ಅಂತಾರಾಷ್ಟ್ರೀಯ ದತ್ತು ಮಾಸಾಚರಣೆ

| Published : Nov 15 2025, 03:00 AM IST

ಸಾರಾಂಶ

ಕನ್ನಡಪ್ರಭ ವಾರ್ತೆ ಬೆಳಗಾವಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಕ್ಕಳ ರಕ್ಷಣಾ ನಿರ್ದೇಶನಾಲಯ ಬೆಂಗಳೂರು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕಗಳ ಸಂಯುಕ್ತಾಶ್ರಯದಲ್ಲಿ ಮಕ್ಕಳ ದಿನಾಚರಣೆಯ ಹಾಗೂ ಅಂತಾರಾಷ್ಟ್ರೀಯ ದತ್ತು ಮಾಸಾಚರಣೆ ನಿಮಿತ್ತ ಹಮ್ಮಿಕೊಂಡಿದ್ದ ಜಾಗೃತಿ ಜಾಥಾ ಹಾಗೂ ಬೈಕ್ ರ್‍ಯಾಲಿಗೆ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಶುಕ್ರವಾರ ಜಿಲ್ಲಾಧಿಕಾರಿ ಮೊಹಮ್ಮದ ರೋಷನ್ ಚಾಲನೆ ನೀಡಿದರು.

ಕನ್ನಡಪ್ರಭ ವಾರ್ತೆ ಬೆಳಗಾವಿ

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಕ್ಕಳ ರಕ್ಷಣಾ ನಿರ್ದೇಶನಾಲಯ ಬೆಂಗಳೂರು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕಗಳ ಸಂಯುಕ್ತಾಶ್ರಯದಲ್ಲಿ ಮಕ್ಕಳ ದಿನಾಚರಣೆಯ ಹಾಗೂ ಅಂತಾರಾಷ್ಟ್ರೀಯ ದತ್ತು ಮಾಸಾಚರಣೆ ನಿಮಿತ್ತ ಹಮ್ಮಿಕೊಂಡಿದ್ದ ಜಾಗೃತಿ ಜಾಥಾ ಹಾಗೂ ಬೈಕ್ ರ್‍ಯಾಲಿಗೆ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಶುಕ್ರವಾರ ಜಿಲ್ಲಾಧಿಕಾರಿ ಮೊಹಮ್ಮದ ರೋಷನ್ ಚಾಲನೆ ನೀಡಿದರು.

ಈ ವೇಳೆ ಜಿಲ್ಲಾಧಿಕಾರಿ ಮೊಹಮ್ಮದ ರೋಷನ್ ಮತ್ತು ಜಿಲ್ಲಾ ಪಂಚಾಯತಿ ಸಿಇಒ ರಾಹುಲ್ ಶಿಂದೆ ಮಾತನಾಡಿ, 2025-26ನೇ ಸಾಲಿನ ರಾಷ್ಟ್ರೀಯ ದತ್ತು ಮಾಸಾಚರಣೆ ಕಾರ್ಯಕ್ರಮವನ್ನು ವಿಶೇಷ ಚೇತನ ಮಕ್ಕಳ ದತ್ತು ಪ್ರಕ್ರಿಯೆ ಎಂಬ ಘೋಷವಾಕ್ಯದೊಂದಿಗೆ ಜಿಲ್ಲೆಯಲ್ಲಿ ಅರಿವು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಇದನ್ನು ಯಶಸ್ವಿಗೊಳಿಸಲು ಎಲ್ಲರೂ ಸಮನ್ವಯದೊಂದಿಗೆ ಕಾರ್ಯನಿರ್ವಹಿಸಬೇಕು ಎಂದರು.

ಜಿಲ್ಲಾಧಿಕಾರಿ ಕಚೇರಿ ಆವರಣದಿಂದ ಆರಂಭವಾದ ಬೈಕ್ ರ್‍ಯಾಲಿ ಚನ್ನಮ್ಮ ಸರ್ಕಲ್, ಕಾಲೇಜ್ ರೋಡ್‌, ಬೋಗಾರವೇಸ್‌ ಸರ್ಕಲ್, ಗೋಗಟೆ ಸರ್ಕಲ್ ಮಾರ್ಗವಾಗಿ ಗೋವಾವೇಸ್ ಸರ್ಕಲ್‌ನಲ್ಲಿ ಸಮಾರೋಪಗೊಂಡಿತು. ಈ ವೇಳೆ ರ್‍ಯಾಲಿಯಲ್ಲಿ ಭಾಗಿಯಾಗಿದ್ದವರು ಕಾನೂನು ಬದ್ದ ದತ್ತು ಸಂಕಲ್ಪ ಸಂದೇಶ ಪ್ರತಿಜ್ಞಾ ವಿಧಿಯನ್ನು ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಡಾ.ಪರ್ವೀನ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ಕಾಂಚನಾ ಅಮಠೆ, ಮಕ್ಕಳ ಕಲ್ಯಾಣ ಸಮಿತಿ ಸದಸ್ಯ ಡಾ.ಜಗದೀಶ ಸರಿಕರ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ರಾಮಮುರ್ತಿ.ಕೆ.ವಿ, ಮಹಿಳಾ ಕಲ್ಯಾಣ ಸಂಸ್ಥೆ ಅಧ್ಯಕ್ಷ ಎಂ.ಎಸ್.ಚೌಗಲಾ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಿಬ್ಬಂದಿ, ಸರ್ಕಾರಿ ವಿಶೇಷ ದತ್ತು ಸ್ವೀಕಾರ ಕೇಂದ್ರ, ಸ್ವಾಮಿ ವಿವೇಕಾನಂದ ದತ್ತು ಸ್ವೀಕಾರ ಕೇಂದ್ರದ ಸಿಬ್ಬಂದಿ, ಸರ್ಕಾರಿ ಮಕ್ಕಳ ಪಾಲನಾ ಸಂಸ್ಥೆಯ ಅಧಿಕ್ಷಕರು ಸೇರಿ ಹಲವರು ಉಪಸ್ಥಿತರಿದ್ದರು.