ಬೇಸಿಗೆ ದಿನಗಳಲ್ಲಿ ಜನ ಜಾನುವಾರುಗಳಿಗೆ ಕುಡಿಯಲು ನೀರಿನ ಸಮಸ್ಯೆಯಾಗದಂತೆ ಮುಂಜಾಗ್ರತಾ ಕ್ರಮವನ್ನು ತಾಲೂಕು ಮಟ್ಟದ ಅಧಿಕಾರಿಗಳು ನಿಗಾವಹಿಸಬೇಕು ಎಂದು ತಹಸೀಲ್ದಾರ್ ರವಿಕುಮಾರ ಕೊರವರ ಹೇಳಿದರು.

ಸವಣೂರ : ಬೇಸಿಗೆ ದಿನಗಳಲ್ಲಿ ಜನ ಜಾನುವಾರುಗಳಿಗೆ ಕುಡಿಯಲು ನೀರಿನ ಸಮಸ್ಯೆಯಾಗದಂತೆ ಮುಂಜಾಗ್ರತಾ ಕ್ರಮವನ್ನು ತಾಲೂಕು ಮಟ್ಟದ ಅಧಿಕಾರಿಗಳು ನಿಗಾವಹಿಸಬೇಕು ಎಂದು ತಹಸೀಲ್ದಾರ್ ರವಿಕುಮಾರ ಕೊರವರ ಹೇಳಿದರು.

ಪಟ್ಟಣದ ಉಪವಿಭಾಗಾಧಿಕಾರಿಗಳ ಕಾರ್ಯಾಲಯದ ಸಭಾಂಗಣದಲ್ಲಿ ಶನಿವಾರ ಜರುಗಿದ ಬೇಸಿಗೆಯ ದಿನಗಳಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ತಾಲೂಕಿನ ವಿವಿಧ ಇಲಾಖೆಯ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಗ್ರಾಮೀಣ ಪ್ರದೇಶ ಸೇರಿದಂತೆ ಪಟ್ಟಣಗಳಲ್ಲಿ ಕುಡಿಯುವ ನೀರಿನ ಅಭಾವ ಆಗದಂತೆ ಮುಂಜಾಗ್ರತವಾಗಿ ನೀರಿನ ವ್ಯವಸ್ಥೆಯನ್ನು ಮಾಡಿಕೊಳ್ಳಬೇಕು. ಗ್ರಾಮೀಣ ಪ್ರದೇಶದಲ್ಲಿ ಯಾವುದೇ ಕೊಳವೆ ಬಾವಿಗಳಲ್ಲಿ ನೀರಿನ ಒಳ ಹರಿವು ಕುಟಿಂತಗೊಂಡಿದ್ದರೆ ಅಂತಹ ಬೋರವೆಲ್‌ಗಳನ್ನು ಗುರುತಿಸಿಕೊಂಡು ನೀರಿನ ಅಭಾವ ಎದುರಾಗದಂತೆ ನೋಡಿಕೊಳ್ಳಬೇಕು. ಮತ್ತು ಜಾನುವಾರು ಪ್ರಾಣಿ ಪಕ್ಷಿಗಳಿಗೆ ಪ್ರತಿಯೊಂದು ಸರ್ಕಾರಿ ಇಲಾಖೆಯ ಚಾವಣಿಯ ಮೇಲೆ ನೀರಿನ ತೋಟಿಗಳನ್ನು ಇಡುವದು ಕಡ್ಡಾಯವೆಂದು ಸಭೆಗೆ ಆಗಮಿಸಿದ ತಾಲೂಕು ಮಟ್ಟದ ಇಲಾಖಾ ಅಧಿಕಾರಿಗಳಿಗೆ ಸೂಚನೆಯನ್ನು ನೀಡಿದರು. ಇನ್ನೂ ಗ್ರಾಮೀಣ ಪ್ರದೇಶ ಸೇರಿದಂತೆ ಪಟ್ಟಣಗಳಲ್ಲಿ ಕುಡಿಯುವ ನೀರನ್ನು ಪೋಲಾಗದಂತೆ ನೋಡಿಕೊಳ್ಳಬೇಕು. ತಾಲೂಕು ಆಡಳಿತ ಬೇಸಿಗೆಯಲ್ಲಿ ನೀರಿನ ಸಮಸ್ಯೆಯಾಗದಂತೆ ಕಟ್ಟು ನಿಟ್ಟಿನ ಕ್ರಮಕ್ಕೆ ಮುಂದಾಗಿದೆ. ಜಾನುವಾರುಗಳಿಗೆ ಯಾವುದೇ ರೀತಿಯ ಮೇವಿನ ತೊಂದರೆ ಇರುವುದಿಲ್ಲ. ಜಾನುವಾರಿಗಳಿಗೆ ಮುಂದಿನ 48 ವಾರಗಳಿಗೆ ಆಗುವಷ್ಟು ಮೇವಿನ ಸಂಗ್ರಹಣೆ ಇದೆ. ಯಾವುದೇ ಭಾಗದಲ್ಲಿ ನೀರಿನ ಸಮಸ್ಯೆ ಆದರೆ ಅಧಿಕಾರಿಗಳೆ ನೇರ ಹೋಣೆಗಾರರು ಆಗುತ್ತಾರೆ. ಇನ್ನೂ ತಾಲೂಕಿನ ಯಾವುದೇ ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರಿನ ಸಮಸ್ಯೆಯಾದರೆ ಸಹಾಯವಾಣಿಗೆ 08378- 241626ಸಂಖ್ಯೆಗೆ ಕರೆ ಮಾಡಬಹುದಾಗಿದೆ ಎಂದರು.ಈ ಸಭೆಯಲ್ಲಿ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಬಿ.ಎಸ್. ಶಿಡೇನೂರ, ಹತ್ತಿಮತ್ತೂರ ಹೋಬಳ್ಳಿ ಉಪತಹಸೀಲ್ದಾರ್ ಆರ್.ವೈ. ಬೋಗಾರ, ವೈ.ಎಲ್.ಹಳಕಲ್ ಸೇರಿದಂತೆ ತಾಲೂಕಿನ ವಿವಿಧ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು.