ಮಡಿಕೇರಿ: ಅಂತಾರಾಷ್ಟ್ರೀಯ ಮಹಿಳಾ ದಿನ ಆಚರಣೆ

| Published : Mar 26 2024, 01:01 AM IST

ಸಾರಾಂಶ

ಜನನಿ ಮಹಿಳಾ ಮಂಡಳಿ ವತಿಯಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಆಚರಿಸಲಾಯಿತು.

ಕನ್ನಡಪ್ರಭ ವಾರ್ತೆ ಮಡಿಕೇರಿ

ಸ್ಥಳೀಯ ಜನನಿ ಮಹಿಳಾ ಮಂಡಳಿಯ ವತಿಯಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಇತ್ತೀಚೆಗೆ ಕೊಡಗು ಡಿಸಿಸಿ ಬ್ಯಾಂಕಿನ ನಿವೃತ್ತ ಉಪ ಪ್ರಧಾನ ವ್ಯವಸ್ಥಾಪಕರಾದ ಪಟ್ಟಡ ಪ್ರೇಮ ಕರುಂಬಯ್ಯ ಅವರ ಮನೆಯ ಆವರಣದಲ್ಲಿ ನಡೆಸಲಾಯಿತು.

ರಾಣಿಅರುಣ್ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡ ಅಪ್ಪನೆರವಂಡ ವಿಲೀನ ದೇವಯ್ಯ, ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಬಗ್ಗೆ ಮಾತನಾಡಿ, ಮಹಿಳೆಯರು ಆರ್ಥಿಕವಾಗಿ ಸಬಲೀಕರಣಗೊಂಡು ಸದೃಢ ಭಾರತ ನಿರ್ಮಿಸುವಲ್ಲಿ ತಮ್ಮ ತಮ್ಮ ಜವಾಬ್ಧಾರಿಯನ್ನು ಅರಿತು ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದರು.

ಪಟ್ಟಡ ಪ್ರೇಮ ಕರುಂಬಯ್ಯ ಮಾತನಾಡಿ, ಮಹಿಳೆಯರು ಸರ್ಕಾರದಿಂದ ಸಿಗುವ ಸೌಲಭ್ಯಗಳನ್ನು ಪರಿಣಾಮಕಾರಿಯಾಗಿ ಬಳಸಿಕೊಂಡು ಆರ್ಥಿಕವಾಗಿ ಸ್ವಾವಲಂಬಿಗಳಾಗುವಂತೆ ಅಭಿವೃದ್ಧಿಯತ್ತ ಮುನ್ನಡೆಯಬೇಕು ಎಂದು ತಿಳಿಸಿದರು.

ಕಾರ್ಯಕ್ರಮದ ಪ್ರಯುಕ್ತ ಜನನಿ ಮಹಿಳಾ ಮಂಡಳಿ ಸದಸ್ಯರಿಗೆ ಹಾಗೂ ಮಹಿಳೆಯರಿಗೆ ರಸಪ್ರಶ್ನೆ ಕಾರ್ಯಕ್ರಮ, ವಿವಿಧ ರೀತಿಯ ಆಟಗಳನ್ನು ಏರ್ಪಡಿಸಲಾಗಿ ವಿಜೇತರಿಗೆ ಬಹುಮಾನ ನೀಡಿ ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ಸಿಂಡಿಕೇಟ್‌ ಬ್ಯಾಂಕಿನ ನಿವೃತ್ತ ಅಸಿಸ್ಟೆಂಟ್ ಮ್ಯಾನೇಜರ್ ರಾದ ನಾಳಿಯಮಂಡ ಸುಶೀಲಾ ಗಾಂಧಿ ಅವರು ಉಪಸ್ಥಿತರಿದ್ದರು. ನಿವೃತ್ತ ಉಪನ್ಯಾಸಕರಾದ ಪಟ್ಟಡ ಕರುಂಬಯ್ಯ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಜನನಿ ಮಹಿಳಾ ಮಂಡಳಿಯ ಪ್ರಧಾನ ಕಾರ್ಯದರ್ಶಿ ತಾಯಿರಾ ನಿರೂಪಿಸಿದರು. ಉಪಾಧ್ಯಕ್ಷರಾದ ಹೇಮಾವತಿ ಪ್ರಸನ್ನ ಅವರು ಸ್ವಾಗತಿಸಿ, ನಿರ್ದೇಶಕರಾದ ಪ್ರೇಮ ಪ್ರಾರ್ಥಿಸಿ, ಖಜಾಂಚಿ ಜಯಪಾಲಕ್ಷ ವಂದಿಸಿದರು.