ಸಾರಾಂಶ
ನುಗ್ಗೇಹಳ್ಳಿ: ತಾಲೂಕಿನಲ್ಲಿ ಕ್ಷೇತ್ರದ ಶಾಸಕರಾಗಿರುವ ಸಿ ಎನ್ ಬಾಲಕೃಷ್ಣ ಅವರ ಪರಿಶ್ರಮದಿಂದ ನೀರಾವರಿ ಯೋಜನೆಗಳು ಪೂರ್ಣಗೊಂಡು ರೈತರಿಗೆ ಹೆಚ್ಚಿನ ಅನುಕೂಲವಾಗಿದೆ ಎಂದು ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯೆ ಕುಸುಮ ಬಾಲಕೃಷ್ಣ ತಿಳಿಸಿದರು.
ಹೋಬಳಿ ಕೇಂದ್ರದ ಪುರಾಣ ಪ್ರಸಿದ್ಧ ಶ್ರೀ ಲಕ್ಷ್ಮಿ ನರಸಿಂಹ ಸ್ವಾಮಿ ಬ್ರಹ್ಮರಥೋತ್ಸವದಲ್ಲಿ ಪಾಲ್ಗೊಂಡು ಮಾತನಾಡಿದರು. ಶಾಸಕರ ಪರಿಶ್ರಮದಿಂದ ತಾಲೂಕಿನ ಅನೇಕ ನೀರಾವರಿ ಯೋಜನೆಗಳು ಪೂರ್ಣಗೊಂಡು ನೂರಾರು ಕೆರೆಕಟ್ಟೆಗಳು ತುಂಬಿವೆ. ಇದರಿಂದ ರೈತರಿಗೆ ಹೆಚ್ಚಿನ ಅನುಕೂಲವಾಗಿದೆ. ಈ ಬೇಸಿಗೆಯಲ್ಲೂ ತಾಲೂಕಿನ ಬಹುತೇಕ ಕೆರೆಗಳಲ್ಲಿ ನೀರು ಹೆಚ್ಚಿನ ಪ್ರಮಾಣದಲ್ಲಿದೆ. ಇದರಿಂದ ಬಹುತೇಕ ಕೊಳವೆ ಬಾವಿಗಳಲ್ಲಿ ನೀರು ಬರುತ್ತಿದೆ. ಇದರಿಂದ ಬೇಸಿಗೆಕಾಲದಲ್ಲೂ ರೈತರು ಬೆಳೆ ಬೆಳೆಯುವ ಮೂಲಕ ಲಾಭಗಳಿಸಲು ಸಹಕಾರಿಯಾಗಿದೆ. ನೀರಾವರಿ ಯೋಜನೆ ಅಭಿವೃದ್ಧಿ ಕಾರ್ಯಕ್ರಮಗಳಲ್ಲಿ ಪ್ರಮುಖ ಯೋಜನೆಯಾಗಿದೆ ಎಂದರು.ನುಗ್ಗೇಹಳ್ಳಿ ಏತ ನೀರಾವರಿ ಯೋಜನೆ ಪೂರ್ಣಗೊಳ್ಳಲು ಈ ಭಾಗದ ಅನೇಕ ಮುಖಂಡರ ಪರಿಶ್ರಮದ ಜೊತೆಗೆ ಶಾಸಕರ ಸಹಕಾರವು ಮುಖ್ಯವಾಗಿದೆ. ಈ ಭಾಗದಲ್ಲಿ ಈ ಭಾಗದ ಅನೇಕ ಕೆರೆಗಳನ್ನು ತುಂಬಿಸುವ ಮೂಲಕ ಶಾಸಕರು ಕೊಟ್ಟ ಮಾತನ್ನು ಉಳಿಸಿಕೊಂಡಿದ್ದಾರೆ. ನುಗ್ಗೇಹಳ್ಳಿ ಹೋಬಳಿ ಕೇಂದ್ರವು ಧಾರ್ಮಿಕವಾಗಿ ತನ್ನದೇ ಆದ ಇತಿಹಾಸವನ್ನು ಹೊಂದಿದ್ದು, ಇಲ್ಲಿರುವ ಶ್ರೀ ಲಕ್ಷ್ಮಿ ನರಸಿಂಹಸ್ವಾಮಿ ಹಾಗೂ ಸದಾಶಿವ ಸ್ವಾಮಿ ಚಂದ್ರಮೌಳೇಶ್ವರ ಸ್ವಾಮಿ ದೇವಾಲಯಗಳು ಕೇವಲ ಕರ್ನಾಟಕ ರಾಜ್ಯವಲ್ಲದೆ ಅಂತಾರಾಷ್ಟ್ರೀಯ ಮಟ್ಟದಲ್ಲೂ ಹೆಚ್ಚು ಪ್ರಸಿದ್ಧಿ ಹೊಂದಿವೆ. ಈ ಕಾರಣದಿಂದಲೇ ಸಾವಿರಾರು ಜನ ರಥೋತ್ಸವದಲ್ಲಿ ಪಾಲ್ಗೊಂಡಿರುವುದು ಸಾಕ್ಷಿಯಾಗಿದೆ. ಈ ಕ್ಷೇತ್ರವನ್ನು ಇನ್ನೂ ಹೆಚ್ಚು ಪ್ರವಾಸಿ ಧಾರ್ಮಿಕ ಕ್ಷೇತ್ರವನ್ನಾಗಿ ಅಭಿವೃದ್ಧಿಪಡಿಸಲು ಶಾಸಕರಿಗೆ ಮನವಿ ಮಾಡುವುದಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ದೇವಾಲಯ ವ್ಯವಸ್ಥಾಪನ ಸಮಿತಿ ಅಧ್ಯಕ್ಷೆ ಛಾಯ ಕೃಷ್ಣಮೂರ್ತಿ, ದೇವಾಲಯದ ಪ್ರಧಾನ ಅರ್ಚಕ ರಾಮ ಭಟ್ಟರು, ಪ್ರಮುಖರಾದ ಪ್ರಸನ್ನ ಕೇಶವಾಚಾರ್, ಜಗನ್ನಾಥ್, ಮುಖಂಡರಾದ ದೊರೆಸ್ವಾಮಿ, ಕೃಷಿ ಪತ್ತಿನ ಅಧ್ಯಕ್ಷ ಹುಲಿಕೆರೆ ಸಂಪತ್ ಕುಮಾರ್, ಗ್ರಾಮ ಪಂಚಾಯಿತಿ ಸದಸ್ಯರಾದ ಶಿವಕುಮಾರ್, ಹೊನ್ನೇಗೌಡ, ಎನ್ಎಸ್ ಮಂಜುನಾಥ್, ಎಲ್ಲಪ್ಪ, ಪ್ರಮುಖರಾದ ಸಬ್ಸಿಡಿ ದೇವರಾಜ್, ಫೈನಾನ್ಸ್ ಪ್ರಕಾಶ್, ಶಶಿ ದೇವರಾಜ್, ಚಂದ್ರು ಯಾದವ್, ಚಂದ್ರು, ಪಟೇಲ್ ಕುಮಾರ್, ಮುರಳಿ, ಕಿರಣ್ ಗವಿರಂಗಯ್ಯ, ಆರ್. ರುದ್ರಸ್ವಾಮಿ, ಎಲ್ಲಪ್ಪ, ಸೇರಿದಂತೆ ಇತರರು ಹಾಜರಿದ್ದರು.;Resize=(128,128))
;Resize=(128,128))
;Resize=(128,128))
;Resize=(128,128))
;Resize=(128,128))