ಈ ಬಾರಿಯ ಬೇಸಿಗೆ ಕಾಲದಲ್ಲಿ ಸಾರ್ವಜನಿಕರು ನೀರಿನ ಅಭಾವ ಎದುರಿಸಬಾರದೆಂಬ ಸದುದ್ದೇಶದಿಂದ ಶಾಸಕ, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ವೈಯುಕ್ತಿಕ ಕೊಡುಗೆ ರು.28 ಲಕ್ಷದಲ್ಲಿ ಸ್ವಕ್ಷೇತ್ರದಲ್ಲಿ ಟ್ಯಾಂಕರ್ ನೀರು ಸರಬರಾಜು ವ್ಯವಸ್ಥೆ ಆರಂಭಿಸಿದ್ದಾರೆ.

ಕನ್ನಡಪ್ರಭ ವಾರ್ತೆ ವಿರಾಜಪೇಟೆ

ಈ ಬಾರಿಯ ಬೇಸಿಗೆ ಕಾಲದಲ್ಲಿ ಸಾರ್ವಜನಿಕರು ನೀರಿನ ಅಭಾವ ಎದುರಿಸಬಾರದೆಂಬ ಸದುದ್ದೇಶದಿಂದ ಶಾಸಕ, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ವೈಯುಕ್ತಿಕ ಕೊಡುಗೆ ರು.28 ಲಕ್ಷದಲ್ಲಿ ಸ್ವಕ್ಷೇತ್ರದಲ್ಲಿ ಟ್ಯಾಂಕರ್ ನೀರು ಸರಬರಾಜು ವ್ಯವಸ್ಥೆ ಆರಂಭಿಸಿದ್ದಾರೆ. ಪೊನ್ನಂಪೇಟೆ ಭಾಗದಲ್ಲಿ ಅಗತ್ಯ ಇರುವ ಸಾರ್ವಜನಿಕರಿಗೆ ತುರ್ತು ನೀರಿನ ಸೌಲಭ್ಯ ಕಲ್ಪಿಸಲು ಟ್ಯಾಂಕರ್ ವಾಹನವನ್ನು ವ್ಯವಸ್ಥೆ ಮಾಡಿದ್ದಾರೆ.ಪೊನ್ನಂಪೇಟೆಯಲ್ಲಿ ನೀರಿನ ಟ್ಯಾಂಕರ್ ವಾಹನ ಉದ್ಘಾಟಿಸಿ ಮಾತನಾಡಿದ ಅವರು, ತೀವ್ರ ಬೇಸಿಗೆಯಿಂದ ನೀರಿನ ಅಭಾವ ತಲೆದೋರಿದ್ದು, ಸಾರ್ವಜನಿಕರಿಗೆ ನೀರಿನ ಅಭಾವ ಆಗದಂತೆ ನೋಡಿಕೊಳ್ಳಲು ಈ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ತಿಳಿಸಿದರು.ಈ ಸಂದರ್ಭ ಬ್ಲಾಕ್ ಕಾಂಗ್ರೆಸ್‌ ಅಧ್ಯಕ್ಷ ಮಿದೇರಿರ ನವೀನ್, ಮಹಿಳಾ ಅಧ್ಯಕ್ಷೆ ಆಶಾ ಪೂಣಚ್ಚ, ಪಂಚಾಯಿತಿ ಅಧ್ಯಕ್ಷ ಅಣ್ಣಿರ ಹರೀಶ್, ಉಪಾಧ್ಯಕ್ಷ ಆಲಿರ ರಶೀದ್, ಮಾಜಿ ಮಹಿಳಾ ಅಧ್ಯಕ್ಷ ಭಾರತಿ, ಸುನಿತಾ, ಅನಿತಾ, ತಾಲೂಕು ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಜುನೈದ್, ಹಿರಿಯರು ಮುಕಳೇರ ಕುಶಾಲಪ್ಪ, ಜಿಮ್ಮಿ ಅಣ್ಣಯ್ಯ, ಕೊಲ್ಲಿರ ಬೋಪಣ್ಣ, ಅಜ್ಜಿಕುಟ್ಟಿರ ಪೊನ್ನು, ಪಮ್ಮು, ಗಿರೀಶ್, ಮನು, ಮಚ್ಚಾಮಾಡ ಮನು, ಸಿದ್ದು ನಾಚಪ್ಪ, ಅನಿಶ್ ಮತ್ತಿತರರು ಉಪಸ್ಥಿತರಿದ್ದರು.