ಕೂಲಿ ಕಾರ್ಮಿಕರ ಆರ್ಥಿಕ ಭದ್ರತೆಗೆ ವಿಮಾ ಪಾಲಿಸಿ ಅಗತ್ಯ: ಲವೀಶ್‌ ಒರಡಿಯಾ

| Published : Jul 07 2025, 11:48 PM IST

ಕೂಲಿ ಕಾರ್ಮಿಕರ ಆರ್ಥಿಕ ಭದ್ರತೆಗೆ ವಿಮಾ ಪಾಲಿಸಿ ಅಗತ್ಯ: ಲವೀಶ್‌ ಒರಡಿಯಾ
Share this Article
  • FB
  • TW
  • Linkdin
  • Email

ಸಾರಾಂಶ

ಎಲ್ಲ ಕೂಲಿ ಕಾರ್ಮಿಕರು ಪ್ರಧಾನ ಮಂತ್ರಿ ಜೀವನ ಜ್ಯೋತಿ ಯೋಜನೆ ಮತ್ತು ಪ್ರಧಾನ ಮಂತ್ರಿ ಸುರಕ್ಷಾ ಬೀಮಾ ಯೋಜನೆ ಹಾಗೂ ಅಟಲ್ ಪಿಂಚಣಿ ಯೋಜನೆ ವಿಮೆ ಮಾಡಿಸಿಕೊಳ್ಳಬೇಕೆಂದು ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಲವೀಶ್‌ ಒರಡಿಯಾ ಹೇಳಿದರು.

ಯಾದಗಿರಿ: ಮಹಾತ್ಮಾಗಾಂಧಿ ನರೇಗಾ ಯೋಜನೆಯಡಿ ಕೆಲಸ ಮಾಡುವ ಕೂಲಿ ಕಾರ್ಮಿಕರ ಕುಟುಂಬದ ಆರ್ಥಿಕ ಭದ್ರತೆ ಹಾಗೂ ರಕ್ಷಣೆ ನೀಡುವಲ್ಲಿ ಜೀವವಿಮಾ ಪಾಲಿಸಿಗಳ ಪಾತ್ರ ಅಗತ್ಯವಾಗಿದೆ. ಆದ್ದರಿಂದ ಎಲ್ಲ ಕೂಲಿ ಕಾರ್ಮಿಕರು ಪ್ರಧಾನ ಮಂತ್ರಿ ಜೀವನ ಜ್ಯೋತಿ ಯೋಜನೆ ಮತ್ತು ಪ್ರಧಾನ ಮಂತ್ರಿ ಸುರಕ್ಷಾ ಬೀಮಾ ಯೋಜನೆ ಹಾಗೂ ಅಟಲ್ ಪಿಂಚಣಿ ಯೋಜನೆ ವಿಮೆ ಮಾಡಿಸಿಕೊಳ್ಳಬೇಕೆಂದು ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಲವೀಶ್‌ ಒರಡಿಯಾ ಹೇಳಿದರು.

ರಾಮಸಮುದ್ರ ಗ್ರಾಮ ಪಂಚಾಯಿತಿಯ ನರೇಗಾ ಯೋಜನೆಯಡಿಯಲ್ಲಿ ಗ್ರಾಮೀಣ ಪ್ರದೇಶದ ಕೂಲಿ ಕಾರ್ಮಿಕರ ಜನಜಾಗೃತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ನರೇಗಾ ಯೋಜನೆಯಡಿಯಲ್ಲಿ ಕೂಲಿ ಕೆಲಸ ಮಾಡುವ ಕೂಲಿ ಕಾರ್ಮಿಕರು ಈ ಯೋಜನೆ ಕಡ್ಡಾಯವಾಗಿ ವಿಮೆ ಮಾಡಿಸುವಂತೆ ತಿಳಿಸಿದರು.

ಕಂದಕ ಬದು ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಕಾಮಗಾರಿ ಪರಿವೀಕ್ಷಣೆ ಮಾಡಿದ ಅವರು, ಈಗ ಮಳೆಗಾಲ ಪ್ರಾರಂಭವಾಗಿದ್ದು, ಮಳೆ ನೀರು ಸರಾಗವಾಗಿ ಹರಿಯದಂತೆ ತಡೆಯಲು ಹಾಗೂ ಭೂಮಿಯ ಅಂತರ್ಜಲ ಮಟ್ಟ ಹೆಚ್ಚಿಸಲು ಇಂತಹ ಕಾಮಗಾರಿಗಳನ್ನು ಹಮ್ಮಿಕೊಳ್ಳುವುದು ಅತಿ ಅವಶ್ಯಕವಿದೆ. ಪ್ರತಿಯೊಬ್ಬ ಕೂಲಿ ಕಾರ್ಮಿಕರು ಸಾಮಾಜಿಕ ಭದ್ರತೆ ದೃಷ್ಟಿಯಿಂದ ಕಡ್ಡಾಯವಾಗಿ ವಿಮೆ ಮಾಡಿಸಿ ಅದರ ಪ್ರಯೋಜನ ಪಡೆದುಕೊಳ್ಳುವಂತೆ ತಿಳಿಸಿದರು.

ಜಿಲ್ಲಾ ಪಂಚಾಯತ್ ಮುಖ್ಯ ಲೆಕ್ಕಾಧಿಕಾರಿ ವೆಂಕಟೇಶ ಚಟ್ನಳ್ಳಿ, ಯೋಜನಾ ನಿರ್ದೇಶಕರಾದ ಸಿ. ಬಿ. ದೇವರಮನಿ, ಕಾರ್ಯನಿರ್ವಾಹಕ ಅಧಿಕಾರಿ ಮಹಾದೇವ ಬಾಬಳಗಿ, ಗ್ರಾ.ಪಂ. ಅಧ್ಯಕ್ಷರಾದ ಆನಂದಮ್ಮ ಮಲ್ಲಿಕಾರ್ಜುನ ಜಲ್ಲಪನೋರ, ಎಸ್ಬಿಐ ವ್ಯವಸ್ಥಾಪಕ ಸಂಜಯ ಕುಮಾರ, ಪಿಕೆಜಿಬಿ ವ್ಯವಸ್ಥಾಪಕ ಜಿ.ಎಸ್. ಕೋಡ್ಲಿ, ಲೀಡ್‌ ಬ್ಯಾಂಕ್‌ ವ್ಯವಸ್ಥಾಪಕ ಭೀಮರಾವ ಪಾಂಚಾಳ, ಪಂಚಾಯತ್‌ ಅಭಿವೃದ್ಧಿ ಅಧಿಕಾರಿ, ಗ್ರಾ.ಪಂ. ಸದಸ್ಯರು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.