ದೊಡ್ಡಬಳ್ಳಾಪುರ: ಇಲ್ಲಿನ ಶ್ರೀ ದೇವರಾಜ ಅರಸ್‌ ವ್ಯವಹಾರ ನಿರ್ವಹಣಾ ಮಹಾವಿದ್ಯಾಲಯದ ದೈಹಿಕ ಶಿಕ್ಷಣ ಹಾಗೂ ಕ್ರೀಡಾ ವಿಭಾಗದ ನೇತೃತ್ವದಲ್ಲಿ ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಸಹಯೋಗದಲ್ಲಿ ನಡೆದ ವಿಶ್ವವಿದ್ಯಾಲಯ ಮಟ್ಟದ ಅಂತರ ಕಾಲೇಜು ಪುರುಷರ ಫುಟ್‌ಬಾಲ್ ಪಂದ್ಯಾವಳಿಯಲ್ಲಿ ಬೆಂಗಳೂರಿನ ಕ್ರಿಸ್ತು ಜಯಂತಿ ಕಾಲೇಜು ತಂಡ ಚಾಂಪಿಯನ್‌ ಆಗಿ ಹೊರಹೊಮ್ಮಿದೆ

ದೊಡ್ಡಬಳ್ಳಾಪುರ: ಇಲ್ಲಿನ ಶ್ರೀ ದೇವರಾಜ ಅರಸ್‌ ವ್ಯವಹಾರ ನಿರ್ವಹಣಾ ಮಹಾವಿದ್ಯಾಲಯದ ದೈಹಿಕ ಶಿಕ್ಷಣ ಹಾಗೂ ಕ್ರೀಡಾ ವಿಭಾಗದ ನೇತೃತ್ವದಲ್ಲಿ ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಸಹಯೋಗದಲ್ಲಿ ನಡೆದ ವಿಶ್ವವಿದ್ಯಾಲಯ ಮಟ್ಟದ ಅಂತರ ಕಾಲೇಜು ಪುರುಷರ ಫುಟ್‌ಬಾಲ್ ಪಂದ್ಯಾವಳಿಯಲ್ಲಿ ಬೆಂಗಳೂರಿನ ಕ್ರಿಸ್ತು ಜಯಂತಿ ಕಾಲೇಜು ತಂಡ ಚಾಂಪಿಯನ್‌ ಆಗಿ ಹೊರಹೊಮ್ಮಿದೆ. ಪಂದ್ಯಾವಳಿಯ ಫೈನಲ್‌ ಪಂದ್ಯದಲ್ಲಿ ಕ್ರಿಸ್ತು ಜಯಂತಿ ಕಾಲೇಜು ತಂಡ, ಎಚ್‌ಕೆಬಿಕೆ ಕಾಲೇಜು ತಂಡಗಳ ನಡುವೆ ಜಿದ್ದಾಜಿದ್ದಿನ ಪೈಪೋಟಿ ನಡೆದು, ಅಂತಿಮವಾಗಿ ಕ್ರಿಸ್ತು ಜಯಂತಿ ತಂಡ ಜಯಗಳಿಸಿತು. ಎಚ್‌ಕೆಬಿಕೆ ಕಾಲೇಜು ಪಂದ್ಯಾವಳಿಯ ರನ್ನರ್‌ಅಪ್‌ ಸ್ಥಾನ ಪಡೆದರೆ, ಕೋಲಾರ ಜಿಲ್ಲೆ ಕೆಜಿಎಫ್‌ನ ಸರ್ಕಾರಿ ಕಾಲೇಜು ತಂಡ ತೃತೀಯ ಸ್ವಾತನ ಪಡೆಯಿತು. ವಿಜೇತ ತಂಡ ಹಾಗೂ ದ್ವಿತೀಯ, ತೃತೀಯ ಸ್ಥಾನ ಪಡೆದ ತಂಡಗಳಿಗೆ ಶ್ರೀ ದೇವರಾಜ ಅರಸು ಎಜುಕೇಶನಲ್ ಟ್ರಸ್ಟ್‌ ನ ಉಪಾಧ್ಯಕ್ಷ ಜೆ.ರಾಜೇಂದ್ರ ಬಹುಮಾನ ವಿತರಿಸಿದರು. ಈ ವೇಳೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ವಿ.ಶ್ರೀನಿವಾಸ್, ಸಂಜೆ ಕಾಲೇಜು ಪ್ರಾಂಶುಪಾಲ ಡಾ.ಚಿಕ್ಕಣ್ಣ ಸೇರಿದಂತೆ ಹಲವು ಉಪನ್ಯಾಸಕರು, ಸಿಬ್ಬಂದಿ ಹಾಜರಿದ್ದರು.7ಕೆಡಿಬಿಪಿ1-

ದೊಡ್ಡಬಳ್ಳಾಪುರದಲ್ಲಿ ನಡೆದ ಬೆಂಗಳೂರು ಉತ್ತರ ವಿವಿ ಅಂತರ ಕಾಲೇಜು ಫುಟ್‌ಬಾಲ್‌ ಪಂದ್ಯಾವಳಿಯಲ್ಲಿ ಕ್ರಿಸ್ತು ಜಯಂತಿ ಕಾಲೇಜು ತಂಡ ಚಾಂಪಿಯನ್‌ ಪ್ರಶಸ್ತಿ ಪಡೆಯಿತು. ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ವಿ.ಶ್ರೀನಿವಾಸ್, ಸಂಜೆ ಕಾಲೇಜು ಪ್ರಾಂಶುಪಾಲ ಡಾ.ಚಿಕ್ಕಣ್ಣ ಸೇರಿದಂತೆ ಹಲವು ಉಪನ್ಯಾಸಕರು, ಸಿಬ್ಬಂದಿ ಹಾಜರಿದ್ದರು.