ಸಾರಾಂಶ
ಶ್ರೀ ಸಿದ್ಧಾರ್ಥ ತಾಂತ್ರಿಕ ಮಹಾವಿದ್ಯಾಲಯದಲ್ಲಿ ತರಬೇತಿ ಮತ್ತು ಉದ್ಯೋಗಾವಕಾಶಗಳು ವಿಭಾಗದ ವತಿಯಿಂದ ಅಂತಾರಾಷ್ಟ್ರೀಯ ಶಿಕ್ಷಣ ಹಬ್ಬಆಯೋಜಿಸಲಾಗಿತ್ತು.
ಕನ್ನಡಪ್ರಭ ವಾರ್ತೆ ತುಮಕೂರು
ಶ್ರೀ ಸಿದ್ಧಾರ್ಥ ತಾಂತ್ರಿಕ ಮಹಾವಿದ್ಯಾಲಯದಲ್ಲಿ ತರಬೇತಿ ಮತ್ತು ಉದ್ಯೋಗಾವಕಾಶಗಳು ವಿಭಾಗದ ವತಿಯಿಂದ ಅಂತಾರಾಷ್ಟ್ರೀಯ ಶಿಕ್ಷಣ ಹಬ್ಬಆಯೋಜಿಸಲಾಗಿತ್ತು.ಕಾರ್ಯಕ್ರಮವನ್ನು ಸಾಹೇ ವಿವಿಯ ಉಪಕುಲಪತಿ ಡಾ.ಕೆ.ಬಿ.ಲಿಂಗೇಗೌಡ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಸಾಹೇ ವಿವಿಯು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಈ ಶಿಕ್ಷಣ ಉತ್ಸವವನ್ನು ಆಯೋಜಿಸಿದೆ. ವಿವಿಯು ಈ ತರಹದ ಅನೇಕ ಕಾರ್ಯಕ್ರಮಗಳನ್ನು ನಿಯಮಿತವಾಗಿ ಮಾಡುತ್ತಿದ್ದು, ವಿದ್ಯಾರ್ಥಿಗಳು ಇದರ ಪ್ರಯೋಜನವನ್ನು ಪಡೆದುಕೊಳ್ಳವಂತೆ ಸಲಹೆ ನೀಡಿದರು.
ಸಾಹೇ ವಿವಿಯ ಕುಲಸಚಿವರಾದ ಡಾ.ಎಂ.ಝಡ್ ಕುರಿಯನ್ ಮಾತನಾಡಿ, ವಿದ್ಯಾರ್ಥಿಗಳು ಸದಾ ಉತ್ಸಾಹದಿಂದಿರಬೇಕು. ಹೊರದೇಶಗಳಲ್ಲಿ ಕಲಿತದ್ದನ್ನು ಸ್ವದೇಶದಲ್ಲಿ ಸಂದರ್ಭಕ್ಕೆ ಅನುಗುಣವಾಗಿ ಅನುಷ್ಠಾನಗೊಳಿಸಬೇಕು. ಜಪಾನೀಯರ ಮನಸ್ಥಿತಿ ಕುರಿತು ಉದಾಹರಿಸುತ್ತಾ, ಒಬ್ಬರು ಮಾಡುವ ಕೆಲಸವನ್ನು ಬೇರೊಬ್ಬರು ಸುಲಭವಾಗಿ ಮಾಡಬಹುದು, ಆದರೆ ಯಾರೂ ಈವರೆಗೆ ಮಾಡಿಲ್ಲದ ಕೆಲಸವನ್ನು ನೀವು ಮಾಡಿಯೇ ತೀರಬೇಕು. ಅದನ್ನು ಬೇರೆಯವರಿಗೆ ಹೇಗೆ ಮಾಡಬೇಕೆಂದು ಹೇಳಿಕೊಡಬೇಕು ಎಂದುರು.ಬೆಂಗಳೂರಿನ ಕೆರಿಯರ್ ಕೌನ್ಸಿಲರ್ಸ್ ನಿರ್ದೇಶಕರಾದ ಮಲ್ಹರಿ ದೋತ್ರೇಕರ್ ಮಾತನಾಡಿ, ತಮ್ಮ ಸಂಸ್ಥೆಯಲ್ಲಿ ವಿದೇಶಿ ವ್ಯಾಸಂಗದ ಬಗ್ಗೆ ಮಾಹಿತಿ ನೀಡಲಾಗುವುದು. ವಿದ್ಯಾರ್ಥಿಗಳು ಕೌಶಲ್ಯಾಭಿವೃದ್ಧಿ, ಹೊಸ ತಂತ್ರಜ್ಞಾನ ಬಳಕೆ, ಸಂವಹನ ಕಲೆ ರೂಢಿಸಿಕೊಳ್ಳುವಂತೆ ಕರೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಿದ್ಧಾರ್ಥ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ.ಎಂ.ಎಸ್.ರವಿಪ್ರಕಾಶ, ಭಾಗವಹಿಸಿದ ವಿದ್ಯಾರ್ಥಿಗಳು ಶಿಕ್ಷಣ ಉತ್ಸವದ ಸದುಪಯೋಗ ಪಡೆಯುವಂತೆ ಹೇಳಿದರು. ಕಾರ್ಯಕ್ರಮದಲ್ಲಿ ಕುಲಾಧಿಪತಿಗಳ ಸಲಹೆಗಾರರಾದ ಡಾ.ವಿವೇಕ್‌ವೀರಯ್ಯ, ಕಾಲೇಜಿನ ವಿವಿಧ ವಿಭಾಗಗಳ ಮುಖ್ಯಸ್ಥರು, ಪ್ರಾಧ್ಯಾಪಕರು, ವಿದ್ಯಾರ್ಥಿಗಳು ಮತ್ತು ಪೋಷಕರು ಭಾಗವಹಿಸಿದ್ದರು.ಕಾರ್ಯಕ್ರಮದಲ್ಲಿ ಫ್ರಾನ್ಸ್, ದುಬೈ, ನ್ಯೂಜಿಲ್ಯಾಂಡ್, ಆಸ್ಟ್ರೇಲಿಯಾ, ಯುಕೆ ಸೇರಿದಂತೆ ಸುಮಾರು ೨೦ ವಿದೇಶಿ ಶಿಕ್ಷಣ ಸಂಸ್ಥೆಗಳು ಮತ್ತು ವಿದೇಶದಲ್ಲಿ ಉನ್ನತ ಶಿಕ್ಷಣ ವ್ಯಾಸಂಗ ಮಾಡಲು ಸಾಲ ಸೌಭ್ಯ ಕುರಿತಂತೆ ಮಾಹಿತಿ ನೀಡಿದ್ದು ವಿಶೇಷವಾಗಿತ್ತು. ಕಾರ್ಯಕ್ರಮಕ್ಕೆ ಆಗಮಿಸಿದ್ದ ವಿದ್ಯಾರ್ಥಿಗಳು, ಶಿಕ್ಷಣ ಉತ್ಸವದಲ್ಲಿ ಪಾಲ್ಗೊಂಡಿದ್ದರಿಂದ, ವಿದೇಶಿ ವ್ಯಾಸಂಗದ ಬಗ್ಗೆ ಸಾಕಷ್ಟು ಮಾಹಿತಿ ದೊರೆತಿದೆ ಎಂದು ಸಂತಸ ವ್ಯಕ್ತಪಡಿಸಿದರು.