ತಂತ್ರಜ್ಞಾನದಿಂದ ಓದಿನ ಆಸಕ್ತಿ ಕ್ಷೀಣಿಸುತ್ತಿದೆಪುಸ್ತಕಗಳ ಓದು ಬದುಕಿನ ನೈತಿಕ ನೆಲೆಗಟ್ಟನ್ನು ಗಟ್ಟಿಗೊಳಿಸುತ್ತದೆ: ರಾಜಕುಮಾರ ಕುಲಕರ್ಣಿ

| Published : Mar 02 2024, 01:49 AM IST

ತಂತ್ರಜ್ಞಾನದಿಂದ ಓದಿನ ಆಸಕ್ತಿ ಕ್ಷೀಣಿಸುತ್ತಿದೆಪುಸ್ತಕಗಳ ಓದು ಬದುಕಿನ ನೈತಿಕ ನೆಲೆಗಟ್ಟನ್ನು ಗಟ್ಟಿಗೊಳಿಸುತ್ತದೆ: ರಾಜಕುಮಾರ ಕುಲಕರ್ಣಿ
Share this Article
  • FB
  • TW
  • Linkdin
  • Email

ಸಾರಾಂಶ

ಬಾಗಲಕೋಟೆ: ಪುಸ್ತಕಗಳ ಓದು ಮನುಷ್ಯನನ್ನು ಪರಿಪೂರ್ಣ ವ್ಯಕ್ತಿಯನ್ನಾಗಿಸುತ್ತದೆ. ಸಧ್ಯದ ಸಂದರ್ಭದಲ್ಲಿ ಅತಿಯಾದ ಮೊಬೈಲ್ ಬಳಕೆಯಿಂದ ವಿದ್ಯಾರ್ಥಗಳು ಪುಸ್ತಕಗಳ ಓದಿನಿಂದ ವಿಮುಖರಾಗುತ್ತಿರುವರು. ತಂತ್ರಜ್ಞಾನದ ಪರಿಣಾಮ ಓದಿನ ಆಸಕ್ತಿ ಕ್ಷೀಣಿಸುತ್ತಿದೆ ಎಂದು ಎಸ್.ನಿಜಲಿಂಗಪ್ಪ ವೈದ್ಯಕೀಯ ಮಹಾವಿದ್ಯಾಲಯದ ಗ್ರಂಥಪಾಲಕ ರಾಜಕುಮಾರ ಕುಲಕರ್ಣಿ ಹೇಳಿದರು.

ತಂತ್ರಜ್ಞಾನದಿಂದ ಓದಿನ ಆಸಕ್ತಿ ಕ್ಷೀಣಿಸುತ್ತಿದೆಪುಸ್ತಕಗಳ ಓದು ಬದುಕಿನ ನೈತಿಕ ನೆಲೆಗಟ್ಟನ್ನು ಗಟ್ಟಿಗೊಳಿಸುತ್ತದೆ: ರಾಜಕುಮಾರ ಕುಲಕರ್ಣಿ

ಕನ್ನಡಪ್ರಭ ವಾರ್ತೆ ಬಾಗಲಕೋಟೆ:.

ಪುಸ್ತಕಗಳ ಓದು ಮನುಷ್ಯನನ್ನು ಪರಿಪೂರ್ಣ ವ್ಯಕ್ತಿಯನ್ನಾಗಿಸುತ್ತದೆ. ಸಧ್ಯದ ಸಂದರ್ಭದಲ್ಲಿ ಅತಿಯಾದ ಮೊಬೈಲ್ ಬಳಕೆಯಿಂದ ವಿದ್ಯಾರ್ಥಗಳು ಪುಸ್ತಕಗಳ ಓದಿನಿಂದ ವಿಮುಖರಾಗುತ್ತಿರುವರು. ತಂತ್ರಜ್ಞಾನದ ಪರಿಣಾಮ ಓದಿನ ಆಸಕ್ತಿ ಕ್ಷೀಣಿಸುತ್ತಿದೆ ಎಂದು ಎಸ್.ನಿಜಲಿಂಗಪ್ಪ ವೈದ್ಯಕೀಯ ಮಹಾವಿದ್ಯಾಲಯದ ಗ್ರಂಥಪಾಲಕ ರಾಜಕುಮಾರ ಕುಲಕರ್ಣಿ ಹೇಳಿದರು. .

