ಕನ್ನಡಪ್ರಭ ವಾರ್ತೆ ಉಡುಪಿ
ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಆಗಸ್ಟ್- ಸೆಪ್ಚಂಬರ್‌ನಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ನಡೆಯುವ ಮಂಡಲೋತ್ಸವದ ಉದ್ಘಾಟನಾ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಆಹ್ವಾನಿಸಲಾಗಿದೆ.ಆಗಸ್ಟ್ 1ರಿಂದ ಸೆಪ್ಟೆಂಬರ್ 15ರ ವರೆಗೆ 48 ದಿನ ಈ ಮಂಡಲೋತ್ಸವ, ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮ ವೈಭವದಿಂದ ನಡೆಯಲಿದೆ. ಆ.1ರಂದು ಉದ್ಘಾಟನೆಗೊಳ್ಳಲಿದ್ದು, ಈ ಕಾರ್ಯಕ್ರಮಕ್ಕೆ ಬರುವಂತೆ ಪರ್ಯಾಯ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರ ಆಶಯದಂತೆ ಶ್ರೀ ಮಠದ ಪರವಾಗಿ ಬೆಂಗಳೂರು ಶಾಖಾ ಮಠದ ಮುಖ್ಯಸ್ಥ ಎ.ಬಿ. ಕುಂಜಾರ್ ಮತ್ತು ಶ್ರೀಪಾದರ ಕಾರ್ಯದರ್ಶಿ ರತೀಶ್ ತಂತ್ರಿ ಮುಖ್ಯಮಂತ್ರಿಗಳನ್ನು ಭೇಟಿಯಾಗಿ ಶ್ರೀ ಕೃಷ್ಣ ಮುಖ್ಯಪ್ರಾಣ ದೇವರ ಪ್ರಸಾದವನ್ನು ನೀಡಿ ಆಹ್ವಾನಿಸಿದರು.ಸಿದ್ದರಾಮಯ್ಯ ಅವರು ಉಡುಪಿಗೆ ಅನೇಕ ಸಲ ಬಂದರೂ ಕೃಷ್ಣಮಠಕ್ಕೆ ಇದುವರೆಗೆ ಭೇಟಿ ನೀಡದೇ ಅಂತರವನ್ನು ಕಾಯ್ದುಕೊಂಡಿದ್ದಾರೆ. ಈ ಬಾರಿ ಮಂಡಲೋತ್ಸವಕ್ಕೆ ಆಗಮಿಸುನ ನಿರೀಕ್ಷೆ ಇದೆ.ಕೃಷ್ಣಮಠದ ಮಂಡಲೋತ್ಸವಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಆಹ್ವಾನ
ಆಗಸ್ಟ್ 1ರಿಂದ ಸೆಪ್ಟೆಂಬರ್ 15ರ ವರೆಗೆ 48 ದಿನ ಈ ಮಂಡಲೋತ್ಸವ, ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮ ವೈಭವದಿಂದ ನಡೆಯಲಿದೆ. ಆ.1ರಂದು ಉದ್ಘಾಟನೆಗೊಳ್ಳಲಿದ್ದು, ಈ ಕಾರ್ಯಕ್ರಮಕ್ಕೆ ಬರುವಂತೆ ಪರ್ಯಾಯ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರ ಆಶಯದಂತೆ ಶ್ರೀ ಮಠದ ಪರವಾಗಿ ಬೆಂಗಳೂರು ಶಾಖಾ ಮಠದ ಮುಖ್ಯಸ್ಥ ಎ.ಬಿ. ಕುಂಜಾರ್ ಮತ್ತು ಶ್ರೀಪಾದರ ಕಾರ್ಯದರ್ಶಿ ರತೀಶ್ ತಂತ್ರಿ ಮುಖ್ಯಮಂತ್ರಿಗಳನ್ನು ಭೇಟಿಯಾಗಿ ಶ್ರೀ ಕೃಷ್ಣ ಮುಖ್ಯಪ್ರಾಣ ದೇವರ ಪ್ರಸಾದವನ್ನು ನೀಡಿ ಆಹ್ವಾನಿಸಿದರು.
Latest Videos
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.