ಅಂತರ್ಜಾಲ ಜನರ ಜೀವನ ಅವಿಭಾಜ್ಯ ಅಂಗ : ಎಚ್‌.ಎಸ್‌. ಕೀರ್ತನಾ

| Published : Feb 12 2025, 12:30 AM IST

ಅಂತರ್ಜಾಲ ಜನರ ಜೀವನ ಅವಿಭಾಜ್ಯ ಅಂಗ : ಎಚ್‌.ಎಸ್‌. ಕೀರ್ತನಾ
Share this Article
  • FB
  • TW
  • Linkdin
  • Email

ಸಾರಾಂಶ

ಚಿಕ್ಕಮಗಳೂರು, ಇತ್ತೀಚಿನ ದಿನಗಳಲ್ಲಿ ಜನರು ತಮ್ಮ ನಿತ್ಯ ಜೀವನದಲ್ಲಿ ಅಂತರ್ಜಾಲ ಉಪಯೋಗಿಸಿಯೇ ಎಲ್ಲಾ ಕೆಲಸವನ್ನು ಕುಳಿತಲ್ಲೇ ಮಾಡುವಂತಹ ವ್ಯವಸ್ಥೆ ನಿರ್ಮಾಣವಾಗಿದೆ. ಆದರೆ ಈ ಅಂತರ್ಜಾಲ ಜನರನ್ನು ಮೋಸದ ಬಲೆಗೆ ಬೀಳಿಸುವ ಮಾಯಜಾಲವಾಗಿ ಪರಿವರ್ತನೆಯಾಗಿದೆ ಎಂದು ಜಿಪಂ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಎಚ್.ಎಸ್. ಕೀರ್ತನಾ ವಿಷಾಧಿಸಿದರು.

- ಸುರಕ್ಷಿತ ಅಂತರ್ಜಾಲ ದಿನ- ಕಾರ್ಯಗಾರ। ಅಂತರ್ಜಾಲ ಮಾಯಜಾಲವಾಗಿ ಪರಿವರ್ತನೆ,

ಕನ್ನಡಪ್ರಭ ವಾರ್ತೆ ಚಿಕ್ಕಮಗಳೂರು

ಇತ್ತೀಚಿನ ದಿನಗಳಲ್ಲಿ ಜನರು ತಮ್ಮ ನಿತ್ಯ ಜೀವನದಲ್ಲಿ ಅಂತರ್ಜಾಲ ಉಪಯೋಗಿಸಿಯೇ ಎಲ್ಲಾ ಕೆಲಸವನ್ನು ಕುಳಿತಲ್ಲೇ ಮಾಡುವಂತಹ ವ್ಯವಸ್ಥೆ ನಿರ್ಮಾಣವಾಗಿದೆ. ಆದರೆ ಈ ಅಂತರ್ಜಾಲ ಜನರನ್ನು ಮೋಸದ ಬಲೆಗೆ ಬೀಳಿಸುವ ಮಾಯಜಾಲವಾಗಿ ಪರಿವರ್ತನೆಯಾಗಿದೆ ಎಂದು ಜಿಪಂ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಎಚ್.ಎಸ್. ಕೀರ್ತನಾ ವಿಷಾಧಿಸಿದರು.

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ನಡೆದ ಸುರಕ್ಷಿತ ಅಂತರ್ಜಾಲ ದಿನ ಕಾರ್ಯಕ್ರಮ ದಲ್ಲಿ ಮಾತನಾಡಿದರು. ಯುವ ಜನತೆ ಪ್ರತೀಕ್ಷಣ ಅಂತರ್ಜಾಲದಲ್ಲಿ ಜಾಲಾಡುವುದನ್ನು ಕಾಣಬಹುದು. ಇದೊಂದು ರೀತಿ ಮಾಯಾಜಾಲ. ಇಂದು ಪ್ರತಿಯೊಬ್ಬರೂ ಸ್ಮಾರ್ಟ್‌ಫೋನ್ ಹೊಂದಿದ್ದು, ಇಂಟರ್‌ನೆಟ್ ಕೂಡಾ ಬಳಸುತ್ತಿರುತ್ತಾರೆ. ಆದರೆ ಇಂಟರ್‌ನೆಟ್ ಬಳಸುವ ಪ್ರತಿಯೊಬ್ಬರಿಗೂ ಸುರಕ್ಷತೆ, ಅಂತರ್ಜಾಲ ಬಳಕೆ ಕುರಿತು ತಿಳಿದಿಲ್ಲ. ಈ ಪ್ರಭಾವಿ ಅಂತರ್ಜಾಲ ಪ್ರಪಂಚ ಮಕ್ಕಳಿಂದ ಹಿಡಿದು ಹಿರಿಯರವರೆಗೂ ವ್ಯಾಪಿಸಿದೆ. ಸದ್ಯ ಕಚೇರಿ ಕೆಲಸಗಳನ್ನು ಕುಳಿತಲ್ಲಿಂದಲೇ ಮಾಡುವ ಪರಿಣತಿ ಹೊಂದಿದ ಬಳಕೆದಾರರು ಅನೇಕರಿದ್ದಾರೆ. ಅಷ್ಟರ ಮಟ್ಟಿಗೆ ಇಂಟರ್‌ನೆಟ್ ಬಳಕೆ ಮತ್ತು ಅದರ ಉಪಯೋಗವಾಗುತ್ತಿದೆ. ಆದರೆ, ಇಷ್ಟೆಲ್ಲಾ ಪ್ರಯೋಜನ ಒದಗಿಸುವ ಇಂಟರ್‌ನೆಟ್‌ನಿಂದ ತೊಂದರೆಯೂ ಇದೆ ಎಂದು ಹೇಳಿದರು.