ನಗರದ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜಿಸಿದ್ದ ''''''''ವಿದ್ಯಾರ್ಥಿ ಬದುಕಿನಲ್ಲಿ ಗ್ರಂಥಾಲಯದ ಮಹತ್ವ'''''''' ಕಾರ್ಯಾಗಾರದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು ಪುಸ್ತಕಗಳ ಓದು ಬದುಕಿನ ನೈತಿಕ ನೆಲೆಗಟ್ಟನ್ನು ಗಟ್ಟಿಗೊಳಿಸುತ್ತದೆ. ಹಣ ಮತ್ತು ಅಧಿಕಾರವೇ ಪ್ರಧಾನವಾಗಿರುವ ಸಮಾಜದಲ್ಲಿ ನಮ್ಮನ್ನು ಆಗೀಗಲಾದರೂ ಮನುಷ್ಯರನ್ನಾಗಿಸುವ ಸಾಮರ್ಥ್ಯ ಪುಸ್ತಕಗಳ ಓದಿಗಿದೆ. ಜ್ಞಾನ ಕೇಂದ್ರಗಳಾದ ಗ್ರಂಥಾಲಯಗಳ ಪ್ರಯೋಜನ ಪಡೆದುಕೊಂಡು ಬದುಕಿನಲ್ಲಿ ಸಾಧನೆ ಮತ್ತು ಯಶಸ್ಸನ್ನು ನಿಮ್ಮದಾಗಿಸಿಕೊಳ್ಳಿ ಎಂದು ವಿದ್ಯಾರ್ಥಿಗಳನ್ನುದ್ದೇಶಿಸಿ ನುಡಿದರು.

.

ಸಂಯೋಜಕ ಮತ್ತು ಗ್ರಂಥಪಾಲಕ ಪ್ರೊ.ಜಗದೀಶ್ ಪತಂಗೆ ಕಾರ್ಯಾಗಾರದ ಉದ್ದೇಶ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರಾಚಾರ್ಯ ಪ್ರೊ.ಪಟ್ಟಣಶೆಟ್ಟಿ ಅಧ್ಯಕ್ಷೀಯ ಭಾಷಣದಲ್ಲಿ ವಿದ್ಯಾರ್ಥಿಗಳು ಪಠ್ಯಪುಸ್ತಕಗಳ ಜೊತೆಗೆ ಬೇರೆ ವಿಷಯಗಳ ಪುಸ್ತಕಗಳನ್ನು ಓದುವ ಹವ್ಯಾಸ ಬೆಳೆಸಿಕೊಳ್ಳಿ ಎಂದು ಕರೆ ನೀಡಿದರು.

ಕಾರ್ಯಾಗಾರದಲ್ಲಿ ವಿವಿಧ ವಿಷಯಗಳ ಕುರಿತು ವಿದ್ಯಾರ್ಥಿಗಳಿಗೆ ಭಾಷಣ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ವಿಜೇತರಾದ ವಿದ್ಯಾರ್ಥಿಗಳಿಗೆ ಪುಸ್ತಕಗಳನ್ನು ಬಹುಮಾನವಾಗಿ ಕೊಡಲಾಯಿತು. ಗ್ರಂಥಾಲಯ ಮತ್ತು ಸಾಹಿತ್ಯ ಕ್ಷೇತ್ರದಲ್ಲಿನ ಸಾಧನೆಗಾಗಿ ರಾಜಕುಮಾರ ಕುಲಕರ್ಣಿಅವರನ್ನು ಕಾರ್ಯಕ್ರಮದ ವೇದಿಕೆಯಲ್ಲಿ ಸನ್ಮಾನಿಸಲಾಯಿತು. ಪ್ರೊ.ಬಡಿಗೇರ ಕಾರ್ಯಕ್ರಮ ನಿರೂಪಿಸಿದರು. ಪ್ರೊ.ಸುನೀಲ್ ವಂದಿಸಿದರು. ಕಾರ್ಯಾಗಾರದಲ್ಲಿ ಮಹಾವಿದ್ಯಾಲಯದ ಬೋಧಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.