ಕಿಶೋರಿಯರ ಅಂತರ್ ಜಿಲ್ಲಾ ಮಟ್ಟದ ಕ್ರೀಡಾಕೂಟ

| Published : Dec 23 2024, 01:03 AM IST

ಸಾರಾಂಶ

ತಾಲೂಕಿನ ಭಾಗ್ಯನಗರ ಪಟ್ಟಣದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆಟದ ಮೈದಾನದಲ್ಲಿ ಕೊಪ್ಪಳ ಮತ್ತು ಬಳ್ಳಾರಿ ಜಿಲ್ಲೆಯ ಅಂತರ್ ಜಿಲ್ಲಾ ಮಟ್ಟದ ಕಿಶೋರಿಯರ ಕ್ರೀಡಾಕೂಟ ಯಶಸ್ವಿಯಾಗಿ ಮುಕ್ತಾಯಗೊಂಡಿತು.

ಕನ್ನಡಪ್ರಭ ವಾರ್ತೆ ಕೊಪ್ಪಳ

ತಾಲೂಕಿನ ಭಾಗ್ಯನಗರ ಪಟ್ಟಣದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆಟದ ಮೈದಾನದಲ್ಲಿ ಕೊಪ್ಪಳ ಮತ್ತು ಬಳ್ಳಾರಿ ಜಿಲ್ಲೆಯ ಅಂತರ್ ಜಿಲ್ಲಾ ಮಟ್ಟದ ಕಿಶೋರಿಯರ ಕ್ರೀಡಾಕೂಟ ಯಶಸ್ವಿಯಾಗಿ ಮುಕ್ತಾಯಗೊಂಡಿತು.

ಕ್ರೀಡಾಕೂಟ ಆಯೋಜನೆ ಮಾಡಿದ ಸ್ನೇಹ ಸಂಸ್ಥೆಯ ನಿರ್ದೇಶಕ, ಟಿ ರಾಮಾಂಜನೇಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಕಿಶೋರಿಯರಲ್ಲಿ ನಾಯಕತ್ವ ಮತ್ತು ಸ್ಪರ್ಧಾತ್ಮಕ ಗುಣ ಬೆಳೆಸಲು ಕ್ರೀಡಾಕೂಟವನ್ನು ಆಯೋಜಿಸಲಾಗಿದೆ. ಸದರಿ ಕ್ರೀಡಾಕೂಟದಲ್ಲಿ ಬಳ್ಳಾರಿ ಮತ್ತು ಕೊಪ್ಪಳ ಜಿಲ್ಲೆಯ ಕಿಶೋರಿಯರು ಭಾಗವಹಿಸಿ ವಿವಿಧ ಕ್ರೀಡೆಯಲ್ಲಿ ಬಹಳ ಆಸಕ್ತಿಯಿಂದ ಭಾಗವಹಿಸಿ ಯಶಸ್ವಿಗೊಳಿಸಿದ್ದಾರೆ ಎಂದರು.

ಕ್ರೀಡಾಕೂಟದ ಉದ್ಘಾಟನೆ ಮತ್ತು ಮುಕ್ತಾಯ ಸಮಾರಂಭದ ವಿಶೇಷ ಆಮಂತ್ರಿತರಾಗಿ ತಾಲೂಕು ದೈಹಿಕ ಶಿಕ್ಷಣಾಧಿಕಾರಿ ವೀರನಗೌಡ, ಕ್ಷೇತ್ರ ಸಮನ್ವಯಾಧಿಕಾರಿ ಸಯ್ಯದ್ ಮಹಿಬೂಬ್ ಹುಸೇನ್, ದೈಹಿಕ ಶಿಕ್ಷಕರಾದ ಶರಣಬಸವ ಸ್ವಾಮಿ, ವಿರೂಪಾಕ್ಷಗೌಡ, ವೀರಭದ್ರಪ್ಪ, ಮುಖ್ಯ ಶಿಕ್ಷಕ ಲಕ್ಷ್ಮಣ್, ಸಂಗಮೇಶ್ ಶರಣಪ್ಪ, ಪ್ರಶಸ್ತಿ ಪುರಸ್ಕೃತ ನಿವೃತ್ತ ಶಿಕ್ಷಕ ಅಮೀರ್ ಹಮ್ಜಾ ನದಾಫ್, ಹಿರಿಯ ಪತ್ರಕರ್ತ ಎಂ. ಸಾಧಿಕ್ ಅಲಿ, ಸ್ನೇಹ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕಿ ಕೆಪಿ ಜಯ, ಸೇರಿದಂತೆ ಸಂಸ್ಥೆಯ ಸಿಬ್ಬಂದಿ ಕೊಪ್ಪಳದ ಶೋಭಾ, ಗಾಯತ್ರಿ, ಮಹಾಲಕ್ಷ್ಮಿ, ಶಕುಂತಲಾ, ಅನ್ನಪೂರ್ಣ, ಮಂಜುಳಾ ಹಾಗೂ ಬಳ್ಳಾರಿಯ ಸರೋಜಾ ಹವಳ, ರಾಧಾ, ರೇಣುಕಾ, ಪಾರ್ವತಿ ಅನೇಕರು ಪಾಲ್ಗೊಂಡಿದ್ದರು.ವಿವಿಧ ಕ್ರೀಡೆಗಳಲ್ಲಿ ವಿಜಯ ಸಾಧಿಸಿದ ಬಳ್ಳಾರಿ ಮತ್ತು ಕೊಪ್ಪಳ ಜಿಲ್ಲೆಯ ಕಿಶೋರಿಯರಿಗೆ ಇದೇ ಸಂದರ್ಭ ಬಹುಮಾನ, ಪ್ರಮಾಣ ಪತ್ರ, ಪದಕ ವಿತರಿಸಲಾಯಿತು.