ಕ್ರೈಸ್ಟ್ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

| Published : Mar 10 2024, 01:33 AM IST

ಸಾರಾಂಶ

ವಿದ್ಯಾರ್ಥಿಗಳು ಸ್ವತಂತ್ರರಾಗಿ ಮತ್ತು ಆತ್ಮಸ್ಥೈರ್ಯವನ್ನು ಗಳಿಸಬೇಕು. ಮಹಿಳೆಯರು ಸವಾಲುಗಳನ್ನು ಎದುರಿಸಲು ದೈಹಿಕವಾಗಿ, ಭಾವನಾತ್ಮಕವಾಗಿ ಮತ್ತು ಮಾನಸಿಕವಾಗಿ ಸದೃಢರಾಗಬೇಕು

ಕನ್ನಡಪ್ರಭ ವಾರ್ತೆ ಮೈಸೂರು

ನಗರದ ಕ್ರೈಸ್ಟ್ ಕಾಲೇಜಿನಲ್ಲಿ ಗುರುವಾರ ಆಯೋಜಿಸಿದ್ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಅಗ್ರಿಟೆಕ್ ಮತ್ತು ಶಿವಂ ಡಿಸ್ಟಿಲೇಷನ್ಸ್ ಸಿಒಇ ಡಾ. ಚೈತ್ರ ನಾರಾಯಣ್ ಉದ್ಘಾಟಿಸಿದರು.

ನಂತರ ಮಾತನಾಡಿದ ಡಾ. ಚೈತ್ರಾ ಅವರು, ವಿದ್ಯಾರ್ಥಿಗಳು ಸ್ವತಂತ್ರರಾಗಿ ಮತ್ತು ಆತ್ಮಸ್ಥೈರ್ಯವನ್ನು ಗಳಿಸಬೇಕು. ಮಹಿಳೆಯರು ಸವಾಲುಗಳನ್ನು ಎದುರಿಸಲು ದೈಹಿಕವಾಗಿ, ಭಾವನಾತ್ಮಕವಾಗಿ ಮತ್ತು ಮಾನಸಿಕವಾಗಿ ಸದೃಢರಾಗಬೇಕು ಎಂದು ಕರೆ ನೀಡಿದರು.

ಕಾಲೇಜಿನ ಪ್ರಾಂಶುಪಾಲ ಫಾ. ಜಿಂಟೋ ಜೋಸ್ ಮಾತನಾಡಿ, ಮಹಿಳೆಯರಿಗೆ ಗೌರವ ನೀಡಬೇಕು. ತಾಯಿಯನ್ನು ಗೌರವಿಸುವ ಪ್ರತಿಯೊಬ್ಬರೂ ಮಹಿಳೆಯನ್ನು ಗೌರವಿಸುತ್ತಾರೆ ಎಂದರು. ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಎಸ್. ಶಿಲ್ಪಾ, ವಿದ್ಯಾರ್ಥಿ ಸಂಯೋಜಕರಾದ ಗೋಮತಿ ಮೊದಲಾದವರು ಇದ್ದರು.