ಪೇಜ್‌ಗಳಿಂದ ಯಾವುದೇ ಆಪ್‌ಗಳನ್ನು ಡೌನ್‌ಲೋಡ್ ಮಾಡಿಕೊಳ್ಳದಿರಿ. ನೀವು ಗೂಗಲ್ ಪ್ಲೇ ಸ್ಟೋರ್‌ ನಿಂದ ಆಪ್‌ಗಳನ್ನು ಡೌನ್‌ಲೋಡ್ ಮಾಡಿಕೊಳ್ಳುವುದು ಉತ್ತಮ. ಆಂಡ್ರಾಯ್ಡ್ ಸ್ಮಾರ್ಟ್‌ಫೋನ್‌ಗಳಿಗೆ ಅಸುರಕ್ಷಿತ ಆಪ್‌ಗಳಿಂದ ಅಪಾಯ ಸಾಧ್ಯತೆ ಹೆಚ್ಚು. ಆದ್ದರಿಂದ ಇಂಥ ಅಸುರಕ್ಷಿತ ಆಪ್‌ಗಳನ್ನು ದೂರವಿಡಿ ಎಂದು ಸಲಹೆ ಮಾಡಿದರು.ಸುರಕ್ಷತೆ ಕುರಿತು ಪೋಷಕರು ಮಕ್ಕಳೊಂದಿಗೆ ಮುಕ್ತ ಸಂವಾದ ನಡೆಸಿ, ಸೈಬರ್ ವಂಚಕರು ತಮ್ಮ ವೈಯಕ್ತಿಕ ವಿವರಗಳನ್ನು ಬಹಿರಂಗಪಡಿಸಲು ಮಕ್ಕಳನ್ನು ಪ್ರಚೋದಿಸಬಹುದು. ಹುಟ್ಟಿದ ದಿನಾಂಕ ಅಥವಾ ವಿಳಾಸದಂತಹ ವೈಯಕ್ತಿಕ ಮಾಹಿತಿಯನ್ನು ವಿಶೇಷವಾಗಿ ಅಪರಿಚಿತರಿಗೆ ಬಹಿರಂಗ ಪಡಿಸದಂತೆ ಮಕ್ಕಳಿಗೆ ತಿಳಿಸಿ. ನಿಮ್ಮ ಮಕ್ಕಳಿಗೆ ಅನುಮಾನಾಸ್ಪದ ಚಟುವಟಿಕೆ ಬಗ್ಗೆ ತಿಳಿದರೆ, ತಕ್ಷಣವೇ ನಿಮಗೆ ಹೇಳಲು ತಿಳಿಸಬೇಕು ಎಂದು ತಿಳಿಸಿದರು.ಕಾರ್ಯಾಗಾರದಲ್ಲಿ ಎನ್.ಐ.ಸಿಯ ಸೂಚನಾಧಿಕಾರಿ ಚಂದ್ರುಪ್ರಕಾಶ್ ಮಾತನಾಡಿ, ಆನ್‌ಲೈನ್ ಮತ್ತು ವಿಡಿಯೋ ಕರೆ ಮಾಡಿ ಪೋಷಕರಿಗೆ ಅಥವಾ ಮಕ್ಕಳಿಗೆ ಡಿಜಿಟಲ್ ಬಂಧನವೆಂದು ನಿಮ್ಮನ್ನು ಭಯಪಡಿಸ ಬಹುದು ಅದರಿಂದ ಅಪರಿಚಿತ ಸಂಖ್ಯೆಯಿಂದ ಕರೆಗಳು ಬಂದರೆ ನಿರ್ಲಕ್ಷಿಸಿ ಯಾವುದಾ ದರೂ ಆಪ್ ಅಥವಾ ವೆಬ್‌ಸೈಟ್ ಬಳಸಬೇಕಾದರೇ ಅವರು ನಿಮ್ಮ ಕಡೆಯಿಂದ ನಿಮ್ಮ ಕಾಂಟ್ಯಾಕ್ಟ್ಸ್, ಲೊಕೇಷನ್, ಕ್ಯಾಲೆಂಡರ್, ಕ್ಯಾಮೆರಾ ಹೀಗೆ ಕೆಲವು ಮಾಹಿತಿನ್ನು ಹಂಚಿಕೊಳ್ಳಲು ಅನುಮತಿ ಕೋರುತ್ತಾರೆ. ಆಗ ಅನಗತ್ಯವಾಗಿ ಎಲ್ಲ ಡಾಟಾ ಮಾಹಿತಿ ಹಂಚಿಕೆಗೆ ಅನುಮತಿ ನೀಡಬೇಡಿ. ಇದರಿಂದ ನಿಮ್ಮ ವೈಯಕ್ತಿಕ ದಾಖಲೆ ಸೋರಿಕೆಯಾಗುತ್ತದೆ ಹಾಗೂ ವ್ಯಕ್ತಿ ಖಾಸಗಿ ಮಾಹಿತಿ, ಬ್ಯಾಂಕ್ ಹಣ ಕಳೆದು ಕೊಳ್ಳುವ ಸಾಧ್ಯತೆ ಇರುತ್ತದೆ ಎಂದು ಹೇಳಿದರು.ಕಾರ್ಯಾಗಾರದಲ್ಲಿ ಜಿಪಂ ಮುಖ್ಯ ಲೆಕ್ಕಾಧಿಕಾರಿ ಶಿವಕುಮಾರ್, ಮುಖ್ಯ ಯೋಜನಾಧಿಕಾರಿ ರಾಜ್ ಗೋಪಾಲ್, ಜಿಲ್ಲಾ ಸಹಾಯಕ ಕಾರ್ಯದರ್ಶಿ ನಯನ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿಗಳು ಹಾಜರಿದ್ದರು.

