ದೇವನಹಳ್ಳಿ: ಸಹಕಾರ ಬ್ಯಾಂಕ್ ಗಳಲ್ಲಿ ರೈತರಿಗೆ ಬಡ್ಡಿ ರಹಿತ ಸಾಲ ಸೌಲಭ್ಯವಿದ್ದು ರೈತರು ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ಹೇಳಿದರು

ದೇವನಹಳ್ಳಿ: ಸಹಕಾರ ಬ್ಯಾಂಕ್ ಗಳಲ್ಲಿ ರೈತರಿಗೆ ಬಡ್ಡಿ ರಹಿತ ಸಾಲ ಸೌಲಭ್ಯವಿದ್ದು ರೈತರು ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ಹೇಳಿದರು. ಪಟ್ಟಣದ ಟಿಎಪಿಸಿಎಂಎಸ್ ಆವರಣದಲ್ಲಿ ಬೆಂಗಳೂರು ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಆಯೋಜಿಸಿದ್ದ ಹೊಸ ಕೆಸಿಸಿ ಬೆಳೆ ಸಾಲ, ಸ್ವಸಹಾಯ ಗುಂಪು ಸಾಲ ಹಾಗೂ ಮಧ್ಯಮಾವಧಿ ಸಾಲಗಳ ಚೆಕ್ ವಿತರಿಸಿ ಮಾತನಾಡಿದ ಸಚಿವರು, ರೈತರು ಈ ದೇಶದ ಬೆನ್ನೆಲುಬು, ಸಹಕಾರ ಬ್ಯಾಂಕ್ ಗಳು ರೈತರ ಜೀವನಾಡಿ, ಜಿಲ್ಲೆಯಲ್ಲಿ ಸಹಕಾರ ಬ್ಯಾಂಕ್ ಗಳ ಮೂಲಕ ೧೨೪ ಕೋಟಿ ಸಾಲ ಮಂಜೂರು ಮಾಡಲಾಗಿದೆ. ದೇವನಹಳ್ಳಿ ಕ್ಷೇತ್ರದಲ್ಲಿ ೯ ಕೋಟಿ ಮೊತ್ತದ ಸಾಲ ವಿತರಿಸಲಾಗುತ್ತಿದೆ. ರಾಜ್ಯ ಸರ್ಕಾರ ಸಹಕಾರ ಕ್ಷೇತ್ರಕ್ಕೆ ಒತ್ತು ನೀಡಿ ರೈತರ ಹಿತ ಕಾಪಾಡಲಿದೆ. ರೈತರ ಸಮಸ್ಯೆ ಬಗೆಹರಿಸಲು ಜಿಲ್ಲಾದ್ಯಂತ ಪ್ರಜಾಸೇವಾ ಅಭಿಯಾನ ಕೈಗೊಳ್ಳಲಾಗುತ್ತದೆ. ರೈತರು, ಸಾರ್ವಜನಿಕರು ಕಚೇರಿಗೆ ಅಲೆಯುವುದನ್ನು ತಪ್ಪಿಸಲು ಸ್ಥಳದಲ್ಲೇ ಪರಿಹಾರ ಒದಗಿಸಲು ಪ್ರಜಾಸೇವಾ ಇಲಾಖೆ ಕೆಲಸ ಮಾಡಲಿದೆ ಎಂದು ಸಚಿವರು ಹೇಳಿದರು.

ಕಾರ್ಯಕ್ರಮದಲ್ಲಿ ಎಂಎಲ್ಸಿ ರವಿ, ೫ನೇ ಹಣಕಾಸು ಆಯೋಗದ ಅಧ್ಯಕ್ಷ ನಾರಾಯಣಸ್ವಾಮಿ, ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷ ರಾಜಣ್ಣ, ತಾಲೂಕು ಅಧ್ಯಕ್ಷ ಜಗನ್ನಾಥ, ಸಹಕಾರ ಬ್ಯಾಂಕ್ ಉಪಾಧ್ಯಕ್ಷ ಕಾಮೇನಹಳ್ಳಿ ರಮೇಶ್, ನಿರ್ದೇಶಕ ರಮೇಶ್, ರಾಜ್ ಕುಮಾರ್, ಬಮೂಲ್ ನಿರ್ದೇಶಕ ಮುನಿರಾಜು, ಮುಖಂಡರಾದ ಶಾಂತಕುಮಾರ್, ಕೆ.ಸಿ. ಮಂಜುನಾಥ್, ಚಿನ್ನಪ್ಪ, ಪ್ರಸನ್ನಕುಮಾರ್‌ ಉಪಸ್ಥಿತರಿದ್ದರು.

೩೦ ದೇವನಹಳ್ಳಿ ಚಿತ್ರಸುದ್ದಿ:೦೧

ದೇವನಹಳ್ಳಿಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಆಯೋಜಿಸಿದ್ದ ರೈತ ಸದಸ್ಯರ ಹೊಸ ಕೆಸಿಸಿ ಬೆಳೆ ಸಾಲ, ಸ್ವಸಹಾಯ ಗುಂಪು ಸಾಲ ಹಾಗೂ ಮಧ್ಯಮಾವಧಿ ಸಾಲಗಳ ಚೆಕ್‌ಗಳನ್ನು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್‌.ಮುನಿಯಪ್ಪ ವಿತರಿಸಿದರು.