ಪ್ರಿಯಾಂಕಗೆ ಅಂತಾರಾಷ್ಟ್ರೀಯ ಮಟ್ಟದ ಪ್ರಶಸ್ತಿ

| Published : Jun 01 2024, 12:45 AM IST

ಸಾರಾಂಶ

ತಾಲೂಕಿನ ತಾಳಗುಂದ ಸರ್ಕಾರಿ ಉನ್ನತ ಮಾದರಿ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿನಿ ಪ್ರಿಯಾಂಕ.ಎಂ.ಎನ್ ಜಪಾನ್‌ನಲ್ಲಿ ನಡೆದ ಅಂತಾರಾಷ್ಟ್ರೀಯ ಮಟ್ಟದ ಸೈನ್ಸ್ ಎಕ್ಸ್‌ಚೆಂಜ್ ಪ್ರೋಗ್ರಾಂನಲ್ಲಿ ಭಾಗವಹಿಸಿ ಪ್ರಶಸ್ತಿ ಪಡೆದಿದ್ದಾರೆ

ಕನ್ನಡಪ್ರಭ ವಾರ್ತೆ ಶಿರಾ ತಾಲೂಕಿನ ತಾಳಗುಂದ ಸರ್ಕಾರಿ ಉನ್ನತ ಮಾದರಿ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿನಿ ಪ್ರಿಯಾಂಕ.ಎಂ.ಎನ್ ಜಪಾನ್‌ನಲ್ಲಿ ನಡೆದ ಅಂತಾರಾಷ್ಟ್ರೀಯ ಮಟ್ಟದ ಸೈನ್ಸ್ ಎಕ್ಸ್‌ಚೆಂಜ್ ಪ್ರೋಗ್ರಾಂನಲ್ಲಿ ಭಾಗವಹಿಸಿ ಪ್ರಶಸ್ತಿ ಪಡೆದಿದ್ದಾರೆ. ವಿದ್ಯಾರ್ಥಿನಿ ಪ್ರಿಯಾಂಕ.ಎಂ.ಎನ್ ಆಟೋಮ್ಯಾಟಿಕ್‌ ಪೆಸ್ಟೀಶೆಡ್‌ ಸ್ಪ್ರೇಯರ್‌ ಆನ್‌ ದಿ ಪ್ಲ್ಯಾಂಟ್‌ ನಾಟ್‌ ಆನ್‌ ದಿ ಪ್ರೀ ಸ್ಪೇಸ್ ಎಂಬ ಪ್ರಾಜೆಕ್ಸ್‌ನ್ನು ಶಾಲೆಯ ವಿಜ್ಞಾನ ಶಿಕ್ಷಕಿ ಟಿ.ವಿ ರೂಪಾ ಮಾರ್ಗದರ್ಶನದಲ್ಲಿ ತಯಾರಿಸಿದ್ದರು. ಈ ಪ್ರಾಜೆಕ್ಟ್ ರಾಷ್ಟ್ರ ಮಟ್ಟದಲ್ಲಿ ಆಯ್ಕೆಯಾಗಿ ದೆಹಲಿಯಲ್ಲಿ ನಡೆದ ರಾಷ್ಟ್ರೀಯ ಮಟ್ಟದ ವಸ್ತು ಪ್ರದರ್ಶನ ಮತ್ತು ಮಾದರಿಗಳ ಸ್ಪರ್ಧೆಯಲ್ಲಿ ಭಾಗವಹಿಸಿ ಅತ್ಯುತ್ತಮ ಮಾದರಿಯಾಗಿ ಆಯ್ಕೆಯಾಗಿ ಅಂತರಾಷ್ಟ್ರೀಯ ಮಟ್ಟದ ಸೈನ್ಸ್ ಎಕ್ಸ್‌ಚೆಂಜ್ ಪ್ರೋಗ್ರಾಂಗೆ ಆಯ್ಕೆಯಾಗಿತ್ತು.ಮೇ. 20 ರಿಂದ 25ರವರೆಗೆ ಜಪಾನ್ ನಲ್ಲಿ ನಡೆದ ಸಕುರಾ ಕಾರ್ಯಕ್ರಮದಲ್ಲಿ ಪ್ರಿಯಾಂಕ.ಎಂ.ಎನ್ ಭಾರತ ದೇಶದ ಪ್ರತಿನಿಧಿಯಾಗಿ ಕರ್ನಾಟಕದಿಂದ ಭಾಗವಹಿಸಿ ಪ್ರಶಸ್ತಿ ಪಡೆದಿದ್ದಾರೆ. ವಿದ್ಯಾರ್ಥಿನಿಗೆ ಮಾರ್ಗದರ್ಶನ ನೀಡಿದ ಶಾಲೆಯ ವಿಜ್ಞಾನ ಶಿಕ್ಷಕಿ ಮತ್ತು ಪ್ರಭಾರ ಮುಖ್ಯ ಶಿಕ್ಷಕ ಟಿವಿ ರೂಪ ಅವರಿಗೆ ಮತ್ತು ಎಲ್ಲಾ ಶಿಕ್ಷಕ ಸಿಬ್ಬಂದಿಗೆ, ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಎನ್.ಕೃಷ್ಣಪ್ಪ ಅಭಿನಂದನೆ ಸಲ್ಲಿಸಿದ್ದಾರೆ.