ಒಳಮೀಸಲು ವಿಳಂಬ:‘ಕೈ’ ವಿರುದ್ಧ ಆಕ್ರೋಶ: ಎ.ನಾರಾಯಣಸ್ವಾಮಿ

| Published : Jul 29 2025, 01:00 AM IST

ಒಳಮೀಸಲು ವಿಳಂಬ:‘ಕೈ’ ವಿರುದ್ಧ ಆಕ್ರೋಶ: ಎ.ನಾರಾಯಣಸ್ವಾಮಿ
Share this Article
  • FB
  • TW
  • Linkdin
  • Email

ಸಾರಾಂಶ

ರಾಜ್ಯದಲ್ಲಿ ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ಜಾರಿ ವಿಚಾರದಲ್ಲಿ ಸುಪ್ರೀಂ ಕೋರ್ಟ್‌ ಆದೇಶಿಸಿ ವರ್ಷ ಕಳೆಯುತ್ತಿದ್ದರೂ ರಾಜ್ಯ ಸರ್ಕಾರ ವಿಳಂಬ ಧೋರಣೆ ಅನುಸರಿಸುತ್ತಿರುವುದು ಖಂಡನೀಯವಾಗಿದೆ. ಶೀಘ್ರದಲ್ಲಿಯೇ ಬೇಡಿಕೆ ಈಡೇರಿಸದೇ ಇದ್ದಲ್ಲಿ ತೀವ್ರ ಹೋರಾಟವನ್ನು ನಡೆಸಿ ಬಿಸಿ ಮುಟ್ಟಿಸಬೇಕಾಗುತ್ತದೆ ಎಂದು ಕೇಂದ್ರ ಮಾಜಿ ಸಚಿವ ಎ.ನಾರಾಯಣಸ್ವಾಮಿ ಎಚ್ಚರಿಸಿದರು.

ಕನ್ನಡಪ್ರಭ ವಾರ್ತೆ ರಾಯಚೂರು

ರಾಜ್ಯದಲ್ಲಿ ಪರಿಶಿಷ್ಟ ಜಾತಿಗಳಿಗೆ ಒಳ ಮೀಸಲಾತಿ ಜಾರಿ ವಿಚಾರದಲ್ಲಿ ಸುಪ್ರೀಂ ಕೋರ್ಟ್‌ ಆದೇಶಿಸಿ ವರ್ಷ ಕಳೆಯುತ್ತಿದ್ದರೂ ರಾಜ್ಯ ಸರ್ಕಾರ ವಿಳಂಬ ಧೋರಣೆ ಅನುಸರಿ ಸುತ್ತಿರುವುದು ಖಂಡನೀಯವಾಗಿದೆ. ಶೀಘ್ರದಲ್ಲಿಯೇ ಬೇಡಿಕೆ ಈಡೇರಿಸದೇ ಇದ್ದಲ್ಲಿ ತೀವ್ರ ಹೋರಾಟವನ್ನು ನಡೆಸಿ ಬಿಸಿ ಮುಟ್ಟಿಸಬೇಕಾಗುತ್ತದೆ ಎಂದು ಕೇಂದ್ರ ಮಾಜಿ ಸಚಿವ ಎ.ನಾರಾಯಣಸ್ವಾಮಿ ಎಚ್ಚರಿಸಿದರು.

