ಸಾರಾಂಶ
ಶುಕ್ರವಾರ ಈ ಕುರಿತು ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಡಾ. ಮಹೇಶ್ ಜೋಶಿ ಅವರಿಗೆ ಸ್ಟಾರ್ ಚಂದ್ರು ಅವರು ಮನವಿ ಸಲ್ಲಿಸಿದ್ದಾರೆ. ಸಾಹಿತ್ಯ ಸಮ್ಮೇಳನದಲ್ಲಿ ರಾಜ್ಯ, ಹೊರರಾಜ್ಯದ ಸಾಹಿತ್ಯ ಪ್ರೇಮಿಗಳಿಗೆ ಆಹ್ವಾನ ನೀಡಿದಂತೆ ವೃತ್ತಿ ಬದುಕಿನ ಅನಿವಾರ್ಯತೆಗಾಗಿ ವಿದೇಶ, ಹೊರ ರಾಜ್ಯಗಳಲ್ಲಿ ನೆಲೆಸಿ ಸಾಧನೆ ಮಾಡಿರುವ ಮಂಡ್ಯದ ಮಕ್ಕಳನ್ನು ತವರಿನ ನೆಲದಲ್ಲಿ ಗೌರವಿಸುವುದು ನಮ್ಮ ಕರ್ತವ್ಯ ಎಂದಿದ್ದಾರೆ.
ಕನ್ನಡಪ್ರಭ ವಾರ್ತೆ ಬೆಂಗಳೂರು
ಮಂಡ್ಯದಲ್ಲಿ ಡಿಸೆಂಬರ್ 20ರಿಂದ 22ರವರೆಗೆ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಹೊರ ರಾಜ್ಯ ಹಾಗೂ ವಿದೇಶದಲ್ಲಿ ನೆಲೆಸಿ, ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಮಂಡ್ಯದ ಪ್ರತಿಭೆಗಳನ್ನು ಆಹ್ವಾನಿಸಿ ಗೌರವಿಸಬೇಕೆಂದು ಮಂಡ್ಯ ಜಿಲ್ಲಾಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಉಪಾಧ್ಯಕ್ಷ ವೆಂಕಟರಮಣೇಗೌಡ (ಸ್ಟಾರ್‌ಚಂದ್ರು) ಒತ್ತಾಯಿಸಿದ್ದಾರೆ.ಶುಕ್ರವಾರ ಈ ಕುರಿತು ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಡಾ. ಮಹೇಶ್ ಜೋಶಿ ಅವರಿಗೆ ಸ್ಟಾರ್ ಚಂದ್ರು ಅವರು ಮನವಿ ಸಲ್ಲಿಸಿದ್ದಾರೆ. ಸಾಹಿತ್ಯ ಸಮ್ಮೇಳನದಲ್ಲಿ ರಾಜ್ಯ, ಹೊರರಾಜ್ಯದ ಸಾಹಿತ್ಯ ಪ್ರೇಮಿಗಳಿಗೆ ಆಹ್ವಾನ ನೀಡಿದಂತೆ ವೃತ್ತಿ ಬದುಕಿನ ಅನಿವಾರ್ಯತೆಗಾಗಿ ವಿದೇಶ, ಹೊರ ರಾಜ್ಯಗಳಲ್ಲಿ ನೆಲೆಸಿ ಸಾಧನೆ ಮಾಡಿರುವ ಮಂಡ್ಯದ ಮಕ್ಕಳನ್ನು ತವರಿನ ನೆಲದಲ್ಲಿ ಗೌರವಿಸುವುದು ನಮ್ಮ ಕರ್ತವ್ಯ ಎಂದಿದ್ದಾರೆ.
ಮನವಿ ಸ್ವೀಕರಿಸಿದ ಡಾ. ಮಹೇಶ್ ಜೋಶಿ ಅವರು, ಈ ಕುರಿತು ಮಾಹಿತಿ ಪಡೆದು ಅವರನ್ನು ಆಹ್ವಾನಿಸುವಂತಹ ಕೆಲಸ ಮಾಡುವುದಾಗಿ ಭರವಸೆ ನೀಡಿದ್ದಾರೆ. ಫೋಟೋ: ಬೆಂಗಳೂರು ಚಾಮರಾಜಪೇಟೆಯಲ್ಲಿನ ಕನ್ನಡ ಸಾಹಿತ್ಯ ಪರಿಷತ್ತಿನ ಕೇಂದ್ರ ಕಚೇರಿಯಲ್ಲಿ ಪರಿಷತ್ತಿನ ಅಧ್ಯಕ್ಷ ಡಾ। ಮಹೇಶ್ ಜೋಶಿ ಅವರನ್ನು ಸ್ಟಾರ್‌ಚಂದ್ರು ಭೇಟಿ ಮಾಡಿ ಮನವಿ ಸಲ್ಲಿಸಿದರು.