ಭೌತಿಕ ಪ್ರಗತಿ ಸಾಧಿಸಲು ಸೂಚನೆ

| Published : Sep 10 2025, 01:03 AM IST

ಸಾರಾಂಶ

ವಿಶೇಷ ಘಟಕ ಹಾಗೂ ಗಿರಿಜನ ಉಪಯೋಜನೆಯಡಿ ಮಂಜೂರಾದ ಅನುದಾನಕ್ಕೆ ತಕ್ಕಂತೆ ಭೌತಿಕ ಪ್ರಗತಿ ಸಾಧಿಸುವತ್ತ ವಿಶೇಷ ಗಮನ ನೀಡುವಂತೆ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಲಕ್ಷ್ಮೀನಾರಾಯಣ ಸ್ವಾಮಿ ಅಧಿಕಾರಿಗಳಿಗೆ ಸೂಚಿಸಿದರು.

ಕನ್ನಡಪ್ರಭ ವಾರ್ತೆ, ತುಮಕೂರುವಿಶೇಷ ಘಟಕ ಹಾಗೂ ಗಿರಿಜನ ಉಪಯೋಜನೆಯಡಿ ಮಂಜೂರಾದ ಅನುದಾನಕ್ಕೆ ತಕ್ಕಂತೆ ಭೌತಿಕ ಪ್ರಗತಿ ಸಾಧಿಸುವತ್ತ ವಿಶೇಷ ಗಮನ ನೀಡುವಂತೆ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಲಕ್ಷ್ಮೀನಾರಾಯಣ ಸ್ವಾಮಿ ಅಧಿಕಾರಿಗಳಿಗೆ ಸೂಚಿಸಿದರು. ತುಮಕೂರು ತಾಲೂಕು ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ, ತಾಲೂಕು ಮಟ್ಟದ ಎಸ್‌ಸಿಎಸ್‌ಪಿ ಟಿಎಸ್‌ಪಿ ಮೇಲ್ವಿಚಾರಣಾ ಸಮಿತಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಅಧಿಕಾರಿಗಳು ಈಗಾಗಲೇ ಮಂಜೂರಾಗಿರುವ ಅನುದಾನವನ್ನು ಸಮರ್ಪಕವಾಗಿ ಬಳಸಿಕೊಂಡು ಪ್ರಗತಿ ಸಾಧಿಸಲು ಸೂಚನೆ ನೀಡಿದರು.ತಾಲೂಕಿನ ಬಳಗೆರೆ ಗ್ರಾಮ ಪಂಚಾಯಿತಿ ಕಲ್ಯಾಣಪುರ ಗ್ರಾಮದ ಪರಿಶಿಷ್ಟ ಜಾತಿ, ಪಂಗಡ, ಅಲೆಮಾರಿ ಜನಾಂಗದ ಕಾಲೋನಿಗೆ ತಾತ್ಕಾಲಿಕವಾಗಿ ವಿದ್ಯುತ್ ಸಂಪರ್ಕ ಕಲ್ಪಿಸಿ ಕೊಡಬೇಕು. ಬೆಸ್ಕಾಂ ಕ್ಯಾತ್ಸಂದ್ರ ವೃತ್ತದ ವ್ಯಾಪ್ತಿಯಲ್ಲಿರುವ ಬಿಸಿಎಂ ಬಾಲಕಿಯರ ವಿದ್ಯಾರ್ಥಿನಿಲಯಕ್ಕೆ ವಿದ್ಯುತ್ ಸಂಪರ್ಕವಿಲ್ಲದಿರುವ ಬಗ್ಗೆ ಸಮಾಜ ಕಲ್ಯಾಣ ಅಧಿಕಾರಿಗಳು ಹಾಗೂ ಸಂಬಂಧಿಸಿದ ಅಧಿಕಾರಿಗಳು ಪರಿಶೀಲಿಸಿ ಬೆಸ್ಕಾಂ ಅಧಿಕಾರಿಗಳಿಗೆ ಒಂದು ವಾರದೊಳಗೆ ಪ್ರಸ್ತಾವನೆ ಸಲ್ಲಿಸಬೇಕು. ಬೆಸ್ಕಾಂ ಅಧಿಕಾರಿಗಳು ಆದ್ಯತೆ ಮೇಲೆ ವಿದ್ಯುತ್ ಸಂಪರ್ಕ ಕಲ್ಪಿಸಲು ಕ್ರಮ ಕೈಗೊಳ್ಳಬೇಕೆಂದು ಅವರು ಸೂಚಿಸಿದರು.ಕೃಷಿ, ತೋಟಗಾರಿಕೆ, ರೇಷ್ಮೆ, ಅರಣ್ಯ, ಪಶುಪಾಲನೆ ಇಲಾಖೆಗಳ ವಿಶೇಷ ಘಟಕ, ಗಿರಿಜನ ಉಪಯೋನೆಯಡಿ ಮಂಜೂರಾದ ಅನುದಾನಕ್ಕೆ ಪ್ರಗತಿ ವರದಿಯನ್ನು ಸಂಬಂಧಪಟ್ಟ ಇಲಾಖೆಯವರು ಸಲ್ಲಿಸಬೇಕು. ಅನುದಾನ ಬಾಕಿ ಉಳಿಸಿಕೊಂಡಿರುವ ಅಧಿಕಾರಿಗಳು ಭೌತಿಕವಾಗಿ ಸೂಕ್ತ ಪ್ರಗತಿ ಸಾಧಿಸಬೇಕು. ಭೌತಿಕ ಪ್ರಗತಿಗೆ ಅನುಗುಣವಾಗಿ ಖರ್ಚು-ವೆಚ್ಚ ಮಾಡಿ ವರದಿ ಸಲ್ಲಿಸಲು ತಿಳಿಸಿದ ಅವರು ಸಭೆಗೆ ಗೈರಾದ ಅಧಿಕಾರಿಗಳಿಗೆ ಕಾರಣ ಕೇಳಿ ನೋಟಿಸ್ ಜಾರಿ ಮಾಡುವಂತೆ ಸೂಚಿಸಿದರು.ಸಭೆಯಲ್ಲಿ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಶಿವಣ್ಣ, ಯೋಜನಾಧಿಕಾರಿ ಲೋಕೇಶ್ ಕುಮಾರ್ ಬಿ., ಸಹಾಯಕ ನಿರ್ದೇಶಕ(ಗ್ರಾಉ) ಮಂಜುನಾಥ್ ಎಸ್.ಎಸ್., ಕಾರ್ಯಪಾಲಕ ಅಭಿಯಂತರ ಕೃಷ್ಣಕಾಂತ್ ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.