-- ಬಾಕ್ಸ್--

ಕಠಿಣ ಪಾರ್ಸ್‌ವರ್ಡ್ ಬಳಸಿ

ನಿಮ್ಮ ಸ್ಮಾರ್ಟ್‌ಫೋನ್‌ಗೆ ಪಾಸ್‌ವರ್ಡ್ ಸ್ಟ್ರಾಂಗ್ ಇರಲಿ, ಫೇಸ್‌ ಬುಕ್, ಯೂಟ್ಯೂಬ್, ಜೀ-ಮೇಲ್, ಗೂಗಲ್ ಮ್ಯಾಪ್ ಮತ್ತು ಗೂಗಲ್ ಅಕೌಂಟ್ ಸೇರಿದಂತೆ ನೀವು ಬಳಸುವ ಎಲ್ಲ ಸಾಮಾಜಿಕ ತಾಣಗಳಲ್ಲಿ ನಿಮ್ಮ ಮಾಹಿತಿ ಇರುತ್ತದೆ. ಹೀಗಾಗಿ ಈ ಸಾಮಾಜಿಕ ಜಾಲತಾಣಗಳ ಖಾತೆಗಳಿಗೆ ಕಠಿಣ ಪಾರ್ಸ್‌ವರ್ಡ್ ಇಡಬೇಕು. ಇದರಿಂದ ನಿಮ್ಮ ಅಂತರ್ಜಾಲ ಮಾಹಿತಿ ಸೋರಿಕೆ ತಡೆಯ ಬಹುದು

- ಎಚ್.ಎಸ್. ಕೀರ್ತನಾ, ಸಿಇಒ, ಜಿಪಂ

11 ಕೆಸಿಕೆಎಂ 1ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ನಡೆದ ಸುರಕ್ಷಿತ ಅಂತರ್ಜಾಲ ದಿನ ಕಾರ್ಯಕ್ರಮದಲ್ಲಿ ಜಿಪಂ ಸಿಇಓ ಕೀರ್ತನಾ ಅವರು ಮಾತನಾಡಿದರು.