ಸಾರಾಂಶ
ರಮೇಶ್ ಕತ್ತಿ ಈಚೆಗೆ ನಡೆದ ಬಿಡಿಎಸ್‌ಎಸ್ ಬ್ಯಾಂಕ್ ಚುನಾವಣೆ ಸಂದರ್ಭದಲ್ಲಿ ನಾಯಕ ಸಮುದಾಯವನ್ನು ಉದ್ದೇಶಿಸಿ ಸಾರ್ವಜನಿಕವಾಗಿ ತೀವ್ರವಾಗಿ ನಿಂದಿಸಿದ್ದಾರೆ. ಕೂಡಲೇ ಅವರ ವಿರುದ್ಧ ಜಾತಿ ನಿಂದನೆ ಪ್ರಕರಣ ದಾಖಲಿಸುವ ಮೂಲಕ ಕಾನೂನು ಕ್ರಮಕೈಗೊಳ್ಳಬೇಕು.
ಹುಬ್ಬಳ್ಳಿ:
ವಾಲ್ಮೀಕಿ ಸಮುದಾಯದ ಬಗ್ಗೆ ಅವಹೇಳನಕಾರಿಯಾಗಿ ಹೇಳಿಕೆ ನೀಡಿದ ಮಾಜಿ ಸಂಸದ ರಮೇಶ ಕತ್ತಿ ಅವರನ್ನು ಬೆಳಗಾವಿ ಜಿಲ್ಲೆಯಿಂದ ಗಡೀಪಾರು ಮಾಡುವಂತೆ ಆಗ್ರಹಿಸಿ ಶನಿವಾರ ನಗರದಲ್ಲಿ ವಿವಿಧ ದಲಿತ ಸಂಘಟನೆಗಳ ಮಹಾಮಂಡಳದಿಂದ ಪ್ರತಿಭಟನೆ ನಡೆಸಲಾಯಿತು.ಇಲ್ಲಿನ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಜಮೆಯಾದ ಸಂಘಟನೆಗಳ ಕಾರ್ಯಕರ್ತರು, ಕತ್ತಿ ವಿರುದ್ಧ ಘೋಷಣೆ ಕೂಗಿದರು. ಅಲ್ಲದೇ, ಅವರ ಭಾವಚಿತ್ರ ದಹಿಸಿ, ಟೈರ್‌ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು.
ಈ ವೇಳೆ ಪಾಲಿಕೆ ಸದಸ್ಯ ಪ್ರಕಾಶ ಕುರಹಟ್ಟಿ ಮಾತನಾಡಿ, ರಮೇಶ್ ಕತ್ತಿ ಈಚೆಗೆ ನಡೆದ ಬಿಡಿಎಸ್‌ಎಸ್ ಬ್ಯಾಂಕ್ ಚುನಾವಣೆ ಸಂದರ್ಭದಲ್ಲಿ ನಾಯಕ ಸಮುದಾಯವನ್ನು ಉದ್ದೇಶಿಸಿ ಸಾರ್ವಜನಿಕವಾಗಿ ತೀವ್ರವಾಗಿ ನಿಂದಿಸಿದ್ದಾರೆ. ಕೂಡಲೇ ಅವರ ವಿರುದ್ಧ ಜಾತಿ ನಿಂದನೆ ಪ್ರಕರಣ ದಾಖಲಿಸುವ ಮೂಲಕ ಕಾನೂನು ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದರು.ಈ ಕುರಿತು ಸಾಕ್ಷ್ಯಗಳ ಸಮೇತ ಮುಖ್ಯಮಂತ್ರಿ ಹಾಗೂ ಗೃಹ ಸಚಿವರಿಗೆ ದೂರು ಸಲ್ಲಿಸುತ್ತಿದ್ದೇವೆ. ಕೂಡಲೇ ಕತ್ತಿ ಅವರ ಮೇಲೆ ಕ್ರಮಕೈಗೊಂಡು ಅವರನ್ನು ಬೆಳಗಾವಿ ಜಿಲ್ಲೆಯಿಂದ ಗಡೀಪಾರು ಮಾಡಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಉಗ್ರವಾದ ಹೋರಾಟ ಹಮ್ಮಿಕೊಳ್ಳುವುದಾಗಿ ಎಚ್ಚರಿಕೆ ನೀಡಿದರು.
ನಂತರ ತಹಸೀಲ್ದಾರ್ ಕಚೇರಿಗೆ ತೆರಳಿದ ಪ್ರತಿಭಟನಾಕಾರರು, ತಹಸೀಲ್ದಾರ್ ಮೂಲಕ ಮುಖ್ಯಮಂತ್ರಿ ಹಾಗೂ ಗೃಹ ಸಚಿವರಿಗೆ ಮನವಿ ಸಲ್ಲಿಸಿದರು.ಪ್ರತಿಭಟನೆಯಲ್ಲಿ ಸಮತಾ ಸೇನಾ ಅಧ್ಯಕ್ಷ ಗುರುನಾಥ ಉಳ್ಳಿಕಾಶಿ, ಮಂಜುನಾಥ ಉಳ್ಳಿಕಾಶಿ, ಮಂಜುನಾಥ ಹುಡೇದ, ಮಾರುತಿ ಚಾಕಲಬ್ಬಿ, ಅಶೋಕ ವಾಲ್ಮೀಕಿ, ಹನುಮಂತ ತಳವಾರ, ವಿನಯ ಕ್ಯಾಸಕ್ಕಿ, ಚಂದ್ರು ನೂಲ್ವಿ, ಚನ್ನಪ್ಪ ಕಾಳೆ, ವಿವೇಕ ನಾಯಕ, ಅಡಿವೆಪ್ಪ ದೊಡ್ಡಮನಿ ಸೇರಿದಂತೆ ಹಲವರಿದ್ದರು.
;Resize=(128,128))
;Resize=(128,128))
;Resize=(128,128))
;Resize=(128,128))
;Resize=(128,128))