ಸಾರಾಂಶ
ಕನ್ನಡಪ್ರಭ ವಾರ್ತೆ ಕೋಲಾರಪರಿಶಿಷ್ಟ ಜಾತಿಯಲ್ಲಿ ಜನಸಂಖ್ಯೆಗೆ ಅನುಗುಣವಾಗಿ ಒಳ ಮೀಸಲಾತಿ ನೀಡಬೇಕು ಎಂದು ಕಳೆದ ೩೦ ವರ್ಷದಿಂದ ನಡೆಸುತ್ತಿದ್ದ ಹೋರಾಟಕ್ಕೆ ಅಂತಿಮ ಜಯ ಸಿಗುವ ಸಮಯ ಬಂದಿದೆ ಎಂದು ಮಾದಿಗ ದಂಡೋರ ಮೀಸಲಾತಿ ಹೋರಾಟ ಸಮಿತಿಯ ಜಿಲ್ಲಾಧ್ಯಕ್ಷ ಅಲೇರಿ ಮುನಿರಾಜು ಹೇಳಿದರು.ನಗರದ ಸಂಘದ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಅವರು ಮಾತನಾಡಿ, ಪರಿಶಿಷ್ಟ ಜಾತಿಯ ಒಳ ಮೀಸಲಾತಿ ಸಮುದಾಯಗಳ ದತ್ತಾಂಶಗಳ ಆಧಾರದ ಮೇಲೆ ಸರ್ಕಾರಗಳೇ ಮೀಸಲಾತಿ ನೀಡಬಹುದು ಎಂದು ಕಳೆದ ಆಗಸ್ಟ್‌ನಲ್ಲಿ ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ ಎಂದರು.
ಮತ್ತೊಮ್ಮೆ ಜಾತಿ ಗಣತಿಹರಿಯಾಣ, ತೆಲಂಗಾಣ, ಆಂಧ್ರಪ್ರದೇಶ ಮತ್ತಿತರ ರಾಜ್ಯಗಳಲ್ಲಿ ಒಳ ಮೀಸಲಾತಿ ಅನುಷ್ಠಾನಕ್ಕೆ ಸಿದ್ಧತೆ ನಡೆಸಿವೆದಿವೆ. ರಾಜ್ಯದಲ್ಲಿ ಒಳಮೀಸಲಾತಿಯ ಅನುಷ್ಠಾನಕ್ಕಾಗಿ ನ್ಯಾಯಮೂರ್ತಿ ನಾಗಮೋಹನದಾಸ್ ಆಯೋಗವನ್ನು ನೇಮಕ ಮಾಡಿತ್ತು. ಪರಿಶಿಷ್ಟ ಜಾತಿಯ ವಿವಿಧ ಜಾತಿಗಳ ನಿಖರ ಮಾಹಿತಿಗಾಗಿ ಮತ್ತೊಮ್ಮೆ ಜಾತಿ ಗಣತಿ ನಡೆಸುವಂತೆ ನ್ಯಾಯಮೂರ್ತಿ ನಾಗಮೋಹನದಾಸ್ ವರದಿ ಶಿಫಾರಸು ಮಾಡಿದ್ದು, ಅದರಂತೆ ರಾಜ್ಯ ಸರ್ಕಾರ ಜಾತಿ ಗಣತಿ ನಡೆಸಲು ಆದೇಶ ಹೊರಡಿಸಿದ್ದು, ಏ. ೬ ರಿಂದಲೇ ಗಣತಿ ಕಾರ್ಯ ಆರಂಭವಾಗಿದೆ ಎಂದರು.
ಈ ಸಂದರ್ಭದಲ್ಲಿ ರಾಜ್ಯ ಗೌರವಾಧ್ಯಕ್ಷ ಎಂ. ರವಿ ಕುಮಾರ್, ಜಿಲ್ಲಾ ಹಿರಿಯ ಉಪಾಧ್ಯಕ್ಷ ಮಾಕಂಡಪ್ಪ, ಜಿಲ್ಲಾ ಉಪಾಧ್ಯಕ್ಷ ಎನ್. ದೇವರಾಜ್, ಕಾರ್ಯಾಧ್ಯಕ್ಷ ಡಿ.ಎನ್ ಆಂಜಿನಪ್ಪ, ಜಿಲ್ಲಾ ಕಾರ್ಯದರ್ಶಿ ಎಚ್.ಎನ್ ನಾರಾಯಣಸ್ವಾಮಿ, ತಾಲ್ಲೂಕು ಅಧ್ಯಕ್ಷ ನರಸಿಂಹಮೂರ್ತಿ, ಕಾರ್ಯಾಧ್ಯಕ್ಷ ಜಿ.ಅಶ್ವಥ್ ಇದ್ದರು.೮ಕೆಎಲ್‌ಆರ್-೨.............ಕೋಲಾರ ನಗರದಲ್ಲಿ ನಡೆದ ಮಾದಿಗ ದಂಡೋರ ಮೀಸಲಾತಿ ಹೋರಾಟ ಸಮಿತಿ ಸಂಘದ ಸಭೆಯಲ್ಲಿ ಜಿಲ್ಲಾಧ್ಯಕ್ಷ ಅಲೇರಿ ಮುನಿರಾಜು ಪಾಲ್ಗೊಂಡಿದ್ದರು.