ಸಾರಾಂಶ
ಪುಟ್ಟಣ್ಣಯ್ಯ ಫೌಂಡೇಷನ್ ಹಲವು ಕಂಪನಿಗಳನ್ನು ಕ್ಷೇತ್ರಕ್ಕೆ ಕರೆತಂದು ಸಂದರ್ಶನ ನಡೆಸುತ್ತಿದೆ. ಕಳೆದ ನ.1ರಂದು ಉದ್ಯೋಗಾಕಾಂಕ್ಷಿಗಳು ನೋಂದಾಯಿಸಿಕೊಳ್ಳಲು ವೆಬ್ ಆರಂಭಿಸಲಾಗಿತ್ತು. ಅದರಲ್ಲೂ 350ಕ್ಕೂ ಅಧಿಕ ನಿರುದ್ಯೋಗಿ ಯುವಕ-ಯುವತಿಯರು ತಮ್ಮ ಹೆಸರು ನೋಂದಾಯಿಸಿಕೊಂಡಿದ್ದರು.
ಕನ್ನಡಪ್ರಭ ವಾರ್ತೆ ಪಾಂಡವಪುರ
ಗ್ರಾಮೀಣ ಪ್ರದೇಶದ ಯುವಕ-ಯುವತಿಯರಿಗೆ ಉದ್ಯೋಗಾವಕಾಶ ಕಲ್ಪಿಸಿಕೊಡುವ ನಿಟ್ಟಿನಲ್ಲಿ ಪುಟ್ಟಣ್ಣಯ್ಯ ಫೌಂಡೇಷನ್ ವತಿಯಿಂದ ನಡೆದ ಉದ್ಯೋಗ ಅಭಿಯಾನ ಕಾರ್ಯಕ್ರಮದಡಿ ಮಂಗಳವಾರ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನೋಂದಾಯಿತಗೊಂಡ ಉದ್ಯೋಗಾಕಾಂಕ್ಷಿ ಯುವಕ-ಯುವತಿಯರ ಸಂದರ್ಶನ ನಡೆಸಲಾಯಿತು.ಟೆಕ್ನೋಟಾಸ್ಕ್ ಗ್ಲೋಬಲ್ ಕಂಪನಿಯಿಂದ ನಡೆದ ಸಂದರ್ಶನಕ್ಕೆ ಶಾಸಕ ದರ್ಶನ್‌ಪುಟ್ಟಣ್ಣಯ್ಯ ಚಾಲನೆ ನೀಡಿ ಮಾತನಾಡಿ, ಗ್ರಾಮೀಣ ಪ್ರದೇಶದ ನಿರುದ್ಯೋಗಿ ಉದ್ಯೋಗಾಕಾಂಕ್ಷಿ ಯುವಕ-ಯುವತಿಯರಿಗೆ ಉದ್ಯೋಗ ದೊರಕಿಸಿಕೊಡಲು ಪುಟ್ಟಣ್ಣಯ್ಯ ಫೌಂಡೇಷನ್ ಹಲವು ಕಂಪನಿಗಳನ್ನು ಕ್ಷೇತ್ರಕ್ಕೆ ಕರೆತಂದು ಸಂದರ್ಶನ ನಡೆಸುತ್ತಿದೆ ಎಂದರು.
ಕಳೆದ ನ.1ರಂದು ಉದ್ಯೋಗಾಕಾಂಕ್ಷಿಗಳು ನೋಂದಾಯಿಸಿಕೊಳ್ಳಲು ವೆಬ್ ಆರಂಭಿಸಲಾಗಿತ್ತು. ಅದರಲ್ಲೂ 350ಕ್ಕೂ ಅಧಿಕ ನಿರುದ್ಯೋಗಿ ಯುವಕ-ಯುವತಿಯರು ತಮ್ಮ ಹೆಸರು ನೋಂದಾಯಿಸಿಕೊಂಡಿದ್ದರು. ಅದರ ಭಾಗವಾಗಿ ಮಂಗಳವಾರ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮೈಸೂರಿನ ಟೆಕ್ನೋಟಾಸ್ಕ್ ಗ್ಲೋಬಲ್ ಕಂಪನಿಯವರು ಆಗಮಿಸಿ ನೋಂದಾಯಿಸಿಕೊಂಡಿರುವ ಯುವಕ-ಯುವತಿಯರ ಸಂದರ್ಶನ ನಡೆಸಿ ಆಯ್ಕೆಯಾದ ಯುವಕ-ಯುವತಿಯರಿಗೆ ವಾರದೊಳಗೆ ಉದ್ಯೋಗ ಕಲ್ಪಿಸಿಕೊಡುವ ಕೆಲಸ ಮಾಡಲಿದೆ. ಮುಂದಿನ ದಿನಗಳಲ್ಲಿ ಕಂಪನಿಯೂ ಪಟ್ಟಣದಲ್ಲಿ ಕಂಪನಿ ತೆರೆದು ಹಲವಾರು ನಿರುದ್ಯೋಗಿಗಳಿಗೆ ಉದ್ಯೋಗಾವಕಾಶ ಕಲ್ಪಿಸಿಕೊಡಲಿದೆ ಎಂದರು.ಸ್ಮಿತಾ ಪುಟ್ಟಣ್ಣಯ್ಯ ಮಾತನಾಡಿ, ಪುಟ್ಟಣ್ಣಯ್ಯ ಫೌಂಡೇಷನ್ ಗ್ರಾಮೀಣ ಪ್ರದೇಶವನ್ನು ಅಭಿವೃದ್ಧಿಪಡಿಸಬೇಕು ಎಂಬ ಉದ್ದೇಶದಿಂದ ಕೆಲಸ ಮಾಡುತ್ತಿದ್ದು, ಗ್ರಾಮೀಣ ಪ್ರದೇಶದ ಶಿಕ್ಷಣ, ನಿರುದ್ಯೋಗ ನಿವಾರಣೆ, ರೈತರ ಅಭಿವೃದ್ಧಿ, ಮಾರುಕಟ್ಟೆ, ಸ್ವಯಂ ಉದ್ಯೋಗ, ಬಡತನ ನಿವಾರಣೆ ಸೇರಿದಂತೆ ಗ್ರಾಮೀಣ ಪ್ರದೇಶದ ಅಭಿವೃದ್ಧಿಗೆ ಪೂರಕವಾಗಿ ಹಲವಾರು ಕಂಪನಿಗಳ ಸಹಯೋಗ ಪಡೆದುಕೊಂಡು ಕೆಲಸ ಮಾಡುತ್ತಿದೆ ಎಂದರು.
ಈ ಸಂದರ್ಭದಲ್ಲಿ ಟೆಕ್ನೋಟಾಸ್ಕ್ ಗ್ಲೋಬಲ್ ಕಂಪನಿ ದಕ್ಷಿಣ ಭಾರತ ಮಾನವ ಸಂಪನ್ಮೂಲ ವಿಭಾಗದ ಮುಖ್ಯಸ್ಥ ಅಫಖ್, ರವಿಕುಮಾರ್, ಶಶಿಕಾಂತ್, ದೀಕ್ಷಿತ್, ಪುಟ್ಟಣ್ಣಯ್ಯ ಫೌಂಡೇಷನ್ ನಿರ್ದೇಶಕ ಹಿರೇಮರಳಿ ರಣಜಿತ್, ಮಾಧ್ಯಮ ಸಂಯೋಜಕ ಕುಮಾರ್ ಸೇರಿದಂತೆ ಹಲವರು ಇದ್ದರು.;Resize=(128,128))
;Resize=(128,128))
;Resize=(128,128))