ಸಾರಾಂಶ
ಕಾನೂನು ಪದವಿ ಪಡೆದ ನಂತರ ನ್ಯಾಯಯುತ ಕೊಡುಗೆ ಕೊಡುವ ಜವಾಬ್ದಾರಿ ವಿದ್ಯಾರ್ಥಿಗಳ ಮೇಲೆ ಇದೆ
ಕನ್ನಡಪ್ರಭ ವಾರ್ತೆ ಉಡುಪಿ ನ್ಯಾಯವಾದಿಗಳು ಮತ್ತು ನ್ಯಾಯಾಧೀಶರ ಪಾತ್ರ ಸಮಾಜದಲ್ಲಿ ಮಹತ್ವದ್ದಾಗಿದೆ. ಕಾನೂನು ಪದವಿ ಪಡೆದ ನಂತರ ದೇಶಕ್ಕೆ ಹಾಗೂ ಸಮಾಜಕ್ಕೆ ನ್ಯಾಯಯುತ ಕೊಡುಗೆ ಕೊಡುವ ಜವಾಬ್ದಾರಿ ಕಾನೂನು ವಿದ್ಯಾರ್ಥಿಗಳ ಮೇಲೆ ಇದೆ ಎಂದು ಉಡುಪಿ ಶಾಸಕರಾದ ಯಶ್‌ಪಾಲ್ ಸುವರ್ಣ ಅವರು ಹೇಳಿದರು.
ಅವರು ಇಲ್ಲಿನ ಕುಂಜಿಬೆಟ್ಟಿನ ವೈಕುಂಠ ಬಾಳಿಗಾ ಕಾನೂನು ಕಾಲೇಜಿನಲ್ಲಿ ಹುಬ್ಬಳ್ಳಿಯ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿರುವ ಅಂತರ್-ಕಾಲೇಜು ಮಹಿಳಾ ಥ್ರೋಬಾಲ್ ಪಂದ್ಯಾವಳಿಯನ್ನು ಉದ್ಘಾಟಿಸಿ ಮಾತನಾಡುತ್ತಾ ಜೀವನದಲ್ಲಿ ಕ್ರೀಡೆಯ ಮಹತ್ವವನ್ನು ತಿಳಿಸಿದರು ಹಾಗೂ ಸ್ಫರ್ಧಾರ್ಥಿಗಳು ಪಂದ್ಯಾವಳಿಯಲ್ಲಿ ಉತ್ತಮ ಪ್ರದರ್ಶನ ನೀಡುವಂತೆ ಹಾರೈಸಿದರು.ಕಾಲೇಜಿನ ನಿರ್ದೇಶಕಿಯಾದ ಪ್ರೊ. ನಿರ್ಮಲ ಕುಮಾರಿ ಕೆ. ಅವರು ಮಾತನಾಡುತ್ತಾ, ಈ ಮಹಿಳಾ ಪಂದ್ಯಾವಳಿಯನ್ನು ಅಂತರರಾಷ್ಟ್ರೀಯ ಮಹಿಳಾ ದಿನದ ಸಮಯದಲ್ಲಿ ಆಯೋಜಿಸಿರುವುದು ಸಮಯೋಚಿತವಾಗಿದೆ ಎಂದು ಹೇಳಿದರು.ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ರಘುನಾಥ್ ಕೆ.ಎಸ್. ಅವರು ಮಾತನಾಡಿ ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಭಾಗವಹಿಸುವುದರಿಂದ ಜೀವನದಲ್ಲಿ ಮತ್ತು ವೃತ್ತಿಯಲ್ಲಿ ಮುಂದೆ ಬರಬಹುದಾದ ಸೋಲು ಗೆಲುವುಗಳನ್ನು ಕ್ರೀಡಾ ಸ್ಫೂರ್ತಿಯಿಂದ ಹಾಗೂ ಸಮಚಿತ್ತದಿಂದ ಸ್ವೀಕರಿಸುವ ಮನೋಭಾವ ಬೆಳೆಯುತ್ತದೆ ಎಂದು ಹೇಳಿದರು. ಉದ್ಘಾಟನಾ ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ ಕ್ರೀಡಾ ಸಲಹಾ ಸಮಿತಿ ಸದಸ್ಯರಾದ ಡಾ. ಸುಬ್ರಮಣಿ, ವಿದ್ಯಾರ್ಥಿ ಕ್ಷೇಮಾಧಿಕಾರಿಗಳಾದ ಸುರೇಖಾ ಕೆ., ವಿದ್ಯಾರ್ಥಿ ಕ್ರೀಡಾ ಕಾರ್ಯದರ್ಶಿ ಆದಿತ್ಯ ಹಾಜರಿದ್ದರು. ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ಪ್ರಕಾಶ್ ರಾವ್ ಡಿ. ಅತಿಥಿಗಳನ್ನು ಸ್ವಾಗತಿಸಿದರು. ವಿದ್ಯಾರ್ಥಿ ಕಾರ್ಯದರ್ಶಿಯಾದ ಲಕ್ಷ್ಮೀಕಾಂತ್ ವಂದನಾರ್ಪಣೆ ಸಲ್ಲಿಸಿದರು. ಪಲ್ಲವಿ ನಿರೂಪಿಸಿದರು. ಈ ಪಂದ್ಯಾವಳಿಯಲ್ಲಿ ರಾಜ್ಯದ ವಿವಿಧ ಕಾನೂನು ಕಾಲೇಜುಗಳ 13 ತಂಡಗಳು ಭಾಗವಹಿಸಿದ್ದವು.;Resize=(128,128))
;Resize=(128,128))
;Resize=(128,128))
;Resize=(128,128))
;Resize=(128,128))