ಕುಂದಾಪುರ: ಇಲ್ಲಿನ ಮೂಡ್ಲಕಟ್ಟೆ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ(ಎಂಐಟಿಕೆ) ರಾಷ್ಟ್ರಮಟ್ಟದ ಅಂತರ್ ಕಾಲೇಜು ತಾಂತ್ರಿಕ, ಸಾಂಸ್ಕೃತಿಕ ಹಾಗೂ ಕ್ರೀಡಾ ಹಬ್ಬ ಸಾವಿಷ್ಕರ್-2026 ಗುರುವಾರ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಖ್ಯಾತ ಯಕ್ಷಗಾನ ಕಲಾವಿದ ಡಾ. ಶಿವಾನಂದ ಹೆಗಡೆ ಕೆರೆಮನೆ ನಮ್ಮ ಪ್ರಾಚೀನ ಜ್ಞಾನವನ್ನು ಹೊಸ ಅನ್ವೇಷಣೆಗಳೊಂದಿಗೆ ಜೋಡಿಸುವ ಅಗತ್ಯವಿದೆ. ಈ ಹಿನ್ನೆಲೆಯಲ್ಲಿ ತಂತ್ರಜ್ಞಾನದ ಇಂದಿನ ಯುಗದಲ್ಲಿ ವಿದ್ಯಾರ್ಥಿಗಳು ಕೇವಲ ಪಠ್ಯಕ್ಕೆ ಸೀಮಿತವಾಗದೆ. ವಿದ್ಯಾರ್ಥಿಗಳು ಸಾಂಸ್ಕೃತಿಕ ಹಾಗೂ ಕ್ರೀಡಾ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದು ಅತ್ಯಗತ್ಯ. ಗ್ರಾಮೀಣ ಪ್ರದೇಶದ ಈ ಶಿಕ್ಷಣ ಸಂಸ್ಥೆಯಲ್ಲಿ ಇಂತಹ ಕಾರ್ಯಕ್ರಮಗಳು ಶ್ಲಾಘನೀಯ ಎಂದರು.
ಐ.ಎಂ.ಜೆ. ಶಿಕ್ಷಣ ಸಂಸ್ಥೆಗಳ ಶೈಕ್ಷಣಿಕ ನಿರ್ದೇಶಕ ಡಾ. ಎಸ್. ಎನ್. ಭಟ್ ಅವರು ಮಾತನಾಡಿ, ವಿದ್ಯಾರ್ಥಿಗಳ ಪ್ರತಿಭೆಯನ್ನು ಪ್ರದರ್ಶಿಸಲು ಇಂತಹ ರಾಷ್ಟ್ರಮಟ್ಟದ ವೇದಿಕೆಗಳು ಸಹಕಾರಿ ಎಂದರು. ಕಾಲೇಜಿನ ಪ್ರಾಂಶುಪಾಲರಾದ ಡಾ. ರಾಮಕೃಷ್ಣ ಹೆಗಡೆ ಅವರು ಪ್ರಾಸ್ತಾವಿಕವಾಗಿ ಮಾತನಾಡಿ ಕಾಲೇಜು ನಡೆದು ಬಂದ ಹಾದಿಯನ್ನು ವಿವರಿಸಿದರು.600ಕ್ಕೂ ಹೆಚ್ಚು ವಿದ್ಯಾರ್ಥಿಗಳು: ಐ.ಎಂ.ಜೆ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸಿದ್ದಾರ್ಥ ಜೆ. ಶೆಟ್ಟಿ ಅವರ ಮಾರ್ಗದರ್ಶನದಲ್ಲಿ ಆಯೋಜಿಸಲಾದ ಈ ಕಾರ್ಯಕ್ರಮದಲ್ಲಿ ವಿವಿಧ ರಾಜ್ಯಗಳ ಹಲವಾರು ಕಾಲೇಜುಗಳ 600ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದರು. ಉದ್ಘಾಟನಾ ಸಮಾರಂಭದ ನಂತರ ವಿವಿಧ ಸಾಂಸ್ಕೃತಿಕ , ತಾಂತ್ರಿಕ ಸ್ಪರ್ಧೆಗಳು ಹಾಗೂ ಕ್ರೀಡಾಕೂಟಗಳು ನಡೆಯಿತು.ಕಾರ್ಯಕ್ರಮದಲ್ಲಿ ಸಾವಿಷ್ಕಾರ್ ಪ್ರಮುಖ ಸಂಯೋಜಕರಾದ ಡಾ ವರುಣ್ ಕುಮಾರ್, ಸಂಸ್ಥೆಯ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ವರ್ಗದವರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಡೀನ್ ಅಕ್ಷತ ನಾಯಕ್ ಸ್ವಾಗತಿಸಿ, ಸಾಂಸ್ಕೃತಿಕ ವಿಭಾಗದ ಸಂಯೋಜಕಿ ಪ್ರೊ.ಸೂಕ್ಷ್ಮ ಅಡಿಗ ವಂದಿಸಿದರು. ವಿದ್ಯಾರ್ಥಿನಿ ಎಲಿಷಾ ಬಿಷಪ್ ಕಾರ್ಯಕ್ರಮ ನಿರೂಪಿಸಿದರು. ಕಾಲೇಜಿನ ಐಕ್ಯೂಎಸಿ ಮುಖ್ಯಸ್ಥೆ ಡಾ.ನಿಖಿಲ ಪೈ ಕಾರ್ಯಕ್ರಮವನ್ನು ಸಂಯೋಜಿಸಿದರು.