ಸಾರಾಂಶ
ವಸ್ತ್ರವಿತರಣಾ ಸಮಾರಂಭವು ನವೆಂಬರ್ ೨ರಂದು ಪುತ್ತೂರಿನ ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನಡೆಯಲಿದೆ. ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಈಗಾಗಲೇ ಆಹ್ವಾನ ನೀಡಲಾಗಿದ್ದು, ಕಾರ್ಯಕ್ರಮವನ್ನು ಮುಖ್ಯಮಂತ್ರಿಗಳು ಉದ್ಘಾಟಿಸಲಿದ್ದಾರೆ. ಉಪ ಮುಖ್ಯಮಂತ್ರಿಗಳನ್ನೂ ಆಹ್ವಾನಿಸಲಾಗಿದೆ ಎಂದರು.
ಕನ್ನಡಪ್ರಭ ವಾರ್ತೆ ಪುತ್ತೂರು
ಪುತ್ತೂರಿನ ರೈ ಎಸ್ಟೇಟ್ ಮತ್ತು ಚಾರಿಟೇಬಲ್ ಟ್ರಸ್ಟ್ ವತಿಯಿಂದ ಪ್ರತಿವರ್ಷ ದೀಪಾವಳಿ ಸಂದರ್ಭದಲ್ಲಿ ಸಾವಿರಾರು ಮಂದಿ ಬಡ ಕುಟುಂಬಕ್ಕೆ ವಸ್ತ್ರವಿತರಣೆ ಮಾಡಲಾಗುತ್ತಿದೆ. ಈ ಬಾರಿಯ ವಸ್ತ್ರವಿತರಣಾ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಆಹ್ವಾನಿಸಲಾಗಿದೆ. ‘ಅಶೋಕ ಜನಮನ-೨೦೨೪’ ಹೆಸರಿನಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದು ಟ್ರಸ್ಟ್‌ನ ಪ್ರವರ್ತಕ, ಪುತ್ತೂರು ಶಾಸಕ ಆಶೋಕ್ ಕುಮಾರ್ ರೈ ತಿಳಿಸಿದ್ದಾರೆ.ನಗರದ ದರ್ಬೆಯಲ್ಲಿರುವ ಟ್ರಸ್ಟ್ ಕಚೇರಿಯಲ್ಲಿ ಶುಕ್ರವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು. ಈ ಬಾರಿಯ ವಸ್ತ್ರವಿತರಣಾ ಸಮಾರಂಭವು ನವೆಂಬರ್ ೨ರಂದು ಪುತ್ತೂರಿನ ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನಡೆಯಲಿದೆ. ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಈಗಾಗಲೇ ಆಹ್ವಾನ ನೀಡಲಾಗಿದ್ದು, ಕಾರ್ಯಕ್ರಮವನ್ನು ಮುಖ್ಯಮಂತ್ರಿಗಳು ಉದ್ಘಾಟಿಸಲಿದ್ದಾರೆ. ಉಪ ಮುಖ್ಯಮಂತ್ರಿಗಳನ್ನೂ ಆಹ್ವಾನಿಸಲಾಗಿದೆ ಎಂದರು.
ಕಳೆದ ಬಾರಿಯಂತೆ ಈ ಬಾರಿಯೂ ಗೂಡುದೀಪ ಸ್ಪರ್ಧೆಗಳನ್ನು ಏರ್ಪಡಿಸಿ ಪ್ರಥಮ ೧೦ ಸಾವಿರ, ದ್ವಿತೀಯ ೭ ಹಾಗೂ ತೃತೀಯ ೫ ಸಾವಿರ ರುಪಾಯಿ ಬಹುಮಾನ ನೀಡಲಾಗುವುದು. ವಿವಿಧ ಕ್ಷೇತ್ರಗಳ ಸಾಧಕರನ್ನು ಗುರುತಿಸಿ ಸನ್ಮಾನಿಸಲಾಗುವುದು ಎಂದು ತಿಳಿಸಿದರು.ಸಭೆಯಲ್ಲಿ ಕಾವು ಹೇಮನಾಥ ಶೆಟ್ಟಿ. ಟ್ರಸ್ಟಿನ ಕಾರ್ಯಾಧ್ಯಕ್ಷ ಸುದೇಶ್ ಶೆಟ್ಟಿ, ನಿಹಾಲ್ ರೈ, ಅಮಳ ರಾಮಚಂದ್ರ. ಮುರಳೀಧರ ರೈ ಮಠಂದಬೆಟ್ಟು, ನಿರಂಜನ ರೈ ಮಠಂದಬೆಟ್ಟು, ಜಯಪ್ರಕಾಶ ಬದಿನಾರು, ಕೃಷ್ಣ ಪ್ರಸಾದ್ ಬೊಳ್ಳಾವು ಮತ್ತಿತ್ತರರು ಇದ್ದರು.