ಇಲ್ಲಿನ ಖಾಸಗಿ ಹೋಟೆಲ್‌ನಲ್ಲಿ ಸೋಮವಾರ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಒಳ ಮೀಸಲಾತಿ ವಿಚಾರದಲ್ಲಿ ಕಾಂಗ್ರೆಸ್‌ ಗೊಂದಲ ಸೃಷ್ಠಿಸಿ, ದಲಿತ ಸಮುದಾಯಗಳನ್ನು ದಾರಿತಪ್ಪಿಸುವ ಕೆಲಸ ಮಾಡುತ್ತಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಅವರ ಪುತ್ರ ಪ್ರಿಯಾಂಕ ಖರ್ಗೆ, ಸಚಿವರಾದ ಪರಮೇಶ್ವರ, ಎಚ್‌.ಸಿ. ಮಹದೇವಪ್ಪ, ಕೆ.ಎಚ್‌.ಮುನಿಯಪ್ಪ, ಆರ್‌.ಬಿ.ತಿಮ್ಮಾಪುರ ಸೇರಿ ಅನೇಕರು ದಲಿತ ನಾಯಕರು ಒಳ ಮೀಸಲಾತಿ ಜಾರಿ ವಿಚಾರದಲ್ಲಿ ಆರಂಭದಿಂದಲೂ ವಿರೋಧ ವ್ಯಕ್ತಪಡಿಸುತ್ತಲೇ ಇದ್ದಾರೆ ಎಂದು ಆರೋಪಿಸಿದರು.

ಒಳ ಮೀಸಲು ಆಯಾ ರಾಜ್ಯಗಳಿಗೆ ಬಿಟ್ಟ ಸಂಗತಿಯಾಗಿದೆ ಎಂದು ಸುಪ್ರೀಂ ಸ್ಪಷ್ಟವಾಗಿ ಸೂಚಿಸಿದ್ದರು ಸಹ ಆಯೋಗ ರಚನೆ, ಜಾತಿ ಸರ್ವೆ ಹೆಸರಿನಲ್ಲಿ ಕಾಂಗ್ರೆಸ್‌ ಸರ್ಕಾರ ಕಾಲಹರಣ ಮಾಡುತ್ತಿದೆ.ನ್ಯಾ.ನಾಗಮೋಹನ ದಾಸ್‌ ಆಯೋಗಕ್ಕೆ ಅಗತ್ಯವಾದ ಸಹಕಾರವನ್ನು ನೀಡುವಲ್ಲಿ ಸರ್ಕಾರ ಹಾಗೂ ಅಧಿಕಾರಿಗಳು ಸಂಪೂರ್ಣವಾಗಿ ವಿಫಲರಾಗಿದ್ದು, ಸರ್ಕಾರದ ಈ ಬೇಜವಾಬ್ದಾರಿ ತನದಿಂದ ಶೋಷಿತ ಸಮುದಾಯಗಳಿಗೆ ನ್ಯಾಯ ಸಿಗುವುದೇ ಅನುಮಾನ ಎನ್ನುವ ಪರಿಸ್ಥಿತಿಯನ್ನು ನಿರ್ಮಿಸಿದ್ದಾರೆ. ಆ.10 ರಿಂದ 18 ನಡೆಯ ಲಿರುವ ಅಧಿವೇಶನದಲ್ಲಿ ಒಳ ಮೀಸಲಾತಿ ಜಾರಿಗೆ ಮುಂದಾಗಬೇಕು ಇಲ್ಲವಾದಲ್ಲಿ ತೀವ್ರ ಹೋರಾಟದ ಮುಖಾಂತರ ಸರ್ಕಾರಕ್ಕೆ ತಕ್ಕ ಪಾಠ ಕಲಿಸಬೇಕಾಗುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪತ್ರಿಕಾಗೋಷ್ಠಿಯಲ್ಲಿ ದಲಿತ ಮುಖಂಡರಾದ ಎಸ್‌.ಮಾರೆಪ್ಪ, ಮಂಜುನಾಥ, ರವೀಂದ್ರ ಜಲ್ದಾರ್, ತಿಮ್ಮಪ್ಪ ಫಿರಂಗಿ, ಎಂ.ವಿರೂಪಾಕ್ಷಿ, ಪಿ.ಯಲ್ಲಪ್ಪ, ನರಸಪ್ಪ ದಂಡೋರಾ ಸೇರಿದಂತೆ ಅನೇಕರು ಇದ್ದರು.