ಕನ್ನಡಪ್ರಭ ವಾರ್ತೆ ತುಮಕೂರು ವಿಧಾನಸಭಾ ಅಧಿವೇಶನದಲ್ಲಿ ಒಳ ಮೀಸಲಾತಿ ಕುರಿತು ಸರ್ಕಾರಕ್ಕೆ ಒತ್ತಾಯ ಮಾಡಬೇಕು ಎಂದು ಕೋರಿ ಮಾದರ ಮಹಾಸಭಾದ ಮುಖಂಡರು ತುಮಕೂರು ಗ್ರಾಮಾಂತರ ಕ್ಷೇತ್ರದ ಶಾಸಕ ಬಿ.ಸುರೇಶ್‌ಗೌಡರಿಗೆ ಗುರುವಾರ ಮನವಿಪತ್ರ ಸಲ್ಲಿಸಿದರು. ಈ ವೇಳೆ ಮಾತನಾಡಿದ ಮಾದರ ಮಹಾಸಭಾ ಜಿಲ್ಲಾಧ್ಯಕ್ಷ ವೈ.ಎಚ್.ಹುಚ್ಚಯ್ಯ, ಪರಿಶಿಷ್ಟ ಜಾತಿಯಲ್ಲಿರುವ 101 ಕೋಮುಗಳಿಗೆ ಒಳಮೀಸಲಾತಿ ಕಲ್ಪಿಸುವಂತೆ ಒತ್ತಾಯಿಸಿ 35 ವರ್ಷಗಳಿಂದ ಮಾದಿಗ ಸಮುದಾಯದಿಂದ ಹೋರಾಟ ನಡೆಯುತ್ತಿದೆ. ಇದರ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ದಿ.1.8.24ರಂದು ಸ್ಪಷ್ಟ ಆದೇಶ ನೀಡಿ ಆಯಾ ರಾಜ್ಯ ಸರ್ಕಾರಗಳೇ ಪರಿಶಿಷ್ಟ ಜಾತಿಯಲ್ಲಿನ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಹಾಗೂ ಔದ್ಯೋಗಿಕ ದತ್ತಾಂಶಗಳನ್ನು ಕ್ರೂಢೀಕರಣ ಮಾಡಿ ಅದರ ಆಧಾರದ ಮೇಲೆ ಒಳಮೀಸಲಾತಿ ಕಲ್ಪಿಸುವಂತೆ ತಿಳಿಸಿದೆ ಎಂದು ವಿವರಿಸಿದರು.
ದಿ. 27.2.2026 ರಂದು ಸರ್ಕಾರ ಒಳಮೀಸಲಾತಿ ಜಾರಿಯನ್ನು ಕೈಬಿಟ್ಟು ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿರುವುದರಿಂದ ಪರಿಶಿಷ್ಟ ಜಾತಿಗಳಿಗೆ ಅನ್ಯಾಯವಾಗುತ್ತಿದೆ. ಅದರಲ್ಲೂ ಮಾದಿಗ ಸಮುದಾಯಕ್ಕೆ ತೀವ್ರ ಅನ್ಯಾಯವಾಗುತ್ತಿದೆ. ಆದ್ದರಿಂದ ಸರ್ಕಾರ ಈ ಅನ್ಯಾಯವನ್ನು ಸರಿಪಡಿಸಿ 56432 ಹುದ್ದೆಗಳ ನೇಮಕಾತಿಯಲ್ಲಿಯೇ ಒಳಮೀಸಲಾತಿ ಜಾರಿ ಮಾಡಿ ನ್ಯಾಯ ಒದಗಿಸಬೇಕು. ಈ ಬಗ್ಗೆ ವಿಧಾನಸಭಾ ಅಧಿವೇಶನದಲ್ಲಿ ಚರ್ಚೆ ಮಾಡಿ ಎಂದು ಮನವಿ ಮಾಡಿದರು. ಈ ವೇಳೆ ಕರ್ನಾಟಕ ಮಾದರ ಮಹಾಸಭಾ ರಾಜ್ಯ ಕಾರ್ಯಕಾರಣಿ ಸದಸ್ಯ ನರಸಿಂಹಮೂರ್ತಿ, ಜಿಲ್ಲಾ ಖಜಾಂಚಿ ಸಿ.ಗಂಗರಾಜು, ತುಮಕೂರು ತಾಲೂಕು ಅಧ್ಯಕ್ಷ ಎಚ್.ಎ.ಆಂಜಿನಪ್ಪ, ಕಾರ್ಯದರ್ಶಿ ಎಲ್.ವಿ.ದಾಸಪ್ಪ ಹಾಗೂ ಪದಾಧಿಕಾರಿಗಳು ಹಾಜರಿದ್ದರು.ನೇಮಕಾತಿಯಲ್ಲಿ ಒಳಮೀಸಲಾತಿ ಜಾರಿಯಾಗಲಿ
ವಿಧಾನಸಭಾ ಅಧಿವೇಶನದಲ್ಲಿ ಒಳ ಮೀಸಲಾತಿ ಕುರಿತು ಸರ್ಕಾರಕ್ಕೆ ಒತ್ತಾಯ ಮಾಡಬೇಕು ಎಂದು ಕೋರಿ ಮಾದರ ಮಹಾಸಭಾದ ಮುಖಂಡರು ತುಮಕೂರು ಗ್ರಾಮಾಂತರ ಕ್ಷೇತ್ರದ ಶಾಸಕ ಬಿ.ಸುರೇಶ್‌ಗೌಡರಿಗೆ ಗುರುವಾರ ಮನವಿಪತ್ರ ಸಲ್ಲಿಸಿದರು.
Latest Videos
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.