರ ಸಮನ್ವಯತೆಯೊಂದಿಗೆ ಈ ಕಾರ್ಯ ಯಶಸ್ವಿಗೊಳಿಸಲು ಅವರು ಸೂಚಿಸಿದರು.ಸಭೆಯಲ್ಲಿ ಜಿಪಂ ಸಿಇಒ ಡಾ. ಪ್ರವೀಣ್ ಪಿ.ಬಾಗೇವಾಡಿ, ಎಸ್.ಪಿ ಡಾ.ಬಿ.ನಿಖಿಲ್, ಸಹಾಯಕ ಆಯುಕ್ತೆ ಡಾ.ಮೈತ್ರಿ, ತಹಸೀಲ್ದಾರ್ ಡಾ.ನಯನ, ಬೆಸ್ಕಾಂ ಕಾರ್ಯನಿರ್ವಾಹಕ ಅಭಿಯಂತರರಾದ ಶೋಭಾ, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಗೀತಾ, ಸಂಖ್ಯೆಕ ಅಧಿಕಾರಿ ರಮೇಶ್ ಇದ್ದರು.