ಬಾಲು ಪಬ್ಲಿಕ್ ಶಾಲೆಯಲ್ಲಿ ಅಂತಾರಾಷ್ಟ್ರೀಯ ಮಕ್ಕಳ ಚಿಲನಚಿತ್ರೋತ್ಸವ

| Published : Nov 24 2025, 02:00 AM IST

ಬಾಲು ಪಬ್ಲಿಕ್ ಶಾಲೆಯಲ್ಲಿ ಅಂತಾರಾಷ್ಟ್ರೀಯ ಮಕ್ಕಳ ಚಿಲನಚಿತ್ರೋತ್ಸವ
Share this Article
  • FB
  • TW
  • Linkdin
  • Email

ಸಾರಾಂಶ

ಚನ್ನಪಟ್ಟಣ: ನಗರದ ಬಾಲು ಪಬ್ಲಿಕ್ ಶಾಲೆಯಲ್ಲಿ ಮೂರು ದಿನಗಳ ಕಾಲ ಆಯೋಜಿಸಿದ್ದ ಅಂತಾರಾಷ್ಟ್ರೀಯ ಮಕ್ಕಳ ಚಲನಚಿತ್ರೋತ್ಸವ ಯಶಸ್ವಿಯಾಗಿ ನಡೆಯಿತು.

ಚನ್ನಪಟ್ಟಣ: ನಗರದ ಬಾಲು ಪಬ್ಲಿಕ್ ಶಾಲೆಯಲ್ಲಿ ಮೂರು ದಿನಗಳ ಕಾಲ ಆಯೋಜಿಸಿದ್ದ ಅಂತಾರಾಷ್ಟ್ರೀಯ ಮಕ್ಕಳ ಚಲನಚಿತ್ರೋತ್ಸವ ಯಶಸ್ವಿಯಾಗಿ ನಡೆಯಿತು.

ನಗರದ ಡಾನ್ ಬಾಸ್ಕೋ ಶಾಲೆ, ನ್ಯೂಸ್ ಸನ್ ರೈಸ್, ದಿವ್ಯ ಚೇತನ, ಸೆಂಟ್ ಮೈಕಲ್ ಸೇರಿದಂತೆ ಹಲವು ಶಾಲೆಗಳ ವಿದ್ಯಾರ್ಥಿಗಳು ಆಗಮಿಸಿ ಚಲನಚಿತ್ರಗಳನ್ನು ವೀಕ್ಷಿಸಿದರು.

ಮೂರು ದಿನಗಳ ಚಲನಚಿತ್ರೋತ್ಸವದಲ್ಲಿ ಸುಮಾರು ೮೦೦ ವಿದ್ಯಾರ್ಥಿಗಳು ಚಲನಚಿತ್ರೋತ್ಸವದಲ್ಲಿ ಭಾಗಿಯಾದರು.

ಹೆಣ್ಣುಮಕ್ಕಳ ಶಿಕ್ಷಣದ ಮಹತ್ವ ,ಸ್ನೇಹದ ಮಹತ್ವ, ತಂದೆ,ತಾಯಿ, ಗುರು ಹಿರಿಯರಿಗೆ ಸಲ್ಲಿಸಬೇಕಾದ ಗೌರವ, ಪ್ರಾಮಾಣಿಕತೆ, ಶ್ರದ್ಧೆ, ಛಲ ಮುಂತಾದ ಮೌಲ್ಯಯುತವಾದ ಚಿತ್ರಗಳನ್ನು ಪ್ರದರ್ಶಿಸಲಾಯಿತು.

ಈ ವೇಳೆ ಶಾಲೆಯ ಸಂಸ್ಥಾಪಕ ಕಾರ್ಯದರ್ಶಿ ವೆಂಕಟಸುಬ್ಬಯ್ಯ ಚೆಟ್ಟಿ ಮಾತನಾಡಿ, ಉತ್ತಮ ಚಲನಚಿತ್ರಗಳು ಸಹ ಶಿಕ್ಷಣದ ಒಂದು ಮಾಧ್ಯಮವಾಗಿದ್ದು ಮಕ್ಕಳ ಜ್ಞಾನವನ್ನು ಹೆಚ್ಚಿಸುವಲ್ಲಿ ಸಹಕಾರಿಯಾಗಿದೆ. ಮಕ್ಕಳು ಮೌಲ್ಯಯುವ ಚಲನಚಿತ್ರಗಳನ್ನು ವೀಕ್ಷಿಸಿ ಅದರಿಂದ ಉತ್ತಮವಾದ ಅಂಶಗಳನ್ನು ಕಲಿಯಬೇಕು ಎಂದರು.

ಶಾಲೆಯ ಜಂಟಿ ಕಾರ್ಯದರ್ಶಿ ವಿ. ಬಾಲಸುಬ್ರಮಣ್ಯಂ ಮಾತನಾಡಿ, ಇಂದಿನ ಆಧುನಿಕ ಯುಗದಲ್ಲಿ ತಾಂತ್ರಿಕ ಶಿಕ್ಷಣ ಬಹಳ ಮುಖ್ಯವಾದದ್ದು. ವಿದ್ಯಾರ್ಥಿಗಳು ಟೆಕ್ನಾಲಜಿಯ ಕುರಿತು ಆಸಕ್ತಿ ಬೆಳೆಸಿಕೊಳ್ಳಬೇಕು ಎಂದು ತಿಳಿಸಿದರು.

ಶಾಲೆಯ ಮುಖ್ಯ ಶಿಕ್ಷಕಿ ಕವಿತಾ ಮಾತನಾಡಿ, ಚಲನಚಿತ್ರಗಳಲ್ಲಿ ಪ್ರತಿಬಿಂಬಿತವಾಗುತ್ತಿರುವ ಮೌಲ್ಯಗಳ ಕುರಿತು ಮಕ್ಕಳಿಗೆ ಮಾಹಿತಿ ನೀಡಿದರು.

ಶಾಲೆಯ ಅಧ್ಯಕ್ಷೆ ಡಾ. ಕೆ.ಪಿ. ಶೈಲಜಾ, ಟ್ರಸ್ಟಿಗಳಾದ ಕವಿತಾ ಬಾಲಸುಬ್ರಮಣ್ಯಂ, ಗೀತಾ, ಸುಮಾ, ಅಸ್ರ, ರಕ್ಷಿತಾ, ಮಂಜುಳಾ , ಪ್ರಸನ್ನ ಕುಮಾರ್ ಇತರರು ಇದ್ದರು.

ಪೊಟೋ೨೩ಸಿಪಿಟಿ೧: ಚನ್ನಪಟ್ಟಣ ಬಾಲು ಪಬ್ಲಿಕ್ ಶಾಲೆಯಲ್ಲಿ ಆಯೋಜಿಸಿದ್ದ ಅಂತಾರಾಷ್ಟ್ರೀಯ ಮಕ್ಕಳ ಚಲನಚಿತ್ರೋತ್ಸವದಲ್ಲಿ ವಿದ್ಯಾರ್ಥಿಗಳು ಚಲನಚಿತ್ರ ವೀಕ್ಷಿಸಿದರು.