ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕುಂಬ್ರ ವಲಯ ೬ ಸ್ವ ಸಹಾಯ ಸಂಘಗಳ ಓಕ್ಕೂಟ ದ ಪದಗ್ರಹಣ ಸಮಾರಂಭವು ಇತ್ತೀಚೆಗೆ ಕುಂಬ್ರ ವ್ಯವಸಾಯ ಸೇವಾ ಸಹಕಾರಿ ಸಂಘದ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಸಂಪ್ಯ, ಸಂಟ್ಯಾರ್, ಕುರಿಯ, ಕೆದಂಬಾಡಿ, ಕುಂಬ್ರ, ತ್ಯಾಗರಾಜ ಒಕ್ಕೂಟದ ಪಾಲುದಾರ ಬಂಧುಗಳು ಉಪಸ್ಥಿತರಿದ್ದರು.
ಪುತ್ತೂರು ; ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕುಂಬ್ರ ವಲಯ ೬ ಸ್ವ ಸಹಾಯ ಸಂಘಗಳ ಓಕ್ಕೂಟ ದ ಪದಗ್ರಹಣ ಸಮಾರಂಭವು ಇತ್ತೀಚೆಗೆ ಕುಂಬ್ರ ವ್ಯವಸಾಯ ಸೇವಾ ಸಹಕಾರಿ ಸಂಘದ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಸಂಪ್ಯ, ಸಂಟ್ಯಾರ್, ಕುರಿಯ, ಕೆದಂಬಾಡಿ, ಕುಂಬ್ರ, ತ್ಯಾಗರಾಜ ಒಕ್ಕೂಟದ ಪಾಲುದಾರ ಬಂಧುಗಳು ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ಪುತ್ತೂರಿನ ವೈದ್ಯ ಡಾ. ಸುರೇಶ್ ಪುತ್ತೂರಾಯ ಉದ್ಘಾಟಿಸಿದರು. ಬಳಿಕ ಮಾತನಾಡಿ ಯೋಜನೆಯ ಕಾರ್ಯಕ್ರಮಗಳ ಬಗ್ಗೆ, ಪೂಜ್ಯರ ಕಾರ್ಯಕ್ರಮದ ಆಶಯಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಗ್ರಾಮೀಣ ಭಾಗದ ಮಹಿಳೆಯರು ಆರ್ಥಿಕ ಸಬಲೀಕರಣದ ಬಗ್ಗೆ ತಿಳಿಸಿದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಪ್ರಸಾದ ಆಳ್ವ ಅವರು ಸ್ವಸಹಾಯ ಸಂಘಗಳ ಮೂಲಕ ಮಹಿಳೆಯರು ಆರ್ಥಿಕವಾಗಿ ಸಾಮಾಜಿಕವಾಗಿ ಬೆಳವಣಿಗೆ ಹೊಂದುವಂತರಾಗಬೇಕು ಎಂದು ಹೇಳಿದರು.ಯೋಜನಾಧಿಕಾರಿ ಶಶಿಧರ್ ಎಂ ಅವರು ಯೋಜನೆಯ ಸಮುದಾಯ ಅಭಿವೃದ್ಧಿ ಕಾರ್ಯಕ್ರಮಗಳ ಬಗ್ಗೆ, ಯೋಜನೆ ಬೆಳೆದು ಬಂದ ಹಾದಿಯ ಬಗ್ಗೆ ವಿಸ್ತಾರ ಮಾಹಿತಿಯನ್ನು ನೀಡಿದರು ಮುಖ್ಯ ಅತಿಥಿಯಾದ ಅರುಣ್ ಕುಮಾರ್ ಪುತ್ತಿಲ ಅವರು ಯೋಜನೆಯ ಕಾರ್ಯಕ್ರಮಗಳೊಂದಿಗೆ ತಮ್ಮನ್ನು ತಾವು ತೊಡಗಿಸಿಕೊಳ್ಳುವ ಬಗ್ಗೆ ವಿಶೇಷವಾಗಿ ಕರೆ ನೀಡಿದರು ಮತ್ತು ತಮ್ಮ ವೈಯಕ್ತಿಕ ಅಭಿವೃದ್ಧಿಯನ್ನು ಹೊಂದುವ ಬಗ್ಗೆ ತಿಳಿಸಿದರು. ನಿಕಟ ಪೂರ್ವ ಪದಾಧಿಕಾರಿಗಳು ವೀಳ್ಯ ಹಸ್ತಾಂತರ ಮಾಡುವುದರ ಮುಖಾಂತರ ನೂತನ ಪದಾಧಿಕಾರಿಗಳಿಗೆ ಒಕ್ಕೂಟದ ಅಧಿಕಾರ ಹಸ್ತಾಂತರ ಮಾಡಿದರು. ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ದೂರವಾಣಿ ಮೂಲಕ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಒಕ್ಕೂಟದಲ್ಲಿರುವ ಪ್ರಗತಿ ಬಂದು ಶ್ರಮ ವಿನಿಮಯ ಗುಂಪುಗಳನ್ನು ಗುರುತಿಸಲಾಯಿತು .ಜನಜಾಗೃತಿ ವೇದಿಕೆ ನಿಕಟಪೂರ್ವ ಅಧ್ಯಕ್ಷರಾದ ಪ್ರಕಾಶ್ ಚಂದ್ರ ರೈ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಆರ್ಯಾಪು ಕೃಷಿಪತ್ತಿ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಎಚ್ ಮಹಮ್ಮದಾಲಿ, ಕೆದಂಬಾಡಿ ಸಹಕಾರಿ ಸಂಘದ ಅಧ್ಯಕ್ಷ ಕೃಷ್ಣ ಕುಮಾರ್ ರೈ ,ಯುವಜನ ಒಕ್ಕೂಟದ ಅಧ್ಯಕ್ಷ ರಾಜೇಶ್ ಮಯೂರು ಉಪಸ್ಥಿತರಿದ್ದರು.ಯೋಜನೆಯ ವಲಯ ಮೇಲ್ವಿಚಾರಕರು ಶಿವರಾಜ್ ಸ್ವಾಗತಿಸಿದರು. ಉಮೇಶ್ ಸಂಪ್ಯ ವಂದಿಸಿದರು. ಕೃಷಿ ಮೇಲ್ವಿಚಾರಕರು ಹರೀಶ್ ಹಾಗೂ ಸೇವಾಪ್ರತಿನಿಧಿ ರಜನಿ ನಿರೂಪಿಸಿದರು.