ಅಂತಾರಾಷ್ಟ್ರೀಯ ಯೋಗ ದಿನಾಚರಣೆ: ಸಂಸದ ಬಿವೈಆರ್ ಭಾಗಿ

| Published : Jun 23 2024, 02:08 AM IST

ಅಂತಾರಾಷ್ಟ್ರೀಯ ಯೋಗ ದಿನಾಚರಣೆ: ಸಂಸದ ಬಿವೈಆರ್ ಭಾಗಿ
Share this Article
  • FB
  • TW
  • Linkdin
  • Email

ಸಾರಾಂಶ

ಕೊಲ್ಲೂರು ಮಹಾ ಶಕ್ತಿ ಕೇಂದ್ರ ವ್ಯಾಪ್ತಿಯ ಅಂತರ್ವನ ಸಭಾಂಗಣದಲ್ಲಿ ನಡೆದ 10ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಗೆ ಶಿವಮೊಗ್ಗ ಸಂಸದ ಬಿ.ವೈ. ರಾಘವೇಂದ್ರ ಚಾಲನೆ ನೀಡಿದರು.

ಕನ್ನಡಪ್ರಭ ವಾರ್ತೆ ಬೈಂದೂರು

ಬಿಜೆಪಿ ಬೈಂದೂರು ಮಂಡಲದ ವತಿಯಿಂದ ಕೊಲ್ಲೂರು ಮಹಾ ಶಕ್ತಿ ಕೇಂದ್ರ ವ್ಯಾಪ್ತಿಯ ಅಂತರ್ವನ ಸಭಾಂಗಣದಲ್ಲಿ ನಡೆದ 10ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಗೆ ಶಿವಮೊಗ್ಗ ಸಂಸದ ಬಿ.ವೈ. ರಾಘವೇಂದ್ರ ಅವರು ಜ್ಯೋತಿ ಬೆಳಗಿಸಿ ಚಾಲನೆ ನೀಡಿದರು. ನಂತರ ಯೋಗ ಶಿಕ್ಷಕ ಶ್ರೀಧರ ಆಚಾರ್ಯ ಅವರು ಯೋಗಾಭ್ಯಾಸ ತರಗತಿ ನಡೆಸಿಕೊಟ್ಟರು.

ಈ ಸಂದರ್ಭ ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ, ಬಿಜೆಪಿ ಬೈಂದೂರು ಮಂಡಲಾಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ, ಜಿಲ್ಲಾ ಕಾರ್ಯದರ್ಶಿ ಪ್ರಿಯದರ್ಶಿನಿ ದೇವಾಡಿಗ, ಶಿವಮೊಗ್ಗ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಾಲತೇಶ್, ಬೈಂದೂರು ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಉಮೇಶ್ ಕಲ್ಗದ್ದೆ, ಮಹೇಂದ್ರ ಪೂಜಾರಿ, ಮಂಡಲ ಯೋಗ ದಿನ ಸಂಚಾಲಕ ರಮೇಶ್ ಪೂಜಾರಿ, ಕೊಲ್ಲೂರು ಮಹಾಶಕ್ತಿ ಕೇಂದ್ರದ ಅಧ್ಯಕ್ಷ ವೀರಭದ್ರ ಶೆಟ್ಟಿ ಸಹಿತ ಪಕ್ಷದ ಪ್ರಮುಖರು, ವಿವಿಧ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತರು ಇದ್ದರು.