ಸಂವಿಧಾನದ ರಕ್ಷಣೆಗೆ ಭಾರತ ದೇಶದ ಎಲ್ಲರೂ ಒಟ್ಟಾಗಿ ಕೆಲಸ ಮಾಡಬೇಕು ಎಂದು ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು, ಬಯಲುಸೀಮೆ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಚ್.ಬಿ.ಮಂಜಪ್ಪ ಹೇಳಿದ್ದಾರೆ.

- ಕಾಂಗ್ರೆಸ್‌ನಿಂದ ಸಂವಿಧಾನ ದಿನಾಚರಣೆಯಲ್ಲಿ ಜಿಲ್ಲಾಧ್ಯಕ್ಷ ಎಚ್.ಬಿ.ಮಂಜಪ್ಪ

- - -

ಕನ್ನಡಪ್ರಭ ವಾರ್ತೆ ದಾವಣಗೆರೆ ಸಂವಿಧಾನದ ರಕ್ಷಣೆಗೆ ಭಾರತ ದೇಶದ ಎಲ್ಲರೂ ಒಟ್ಟಾಗಿ ಕೆಲಸ ಮಾಡಬೇಕು ಎಂದು ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು, ಬಯಲುಸೀಮೆ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಚ್.ಬಿ.ಮಂಜಪ್ಪ ಹೇಳಿದರು.

ನಗರದ ಜಿಲ್ಲಾ ಕಾಂಗ್ರೆಸ್ ವತಿಯಿಂದ ಪಕ್ಷದ ಕಚೇರಿಯಲ್ಲಿ ಬುಧವಾರ ಹಮ್ಮಿಕೊಂಡಿದ್ದ ಸಂವಿಧಾನ ದಿನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ನಮ್ಮ ಸಂವಿಧಾನದ ಆತ್ಮವು ಭಾರತ ಒಂದೇ ಮತ್ತು ಶಾಶ್ವತವಾಗಿ ಹಾಗೆಯೇ ಇರುತ್ತದೆ ಎಂದು ಸಾಬೀತುಪಡಿಸಿದೆ. ಈ ದಿನದಂದು ನಮ್ಮ ಭವ್ಯವಾದ ಸಂವಿಧಾನಕ್ಕೆ ಸಲ್ಲಿಸಬಹುದಾದ ಅತ್ಯಂತ ದೊಡ್ಡ ಗೌರವವೆಂದರೆ ಅದರ ಮೌಲ್ಯಗಳಿಗೆ ತಕ್ಕಂತೆ ಬದುಕಲು ಪ್ರತಿಜ್ಞೆ ಮಾಡುವುದು ಎಂದರು.

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಡಿ.ಬಸವರಾಜ ಮಾತನಾಡಿ, ಸಮಸಮಾಜ ನಿರ್ಮಾಣ, ಅಸಮಾನತೆ ನಿವಾರಣೆ ನಮ್ಮ ಸಂವಿಧಾನ ಮತ್ತು ಅಂಬೇಡ್ಕರ್ ಅವರ ಆಶಯವಾಗಿತ್ತು. ಈ ದೇಶದ ಜನತೆಗೆ ಎಂಥಾ ಸಂವಿಧಾನ ಬೇಕು ಎನ್ನುವ ಬಗ್ಗೆ ಒಂದು ವರ್ಷ ಕಾಲ ಸಂವಿಧಾನ ಸಭೆಯಲ್ಲಿ ಸಮಗ್ರ ಚರ್ಚೆ ಬಳಿಕ ಅಂಗೀಕರಿಸಲಾಗಿದೆ ಎಂದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಯೂಬ್ ಪೈಲ್ವಾನ್ ಮಾತನಾಡಿ, ನಮ್ಮ ಸಂವಿಧಾನ ರಚನಾಕಾರರಾದ ಡಾ. ಬಿ.ಆರ್. ಅಂಬೇಡ್ಕರ್ ಅವರಂತೆಯೇ, ಈ ಅಮೃತ ಕಾಲದಲ್ಲಿ ನಾವು ಈಗ ವಿಕಸಿತ ಭಾರತದ ಗುರಿಯತ್ತ ಕೆಲಸ ಮಾಡಬೇಕು ಎಂದರು.

ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಸ್.ಮಲ್ಲಿಕಾರ್ಜುನ್, ಎ.ನಾಗರಾಜ್, ಜಿ.ಎಸ್.ಮಂಜುನಾಥ್, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಅನಿತಾ ಬಾಯಿ ಮಾಲತೇಶ್, ಕೆ.ಜಿ.ಶಿವಕುಮಾರ್, ಆರ್.ಎಚ್. ನಾಗಭೂಷಣ್, ಡಿ.ಎನ್. ಜಗದೀಶ್, ಡಿ.ಶಿವಕುಮಾರ್, ಜಾಕಿರ್ ಅಲಿ, ಸಾಗರ್ ಎಲ್.ಎಂ., ಮೈನುದ್ದೀನ್, ಚೈತನ್ಯಕುಮಾರ್, ಮುಜಾಹಿದ್, ಅಕ್ಬರ್ ಬಾಷಾ, ಕೇರಂ ಗಣೇಶ್, ಮಂಗಳಮ್ಮ, ರಾಜೇಶ್ವರಿ, ಸಲ್ಮಾ, ಇನ್ನಿತರರಿದ್ದರು.

- - -

-26ಕೆಡಿವಿಜಿ44:

ದಾವಣಗೆರೆಯಲ್ಲಿ ಬುಧವಾರ ಜಿಲ್ಲಾ ಕಾಂಗ್ರೆಸ್‌ನಿಂದ ಸಂವಿಧಾನ ದಿನ ಆಚರಿಸಲಾಯಿತು.