ತೆಂಕನಿಡಿಯೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಅಭ್ಯುದಯ ಸಮಾಜ ಕಾರ್ಯ ವೇದಿಕೆ ಆಯೋಜನೆಯಲ್ಲಿಅಭ್ಯುದಯ – ೨೦೨೫ ಎಂಬ ಅಂತರ್-ಕಾಲೇಜು ಸಾಂಸ್ಕೃತಿಕ ಸ್ಪರ್ಧೆಗಳನ್ನು ನಡೆಸಲಾಯಿತು.

ಉಡುಪಿ: ಇಲ್ಲಿನ ತೆಂಕನಿಡಿಯೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಅಭ್ಯುದಯ ಸಮಾಜ ಕಾರ್ಯ ವೇದಿಕೆ ಆಯೋಜನೆಯಲ್ಲಿಅಭ್ಯುದಯ – ೨೦೨೫ ಎಂಬ ಅಂತರ್-ಕಾಲೇಜು ಸಾಂಸ್ಕೃತಿಕ ಸ್ಪರ್ಧೆಗಳನ್ನು ಯಶಸ್ವಿಯಾಗಿ ನಡೆಸಲಾಯಿತು.

ಈ ಸ್ಪರ್ಧೆಗಳನ್ನು ಸಂಸದ ಕೋಟ ಶ್ರೀನಿವಾಸ ಪೂಜಾರಿ ಉದ್ಘಾಟಿಸಿ, ಕಾಲೇಜುಗಳಲ್ಲಿ ನಡೆಯುವ ಸಾಂಸ್ಕೃತಿಕ ಸಂಘಟನಾ ಕಾರ್ಯಕ್ರಮಗಳು ವಿದ್ಯಾರ್ಥಿಗಳಲ್ಲಿ ನಾಯಕತ್ವ, ಸಂಘಟನಾ ಕೌಶಲ್ಯಗಳನ್ನು ವೃದ್ಧಿಸುತ್ತವೆ ಎಂದು ಶ್ಲಾಘಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ನಿತ್ಯಾನಂದ ವಿ. ಗಾಂವಕರ ವಹಿಸಿಕೊಂಡಿದ್ದು, ವೇದಿಕೆಯಲ್ಲಿ ಉಡುಪಿಯ ವೈಟ್ ಲೋಟಸ್ ಹೋಟೆಲಿನ ಪ್ರವರ್ತಕ ಅಜಯ್ ಪಿ. ಶೆಟ್ಟಿ, ಮಾಜಿ ಜಿಪಂ ಸದಸ್ಯೆ ಗೀತಾಂಜಲಿ ಸುವರ್ಣ ಉಪಸ್ಥಿತರಿದ್ದರು.

ಕಾಲೇಜಿನ ಸಮಾಜ ಕಾರ್ಯ ವಿಭಾಗದ ಮುಖ್ಯಸ್ಥೆ ಸುಷ್ಮಾ ಟಿ. ಸ್ವಾಗತಿಸಿ, ಸಮಾಜಕಾರ್ಯ ವೇದಿಕೆಯ ಅಧ್ಯಕ್ಷೆ ಕು. ಸಾಕ್ಷಿ ಎ. ಶೆಟ್ಟಿ ವಂದಿಸಿದರು, ದೈಹಿಕ ಶಿಕ್ಷಣ ನಿರ್ದೇಶಕ ಡಾ. ರೋಶನ್ ಕುಮಾರ್ ಶೆಟ್ಟಿ, ಕಾರ್ಯಕ್ರಮ ನಿರೂಪಿಸಿದರು.

ಸೈಂಟ್‌ ಮೇರಿಸ್ ಶಿರ್ವ ಚಾಂಪಿಯನ್:

ಅಭ್ಯುದಯ 2025ರಲ್ಲಿ ಸಮಗ್ರ ಬಹುಮಾನ ಪ್ರಥಮ : ಸೈಂಟ್ ಮೇರಿಸ್ ಕಾಲೇಜು ಶಿರ್ವ, ದ್ವಿತೀಯ: ಸರಕಾರಿ ಪ್ರಥಮ ದರ್ಜೆ ಕಾಲೇಜು ಹಳೆಯಂಗಡಿ, ತೃತೀಯ: ಸರಕಾರಿ ಪ್ರಥಮ ದರ್ಜೆ ಕಾಲೇಜು ಹಳೆಯಂಗಡಿಗಳು ಗೆದ್ದುಕೊಂಡವು.