ಕನ್ನಡಪ್ರಭ ವಾರ್ತೆ ಕಾಗವಾಡಮಧ್ಯ ಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮವಾಗಿ ಇಂಧನ ಹಾಗೂ ಗ್ಯಾಸ್ ಕೊರತೆ ಉಂಟಾಗುತ್ತಿದೆ. ಇಂತಹ ಗಂಭೀರ ವಿಷಯಗಳ ಕಡೆಗೆ ಸದನದಲ್ಲಿ ಹೆಚ್ಚಿನ ಗಮನ ಹರಿಸಬೇಕೇ ನಿನಃ ಪ್ರಸ್ತುತ ಜಾಗತಿಕ ಪರಿಸ್ಥಿತಿಯಲ್ಲಿ ಐಪಿಎಲ್ ಟಿಕೆಟ್ ವಿಚಾರವನ್ನು ಸದನದಲ್ಲಿ ಚರ್ಚಿಸುವುದು ಅನಗತ್ಯ ಎಂದು ಅಥಣಿ ಶಾಸಕ ಲಕ್ಷ್ಮಣ ಸವದಿ ಅಭಿಪ್ರಾಯಪಟ್ಟರು.
ಕನ್ನಡಪ್ರಭ ವಾರ್ತೆ ಕಾಗವಾಡಮಧ್ಯ ಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮವಾಗಿ ಇಂಧನ ಹಾಗೂ ಗ್ಯಾಸ್ ಕೊರತೆ ಉಂಟಾಗುತ್ತಿದೆ. ಇಂತಹ ಗಂಭೀರ ವಿಷಯಗಳ ಕಡೆಗೆ ಸದನದಲ್ಲಿ ಹೆಚ್ಚಿನ ಗಮನ ಹರಿಸಬೇಕೇ ನಿನಃ ಪ್ರಸ್ತುತ ಜಾಗತಿಕ ಪರಿಸ್ಥಿತಿಯಲ್ಲಿ ಐಪಿಎಲ್ ಟಿಕೆಟ್ ವಿಚಾರವನ್ನು ಸದನದಲ್ಲಿ ಚರ್ಚಿಸುವುದು ಅನಗತ್ಯ ಎಂದು ಅಥಣಿ ಶಾಸಕ ಲಕ್ಷ್ಮಣ ಸವದಿ ಅಭಿಪ್ರಾಯಪಟ್ಟರು.
ಕಾಗವಾಡ ವಿಧಾನಸಭಾ ಮತಕ್ಷೇತ್ರದ ವ್ಯಾಪ್ತಿಯ ಜಂಬಗಿ ಗ್ರಾಮದಲ್ಲಿ ಅವರ ಜನ್ಮ ದಿನದ ನಿಮಿತ್ಯ ಅಧೀರಾ ಫೌಂಡೇಶನ್ ಅಧ್ಯಕ್ಷ ಪ್ರದೀಪ ಜಾಧವ ಕನ್ನಡ ಹಾಗೂ ಮರಾಠಿ ಪ್ರಾಥಮಿಕ ಶಾಲೆಗೆ ನೀಡಿದ 11 ಕಂಪ್ಯೂಟರ್ ಮತ್ತು ಶುದ್ದ ಕುಡಿಯುವ ನೀರಿನ ಘಟಕಗಳನ್ನು ವಿತರಿಸಿ ಮಾತನಾಡಿದರು. ಸದ್ಯಕ್ಕೆ ಉಭಯ ದೇಶಗಳ ಮಧ್ಯೆ ನಡೆಯುತ್ತಿರುವ ಕದನ ವಿರಾಮವೇ ಉತ್ತಮ ಪರಿಹಾರವಾಗಿದೆ. ಯುದ್ಧದ ಪರಿಣಾಮ ವಿಶ್ವದಾದ್ಯಂತ ಕಂಡು ಬರುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದರು.ಕಾಗವಾಡ ಶಾಸಕ ರಾಜು ಕಾಗೆ-ಲಕ್ಷ್ಮಣ ಸವದಿ ದೋಸ್ತಿಯಲ್ಲಿ ಬಿರುಕು ಮೂಡಿದೆಯೆಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ನಮ್ಮಿಬ್ಬರ ಮಧ್ಯೆ ಯಾವುದೇ ರೀತಿಯ ಭಿನ್ನಾಭಿಪ್ರಾಯಗಳು ಇಲ್ಲವೆಂದು ಸ್ಪಷ್ಟಪಡಿಸಿದರು. ಕಾಗೆ ಅವರ ಆರೋಗ್ಯ ಸರಿಯಿಲ್ಲದ ಕಾರಣದಿಂದ ಕೆಲವು ಕಾರ್ಯಕ್ರಮಗಳಲ್ಲಿ ಭಾಗವಹಿಸಿಲ್ಲ. ಕಳೆದ 20 ವರ್ಷಗಳ ಸಂಬಂಧದಲ್ಲಿ ಯಾವುದೇ ಬಿರುಕು ಮೂಡಿಲ್ಲ, ಮೂಡುವ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ಹೇಳಿದರು.