ಸಾರಾಂಶ
ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಕನ್ನಡಪ್ರಭ ವಾರ್ತೆ ಕುಣಿಗಲ್
ಬ್ರಹ್ಮಶ್ರೀ ನಾರಾಯಣ ಗುರುಗಳು ಸಮಾಜದಲ್ಲಿನ ಅಸಮಾನತೆ ವಿರುದ್ಧ ಹೋರಾಡಿದ ಹಾಗೂ ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿ ಮಾಡಿದ್ದಾರೆ ಎಂದು ತಹಸೀಲ್ದಾರ್ ರಶ್ಮಿ ತಿಳಿಸಿದರು.ಪಟ್ಟಣದ ತಾಲೂಕು ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತ್ಯುತ್ಸವ ಉದ್ಘಾಟಿಸಿ ಮಾತನಾಡಿದರು.ಸಮುದಾಯವು ಒಗ್ಗಟ್ಟಿನಿಂದ ಆರ್ಥಿಕ, ಶೈಕ್ಷಣಿಕ, ಸಾಮಾಜಿಕವಾಗಿ ಸಬಲೀಕರಣವಾಗಬೇಕು. ಬ್ರಹ್ಮಶ್ರೀ ನಾರಾಯಣ ಗುರುಗಳ ಆದರ್ಶ, ಚಿಂತನೆಗಳನ್ನು ಮೈಗೂಡಿಸಿಕೊಳ್ಳಬೇಕು. ನಾರಾಯಣ ಗುರು ಸಮಾನತೆಯನ್ನು ಸಾರಿದಂತಹ ಮಹಾ ತತ್ವಜ್ಞಾನಿ. ಅವರ ಆಚಾರ- ವಿಚಾರಗಳನ್ನು ಇಂದಿನ ಸಮುದಾಯಕ್ಕೆ ತಿಳಿಸುವಂತಹ ಕಾರ್ಯಗಳನ್ನು ಕೈಗೊಳ್ಳಬೇಕು. ಮಕ್ಕಳ ಮನಸ್ಸಿನಲ್ಲಿ ಇಂತಹ ಮಹಾತ್ಮರ ಆದರ್ಶ ಚಿಂತನೆಗಳು ಸಮಾಜಕ್ಕೆ ದಾರಿದೀಪವಾಗುತ್ತವೆ ಎಂದು ತಿಳಿಸಿದರು.
ಜಗದ್ಗುರು ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಅಧ್ಯಕ್ಷ ಕೆಎ ರವೀಂದ್ರ ಕುಮಾರ್ ಮಾತನಾಡಿ, ಸರ್ಕಾರವು ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತ್ಯುತ್ಸವವನ್ನು ಆಚರಿಸುವ ಮೂಲಕ ಸಮುದಾಯ ಜನರಲ್ಲಿ ಜಾಗೃತಿ ಮೂಡಿಸಬೇಕು. ನಾರಾಯಣ ಗುರುಗಳ ಆದರ್ಶಗಳನ್ನು ಎಲ್ಲಾ ಸಮಾಜವು ಅನುಸರಿಸುವಂತಾಗಬೇಕು ಎಂದರು.ಪಿಯುಸಿಯಲ್ಲಿ ರಾಜ್ಯದಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿನಿ ಜ್ಞಾನವಿ ಅವರ ಪೋಷಕರನ್ನು ಸನ್ಮಾನಿಸಲಾಯಿತು. ತಾಪಂ ವ್ಯವಸ್ಥಾಪಕ ರಾಜಣ್ಣ, ತಾಲೂಕು ಆರ್ಯ ಈಡಿಗ ಸಮಾಜದ ಅಧ್ಯಕ್ಷ ರಂಗಸ್ವಾಮಿ, ರಾಜ್ಯ ಸಮಿತಿ ಸದಸ್ಯೆ ಉಷಾ ರವಿoದ್ರ ಕುಮಾರ್, ಆರ್ಯ ಈಡಿಗ ಮುಖಂಡರಾದ ಚೌಡಪ್ಪ, ಶಿವರಾಮ್, ಶಿವಾನಂದ ಉನ್ನಿಕೃಷ್ಣನ್, ದಲಿತ ಮುಖಂಡರಾದ ವರದರಾಜು. ರಾಮಚಂದ್ರಯ್ಯ, ಕಸಪ ಅಧ್ಯಕ್ಷ ಕಪನೀ ಪಾಳ್ಯ ರಮೇಶ್, ಪುರಸಭಾ ಸದಸ್ಯ ಶ್ರೀನಿವಾಸ್ ಇದ್ದರು.
;Resize=(128,128))
;Resize=(128,128))
;Resize=(128,128))
;Resize=(128,128))