ಸಾರಾಂಶ
ಕನ್ನಡಪ್ರಭ ವಾರ್ತೆ ಮಂಡ್ಯ
ಕರ್ನಾಟಕ ಸುಗಮ ಸಂಗೀತ ಪರಿಷತ್‌ನಿಂದ ಮುಂದಿನ ತಿಂಗಳು ಮೈಸೂರಿನ ಕಲಾ ಮಂದಿರದಲ್ಲಿ ಆಯೋಜಿಸಿರುವ ಗೀತೋತ್ಸವ, 19ನೇ ರಾಜ್ಯ ಮಟ್ಟದ ಸುಗಮ ಸಂಗೀತ ಸಮ್ಮೇಳನಕ್ಕೆ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಸುಗಮ ಸಂಗೀತ ಗಾಯಕ, ಸಂಗೀತ ನಿರ್ದೇಶಕ ಶ್ರೀನಿವಾಸ ಉಡುಪ ಅವರನ್ನು ಆಹ್ವಾನಿಸಲಾಯಿತು.ಬೆಂಗಳೂರಿನ ಸುಗಮ ಸಂಗೀತ ಪರಿಷತ್ ಕಚೇರಿಯಲ್ಲಿ ಭೇಟಿಯಾಗಿ ಪರಿಷತ್‌ನ ಮಂಡ್ಯ ಘಟಕದ ಅಧ್ಯಕ್ಷ ಪ್ರತಿಭಾಂಜಲಿ ಡೇವಿಡ್ ಶ್ರೀನಿವಾಸ್ ಉಡುಪ ಅವರನ್ನು ಸನ್ಮಾನಿಸಿ ಸಮ್ಮೇಳನಕ್ಕೆ ವಿಧ್ಯುಕ್ತವಾಗಿ ಆಹ್ವಾನಿಸಿದರು.ಸಮ್ಮೇಳನದಲ್ಲಿ ಸುಗಮ ಸಂಗೀತದ ಸಂಗಮ ಸಾಹಿತಿಗಳು, ನಾಡಿನ ಪ್ರಸಿದ್ಧ ಗಾಯಕರು, ವಿಮರ್ಶಕರು ಪಾಲ್ಗೊಳ್ಳಲಿದ್ದಾರೆ. ಬೆಳಗ್ಗೆ 10 ರಿಂದ ರಾತ್ರಿ 10ರವರೆಗೆ ವಿವಿಧ ಗೋಷ್ಠಿಗಳು, ಸಂಗೀತ ಕಾರ್ಯಕ್ರಮಗಳು ಅದ್ಧೂರಿಯಾಗಿ ನಡೆಯಲಿದೆ. ಸಮ್ಮೇಳನದಲ್ಲಿ ಮಂಡ್ಯದ ಗಾಯಕರು ಕೂಡ ಪಾಲ್ಗೊಳ್ಳಲಿದ್ದಾರೆ.
ಈ ವೇಳೆ ಪರಿಷತ್ ರಾಜ್ಯಾಧ್ಯಕ್ಷರಾದ ವೈ.ಕೆ.ಮುದ್ದುಕೃಷ್ಣ, ಕಾರ್ಯದರ್ಶಿ ಪ್ರವೀಣ್, ಖಜಾಂಚಿ ಪ್ರಶಾಂತ್ ಉಡುಪ, ಮೈಸೂರು ಘಟಕದ ಅಧ್ಯಕ್ಷರಾದ ನಾಗರಾಜ್ ವಿ.ಭೈರಿ, ಹಾಸನ ಘಟಕದ ಜಾವಗಲ್ ಪ್ರಸನ್ನ, ನಿವೃತ್ತ ಡಿ ಎಫ್‌ಒ ಅಧಿಕಾರಿಗಳಾದ ಒಬೇದುಲ್ಲಾ ಖಾನ್ ಮತ್ತಿತರರು ಇದ್ದರು.ರಾಜ್ಯ ಸರ್ಕಾರದಿಂದ ಮಂಡ್ಯ ಜಿಪಂಗೆ ಪ್ರಶಂಸಾ ಪತ್ರ
ಕನ್ನಡಪ್ರಭ ವಾರ್ತೆ ಮಂಡ್ಯಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ವಲಯ, ಕೇಂದ್ರ ಪುರಸ್ಕೃತ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿಲ್ಲೆಯ ಮಣ್ಣಿನ ಫಲವತ್ತತೆಯ ರಾಷ್ಟ್ರೀಯ ಯೋಜನೆ, ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ, ಪ್ರಧಾನಮಂತ್ರಿ ಮಾತೃ ವಂದನಾ ಯೋಜನೆ, ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ, ಮನರೇಗಾ ಯೋಜನೆಗಳ ಅನುಷ್ಠಾನದಲ್ಲಿ ಗಣನೀಯ ಪ್ರಗತಿ ಸಾಧಿಸಿರುವುದನ್ನು ಗಮನಿಸಿ ಪ್ರಶಂಸನಾ ಪತ್ರ ಹೊರಡಿಸಲು ಸೂಚಿಸಿದ್ದಾರೆ ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ತಿಳಿಸಿದ್ದಾರೆ.ವಿವಿಧ ಯೋಜನೆಗಳಲ್ಲಿ ಉತ್ತಮ ಪ್ರಗತಿ ಸಾಧಿಸಲು ಇಲಾಖಾಧಿಕಾರಿಗಳು ಹಾಗೂ ಇಲಾಖೆಯ ಎಲ್ಲಾ ಸಿಬ್ಬಂದಿಯ ಅಚಲವಾದ ಬದ್ಧತೆ, ನಿರಂತರ ಶ್ರಮ ಹಾಗೂ ಸಮನ್ವಯದ ಕಾರ್ಯಪದ್ಧತಿಗೆ ಶ್ಲಾಘನೆ ಸಲ್ಲಬೇಕು. ನಿಮ್ಮ ತಂಡದ ಈ ಉತ್ಸಾಹ ಹಾಗೂ ಪರಿಶ್ರಮ ಈ ಯಶಸ್ಸಿಗೆ ನಾಂದಿಯಾಗಿದೆ. ಜಿಲ್ಲೆಯ ಸಮಗ್ರ ಅಭಿವೃದ್ಧಿಯನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಭವಿಷ್ಯದಲ್ಲಿಯೂ ಇಂತಹುದೇ ಉತ್ಸಾಹದಿಂದ ಕಾರ್ಯನಿರ್ವಹಣೆ ನಿರೀಕ್ಷಿಸುತ್ತೇನೆ. ಪ್ರಗತಿ ಪಥದಲ್ಲಿ ತಮ್ಮ ಜಿಲ್ಲೆಯ ಸಾಧನೆ ಇತರೆ ಜಿಲ್ಲೆಗಳಿಗೂ ಪ್ರೇರಣೆಯಾಗಿದೆ ಎಂದು ಪತ್ರಮುಖೇನ ತಿಳಿಸಿದ್ದಾರೆ.