ರಾಜ್ಯದಲ್ಲಿ ನಡೆಯುತ್ತಿರುವ ದಾವಣಗೆರೆ ಹಾಗೂ ಬಾಗಲಕೋಟೆ ಉಪಚುನಾವಣೆ ಕುರಿತು ಮಾತನಾಡಿದ ಶಾಸಕ ಲಕ್ಷ್ಮಣ ಸವದಿ, ಕಾಂಗ್ರೆಸ್ ಪಕ್ಷಕ್ಕೆ ಗೆಲುವು ನಿಶ್ಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಸೋಮವಾರದಿಂದ ಪ್ರಚಾರ ಕಾರ್ಯದಲ್ಲಿ ಭಾಗವಹಿಸಿ ಅಭ್ಯರ್ಥಿಗಳ ಪರ ಮತಯಾಚನೆ ಮಾಡುವುದಾಗಿ ತಿಳಿಸಿದರು. ಜೊತೆಗೆ ಅಥಣಿ ಖಿಳೆಗಾಂವಿ ರಾಜ್ಯ ಹೆದ್ದಾರಿ ಅಭಿವೃದ್ಧಿಗೆ ಈಗಾಗಲೇ ₹ 3 ಕೋಟಿ ಅನುದಾನ ಬಿಡುಗಡೆಯಾಗಿದ್ದು, ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದೆ, ಶೀಘ್ರದಲ್ಲೇ ಕಾಮಗಾರಿ ಆರಂಭವಾಗಲಿದೆ ಎಂದರು.ಅಮ್ಮಾಜೇಶ್ವರಿ ಏತ ನೀರಾವರಿ ಯೋಜನೆಯ ಕಾಮಗಾರಿ ಜೂನ್ ಇಲ್ಲವೇ ಜುಲೈ ತಿಂಗಳಲ್ಲಿ ಪೂರ್ಣಗೊಳ್ಳುವ ಸಾಧ್ಯತೆ ಇದೆ. ಜೊತೆಗೆ ಕೃಷಿ ಕಾಲೇಜಿನ ಶಿಲಾನ್ಯಾಸಕ್ಕೆ ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿಗಳನ್ನು ಆಹ್ವಾನಿಸಿ ಉದ್ಘಾಟಿಸುವುದಾಗಿ ತಿಳಿಸಿದರು. ಅಥಣಿ ಕ್ಷೇತ್ರದಲ್ಲಿ ನೀರಿನ ಸಮಸ್ಯೆಯಾಗದಂತೆ ಕ್ರಮ ಕೈಗೊಂಡು ಹಸಿರು ಕ್ರಾಂತಿ ಮಾಡಿದ್ದೇನೆ. ಜನರಿಗೆ ನೀಡಿದ ಭರವಸೆ ಪೂರ್ಣಗೊಳಿಸಿದ್ದೇನೆ ಎಂದು ತಿಳಿಸಿದರು.ಕಾರ್ಯಕ್ರಮದಲ್ಲಿ ಶಿರೂದರ ಕೋಂಡಿಭಾ ಮಹಾರಾಜರು ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದರು. ಅಧಿರಾ ಫೌಂಡೇಶನ್‌ದ ಅಧ್ಯಕ್ಷ ಪ್ರದೀಪ ಜಾಧವ ಅಧ್ಯಕ್ಷತೆ ವಹಿಸಿದ್ದರು. ಜಿಪಂ ಮಾಜಿ ಸದಸ್ಯ ವಿನಾಯಕ ಬಾಗಡಿ, ಅಥಣಿ ಪುರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ದತ್ತಾ ವಾಸ್ಟರ್, ಮುಖಂಡರಾದ ಯಶವಂತ ಪಾಟೀಲ, ನಿಜಗುಣಿ ಮಗದುಮ್, ರಾವಸಾಬ ಬೇವನೂರ, ವಿಶಾಲ ನಿಂಬಾಳ, ಶಿವಾನಂದ ಮಗದುಮ್, ಸಂಜಯ ಅದಾಟೆ, ಪ್ರಶಾಂತ ಆಜೂರ, ರಾಜು ಗುಡೋಡಗಿ, ಅಬ್ದುಲ್ ಮುಲ್ಲಾ, ಅಣ್ಣಾಸಾಬ ಮಿಸಾಳ, ಪೋಪಟ ಜಾಧವ, ಡಾ,ಶ್ರೀಕಾಂತ ಕುನ್ನೂರ, ಶಶಿಧರ ಕುಂಬಾರ, ತುಕಾರಾಮ ಸೇಳಕೆ, ವಿಜಯ ಪಾಟೀಲ, ಸಂಜಯ ಉಮರೆ, ಸಿದ್ದಾರ್ಥ ಅವಳೇಕರ, ಬಾಬು ಮೆಂಡಿಗೇರಿ, ಮಹಾದೇವ ಬಿಳಿಕುರಿ ಸೇರಿದಂತೆ ಅನೇಕರು ಹಾಜರಿದ್ದರು.----------ಕೋಟ
್ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಅಲೆ ಇದೆ. ಹೀಗಾಗಿ ದಾವಣಗೆರೆ ಹಾಗೂ ಬಾಗಲಕೋಟೆ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸುತ್ತಾರೆ. ಶಾಸಕ ರಾಜು ಕಾಗೆ- ಲಕ್ಷ್ಮಣ ಸವದಿ ಇಬ್ಬರ ದೋಸ್ತಿಯಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಕಳೆದ 20 ವರ್ಷಗಳ ಸಹೋದರರ ಸಂಬಂಧದಲ್ಲಿ ಯಾವುದೇ ಬಿರುಕು ಮೂಡಿಲ್ಲ, ಮೂಡುವ ಪ್ರಶ್ನೆಯೂ ಉದ್ಭವಿಸುವುದಿಲ್ಲ.
ಲಕ್ಷ್ಮಣ ಸವದಿ, ಅಥಣಿ ಶಾಸಕರು.